
Chitradurga: ಲಾರಿಗೆ ಅಂಬ್ಯುಲೆನ್ಸ್ ಢಿಕ್ಕಿ; ತಮಿಳುನಾಡು ಮೂಲದ ಮೂವರು ಸಾವು
Team Udayavani, Jun 8, 2023, 9:16 AM IST

ಚಿತ್ರದುರ್ಗ: ನಗರದ ಹೊರವಲಯದ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಅಂಬ್ಯುಲೆನ್ಸ್ ಢಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಮೃತಪಟ್ಟ ಘಟನೆ ಜೂ.8ರ ಗುರುವಾರ ನಸುಕಿನಲ್ಲಿ ನಡೆದಿದೆ.
ಅಂಬುಲೆನ್ಸ್ ನಲ್ಲಿದ್ದ ತಮಿಳುನಾಡಿನ ತಿರುನಲ್ವೇಲಿಯ ಕನಕಮಣಿ(72), ಆಕಾಶ್ (17) ಮತ್ತು ಅಂಬುಲೆನ್ಸ್ ಚಾಲಕ ಮೃತಪಟ್ಟವರು.
ಗುಜರಾತಿನ ಅಹಮದಾಬಾದ್ ನಿಂದ ತಮಿಳುನಾಡಿಗೆ ಅಂಬ್ಯುಲೆನ್ಸ್ ನಲ್ಲಿ ಶವ ಸಾಗಿಸುತ್ತಿದ್ದ ವೇಳೆ, ಶವದ ಜೊತೆಗಿದ್ದವರು ಶವವಾಗಿದ್ದಾರೆ.
ಅಂಬುಲೆನ್ಸ್ ನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಚಿಕಿತ್ಸೆಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾತ್ರಿಯಿಡೀ ಅಂಬ್ಯುಲೆನ್ಸ್ ಚಲಾಯಿಸಿದ್ದು, ಬೆಳಗಿನ ಜಾವದ ನಿದ್ದೆಯ ಮಂಪರಿನಲ್ಲಿ ಅಂಬ್ಯುಲೆನ್ಸ್ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಸಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Holalkere: ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ಗರಿಮೆ ಪುರಸಭೆಯ ಪೌರಕಾರ್ಮಿಕರಿಗೆ ಸಲ್ಲಬೇಕು

Siddaramaiah ವಿರುದ್ಧ “ಹರಿ’ಹಾಯುವುದು ಸಲ್ಲ: ಈಶ್ವರಾನಂದಪುರಿ ಸ್ವಾಮೀಜಿ

Chitradurga: ಕುರಿ ಕಾಯುತ್ತಿದ್ದ ಬಾಲಕನನ್ನು ಮತ್ತೆ ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ

Aam Aadmi Party “ಗ್ಯಾರಂಟಿ ‘ ಕದ್ದ ಕಾಂಗ್ರೆಸ್: ಮುಖ್ಯಮಂತ್ರಿ ಚಂದ್ರು
MUST WATCH
ಹೊಸ ಸೇರ್ಪಡೆ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?