
ಅತ್ಯಾಚಾರ ಆರೋಪಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಿ : ಉಪ್ಪಾರ ನೌಕರರ ಸಂಘದ ಒತ್ತಾಯ
Team Udayavani, Jul 25, 2021, 6:53 PM IST

ಚಿತ್ರದುರ್ಗ : ತಾಲೂಕಿನ ಭರಮಸಾಗರ ವ್ಯಾಪ್ತಿಯ ಇಸಾಮುದ್ರಾ ಗ್ರಾಮದ ನಮ್ಮ ಉಪ್ಪಾರ ಸಮುದಾಯದ ೧೩ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಉಪ್ಪಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಪ್ಪ ಒತ್ತಾಯಿಸಿದರು.
ಭಾನುವಾರ ಚಿತ್ರದುರ್ಗ ತಾಲೂಕಿನ ಭರಮಸಾಗರ ವ್ಯಾಪ್ತಿಯ ಇಸಾಮುದ್ರಾ ಗ್ರಾಮಕ್ಕೆ ಭೇಟಿ ನೀಡಿ ಬಾಲಕಿಯನ್ನು ಕಳೆದಕೊಂಡ ಪೋಷಕರಿಗೆ ವೈಯಕ್ತಿಕ ಧನಸಹಾಯ ನೀಡಿ ಸಾಂತ್ವನ ಹೇಳಿ ಮಾತನಾಡಿದ ಅವರು ನಮ್ಮ ಉಪ್ಪಾರ ಸಮುದಾಯದ 13 ವರ್ಷದ ಶಶಿಕಲಾ ಎಂಬ ಅಪ್ರಾಪ್ತ ಬಾಲಕಿ ಬಯಲು ಶೌಚಕ್ಕೆ ತೆರಳಿದ ಸಮಯದಲ್ಲಿ ದುಷ್ಕರ್ಮಿಗಳು ಹಾಡುಹಗಲೇ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಖಂಡನೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸವಂತೆ ಆಗಿದೆ. ಇಂತಹ ಕೃತ್ಯವೆಸಗಿದ ದುಷ್ಕರ್ಮಿಗಳು ಯಾರೇ ಆಗಿದ್ದರೂ ಅವರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಿ ಕಾನೂನು ಅಡಿಯಲ್ಲಿ ಸೂಕ್ತ ಶಿಕ್ಷೆ ನೀಡಬೇಕು. ಆ ಮೂಲಕ ಮಗಳನ್ನು ಕಳೆದುಕೊಂಡ ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ :ಅರಬೈಲ್, ಗುಳ್ಳಾಪುರ : ನೆರೆಯಿಂದ ಹಾನಿಗೊಳಗಾದ ರಸ್ತೆ, ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಕೊಡಗು ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಜಯ: ಕುವೈತ್ ನಲ್ಲಿ ಸಿಲುಕಿದ್ದ ಮಹಿಳೆ ಸುರಕ್ಷಿತವಾಗಿ ತಾಯ್ನಾಡಿಗೆ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಉದ್ದಿಮೆಗಳ ಖಾತಾ ಬದಲಾವಣೆ ಸಮಸ್ಯೆಗೆ ತ್ವರಿತ ಪರಿಹಾರ: ಅತಿಕ್

ನಲುಗಿದ ನೇಮಕ: ಶಿಕ್ಷಕರ ನೇಮಕಾತಿ: ತಕರಾರು ಅರ್ಜಿಗೆ ಹೈಕೋರ್ಟ್ ಪುರಸ್ಕಾರ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
