ನಾಗರಿಕರೇ ಎಲ್ಲೆಂದರಲ್ಲಿ ಉಗುಳುವ ಅಭ್ಯಾಸ ಬಿಡಿ

ಜಾಗೃತಿ ಜಾಥಾಗೆ ಚಾಲನೆ ನೀಡಿದ ವಿಶೇಷ ಆಯುಕ್ತ(ಆರೋಗ್ಯ) ಡಿ.ರಂದೀಪ್‌ ಸಲಹೆ

Team Udayavani, Aug 7, 2021, 1:41 PM IST

spitting

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರು ಉಗುಳುವ ಅಭ್ಯಾಸವನ್ನು ಬಿಡಬೇಕು ಎಂದು ಪಾಲಿಕೆ ವಿಶೇಷ ಆಯುಕ್ತ(ಆರೋಗ್ಯ) ಡಿ.ರಂದೀಪ್‌ ನಗರದ ಜನತೆಗೆ ಸಲಹೆ ನೀಡಿದರು.

ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಶುಕ್ರವಾರ ಹಮ್ಮಿಕೊಂಡಿದ್ದ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಲ್ಲಿಸಿ ಎಂಬ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲೆಂದರಲ್ಲಿ ಉಗುಳುವುದರಿಂದ ಕೊರೊನಾ, ಕ್ಷಯ ರೋಗ ಸೇರಿದಂತೆ ಇನ್ನಿತರೆ ರೋಗಗಳು ಹರಡಲಿವೆ ಎಂದರು. ನಗರದ ಪಾದಚಾರಿ ಮಾರ್ಗ, ಬಸ್‌ ನಿಲ್ದಾಣ, ಬಸ್‌ ತಂಗುದಾಣ, ಟ್ರಾಫಿಕ್‌ ಸಿಗ್ನಲ್‌ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಉಗುಳುವುದರಿಂದ ಅಲ್ಲಿ ಸ್ವಚ್ಛತೆ ಹಾಳಾಗುವುದರ ಜತೆಗೆ ಸೌಂದರ್ಯವೂ ಹಾಳಾಗುತ್ತದೆ. ಅಲ್ಲದೆ ನೋಡುಗರಿಗೆ ಕೆಟ್ಟದಾಗಿ ಕಾಣುತ್ತದೆ. ಈನಿಟ್ಟಿನಲ್ಲಿ ಎಲ್ಲೂ ಉಗುಳಬಾರದು ಎಂಬುದರ ಬಗ್ಗೆ ನಾಗರಿಕರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳವ ಜವಾಬ್ದಾರಿ ಎಲ್ಲರ ಮೇಲಿದೆ. ಯಾರಾದರೂ ಸಾರ್ವಜನಿಕ ಸ್ಥಳದಲ್ಲಿ ಉಗುಳುತ್ತಿದ್ದರೆ ಅವರಿಗೆ ಉಗುಳುವುದರಿಂದ ರೋಗಳಗಳು ಹರಡಿವೆ. ಆದ್ದರಿಂದ ಉಗುಳುವುದನ್ನು ಬಿಡಬೇಕು.ಜತೆಗೆ ಇತರರಿಗೂ ಉಗುಳಬೇಡಿ ಎಂದು ಅರಿವು ಮೂಡಿಸುವ ಕೆಲಸ ಆಗಬೇಕಿದೆ. ನಗರವನ್ನು ಸ್ವಚ್ಛವಾಗಿಟ್ಟುಕೊಂಡರೆ ಸ್ವಚ್ಛ ಸರ್ವೇಕ್ಷಣ್‌ ಅಭಿಯಾನದಲ್ಲಿ ಉತ್ತಮ ಅಂಕ ಪಡೆಯಬಹುದು. ಇದಕ್ಕೆ ನಾಗರಿಕರ ಸಹಕಾರ ಅಗತ್ಯ ಎಂದು ಹೇಳಿದರು.

20ಕ್ಕೂಹೆಚ್ಚು ಸಂಘ-ಸಂಸ್ಥೆಭಾಗಿ: ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಲ್ಲಿಸಿ ಎಂಬ ಜಾಗೃತಿ ಜಾಥಾವು ರೋಟರಿ, ನಮ್ಮ ಬೆಂಗಳೂರು ಫೌಂಡೇಷನ್‌, ಬ್ಯೂಟಿಫ‌ುಲ್‌ ಬೆಂಗಳೂರು ಹಾಗೂ ಇನ್ನಿತರೆ 20 ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿದೆ. ಇದರಲ್ಲಿ ಪಾಲಿಕೆಯ ಅಧಿಕಾರಿಗಳು ಹಾಗೂ ಮಾರ್ಷಲ್‌ಗ‌ಳು ಸಹ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ನೀಡಿದ ಖಾತೆಗೆ ಶಕ್ತಿ ತುಂಬಿ ಕೆಲಸ ಮಾಡುವೆ: ಸಚಿವ ವಿ.ಸೋಮಣ್ಣ

100 ರೂ. ದಂಡ
ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳು, ಘಟಕ, ಕಾರ್ಯಾಗಾರ ಮತ್ತು ಕಚೇರಿಯ ಪ್ರದೇಶಗಳಲ್ಲಿ ಉಗುಳುವವರಿಗೆ 100 ರೂ. ದಂಡ
ವಿಧಿಸಲಾಗುತ್ತಿದೆ. ಅದರಂತೆ 2020ರ ಜೂನ್‌ ನಿಂದ 2021ರ ಮಾರ್ಚ್‌ವರೆಗೆ 4,66,500 ರೂ. ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ.
ಅದೇ ರೀತಿ, 2021ರ ಏಪ್ರಿಲ್‌ನಿಂದ 2021ರ ಜೂನ್‌ವರೆಗೆ 17,100 ರೂ. ದಂಡ ವಿಧಿಸಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ವಿಶೇಷ ವಾಹನಕ್ಕೆ ಚಾಲನೆ
ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳುವುದನ್ನು ನಿಷೇಧಿಸುವ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸುವ ವಿಶೇಷ ವಾಹನಕ್ಕೆ ಶುಕ್ರವಾರ ಕೆಎಸ್‌ಆರ್‌ಟಿಸಿಯ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಎಸ್‌ಆರ್‌ಟಿಸಿ ಕೆಂಪೇಗೌಡ ಬಸ್‌ ನಿಲ್ದಾಣದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್‌.ಆರ್‌. ಚಂದ್ರಶೇಖರ್‌, ಕೊರೊನಾ ಮಹಾಮಾರಿಯು ಪ್ರಪಂಚವನ್ನೇ ತಲ್ಲಣ
ಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಇಂತಹ ಅಭಿಯಾನವನ್ನು ಎಲ್ಲರೂ ಪ್ರೋತ್ಸಾಹಿಸಬೇಕಾಗಿದೆ. ಹಾಗೂ ಈ ಸಂದೇಶವನ್ನು ಎಲ್ಲಾ ಕಡೆಗೂ ಸಾರಬೇಕು ಎಂದುಮನವಿಮಾಡಿದರು.

ನಿಗಮದ ಪರಿಸರ ಅಧಿಕಾರಿ ಸತೀಶ್‌,”Beautiful Bangalore’ ತಂಡದ ಸಂಸ್ಥಾಪಕರಾದ ಒಡೆಟ್‌ ಕಾತರಕ್‌ ಹಾಗೂ “ಸಾರೆ ಜಹಾ ಸೆ ಅಚ್ಛಾ’ ತಂಡದ ಸಂಸ್ಥಾಪಕ ನಿರ್ದೇಶಕರಾದ ರಾಜಾ ನರಸಿಂಹನ್‌ ಹಾಗೂ ಪ್ರೀತಿ ರಾಜಾ ಮತ್ತು ರೋಟರಿ ಕ್ಲಬ್‌ ವತಿಯಿಂದ ಪ್ರಭು ಕಾಶೀನಾಥ್‌ ಜಾಗೃತಿ ಮೂಡಿಸಿದರು. ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರ ವಿಡಿಯೊ ಸಂದೇಶವನ್ನು ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.