Karnataka: ಹೈಕೋರ್ಟ್ಗೆ ನೂತನ ಸಿಜೆ ಅಂಜಾರಿಯಾ
Team Udayavani, Feb 7, 2024, 11:05 PM IST
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ಗುಜರಾತ್ ಹೈಕೋರ್ಟ್ನ ಹಿರಿಯ ನ್ಯಾ| ಎನ್.ವಿ. ಅಂಜಾರಿಯಾ ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದಲ್ಲಿ ಬುಧವಾರ ನಡೆದ ಕೊಲಿಜಿಯಂ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಾಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಕನ್ನಡಿಗರೇ ಆದ ಪಿ.ಎಸ್. ದಿನೇಶ್ ಕುಮಾರ್ ಅವರ ಸೇವಾವಧಿ ಫೆ. 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ನ್ಯಾ| ಎನ್.ವಿ. ಅಂಜಾರಿಯಾ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ. ಹಾಲಿ ಮುಖ್ಯ ನ್ಯಾಯಮೂರ್ತಿ ಅವರ ಸೇವಾವಧಿ ಕೊನೆಗೊಂಡ ಅನಂತರ ನೂತನ ಮುಖ್ಯ ನ್ಯಾಯಮೂರ್ತಿಗಳು ಕಾರ್ಯಭಾರ ವಹಿಸಿಕೊಳ್ಳಲಿದ್ದಾರೆ.
1965ರ ಮಾ. 23ರಂದು ಅಹಮದಾಬಾದ್ನಲ್ಲಿ ಜನಿಸಿದ ಅಂಜಾರಿಯಾ 1988ರಲ್ಲಿ ಎ.ಎ. ಶಾ ಕಾನೂನು ಕಾಲೇಜಿನಿಂದ ಎಲ್ಎಲ್ಬಿ ಪದವಿ ಪಡೆದರು. 2011ರ ನ. 21ರಿಂದ ಎನ್.ವಿ. ಅಂಜಾರಿಯಾ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್