ನಾಗಮಂಗಲದಲ್ಲಿ ಮಾರಾಮಾರಿ ; ಹಲವರು ಆಸ್ಪತ್ರೆಗೆ ; 13 ಸೆರೆ

ಚೆಲುವರಾಯಸ್ವಾಮಿ ಮತ್ತು ಜೆಡಿಎಸ್‌ ಶಾಸಕರ ಮಧ್ಯೆ ಭಾರೀ ಹೊಡೆದಾಟ

Team Udayavani, Jun 6, 2019, 4:30 PM IST

 

ನಾಗಮಂಗಲ: ಇಲ್ಲಿನ ಮುಳ್ಳುಕಟ್ಟಮ್ಮ ದೇಗುಲದಪೂಜೆ ವಿಚಾರಕ್ಕೆ ಸಂಬಂಧಿಸಿ 2 ಗುಂಪುಗಳ ನಡುವೆ ಗುರುವಾರ ಮಾರಾಮಾರಿ ನಡೆದಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಚೆಲುವರಾಯ ಸ್ವಾಮಿ ಮತ್ತು ಜೆಡಿಎಸ್‌ ಶಾಸಕ ಸುರೇಶ್‌ ಗೌಡ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.

ದೇಗುಲದ ಪೂಜೆ ವಿಚಾರದಲ್ಲಿ 2 ಕುಟುಂಬಗಳ ನಡುವೆ ವಿವಾದ ಉಂಟಾಗಿತ್ತು. ಬುಧವಾರ ಸಂಜೆ 13 ಮಂದಿ ಯುವಕರು ದೇವಸ್ಥಾನಕ್ಕೆ ಬಾಗಿಲು ಹಾಕಿ ದಾಂಧಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ನಾಗಮಂಗಲದಲ್ಲಿ ಉದ್ವಿಗ್ನ ವಾತಾವಾರಣ ನಿರ್ಮಾಣವಾಗಿದ್ದು , ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ.

ನಾಗಮಂಗಲ ಟೌನ್‌ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ