SSLC ಫಲಿತಾಂಶ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿರುವುದು ಸಂತೋಷದ ವಿಷಯ
Team Udayavani, Apr 30, 2019, 4:28 PM IST
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಫಲಿತಾಂಶ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿರುವುದು ಸಂತೋಷ ತಂದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿರುವುದು ಸಂತೋಷದ ವಿಷಯ. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಶಾಲೆಗಳಿಗೆ ಅಭಿನಂದನೆಗಳು. ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಸೆ ಹೊಂದುವ ಅಗತ್ಯವಿಲ್ಲ. ಮುಂದಿನ ಬಾರಿ ಹೆಚ್ಚಿನ ಪರಿಶ್ರಮ ವಹಿಸಿ ಪರೀಕ್ಷೆ ಎದುರಿಸಿ, ಯಶಸ್ವಿಯಾಗಿ. ಎಂದು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ ತಂತ್ರಜ್ಞಾನದ ನೆರವು ಹಾಗೂ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಾಗ ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯ ಎನ್ನುವುದಕ್ಕೆ ಈ ವರ್ಷದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷಾ ಪ್ರಕ್ರಿಯೆ ನಿರ್ವಹಣೆ ಉತ್ತಮ ನಿದರ್ಶನ ಎಂದು ಬೆರಿದ್ದಾರೆ.
ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶ ತ್ವರಿತವಾಗಿ ಪ್ರಕಟವಾಗುವ ಮೂಲಕ ಪೋಷಕರು ಹಾಗೂ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಯಶಸ್ವಿಯಾಗಿ ನಿರ್ವಹಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಇನ್ನೊಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.
ಶೇಕಡಾ 73.70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.
ಹಾಸನ ಮೊದಲ ಸ್ಥಾನ (89.33%), ರಾಮನಗರ ದ್ವಿತೀಯ (88.49%), ಬೆಂಗಳೂರು ಗ್ರಾಮಾಂತರ ಮೂರನೇ ಸ್ಥಾನ (88.49%), ಉತ್ತರಕನ್ನಡ ನಾಲ್ಕನೇ ಸ್ಥಾನ, ಉಡುಪಿ 5 ನೇ ಸ್ಥಾನ, ಚಿಕ್ಕೋಡಿ 6 ನೇ ಸ್ಥಾನ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳ್ಳತನದ ವೇಳೆ ಎಚ್ಚರಗೊಂಡ ಮಾಲೀಕ : ಓಡುವ ಭರದಲ್ಲಿ ಮನೆಯ ಮೇಲಿಂದ ಬಿದ್ದು ಸಾವನ್ನಪ್ಪಿದ ಕಳ್ಳ
ತಾಂಬೂಲ ಪ್ರಶ್ನೆಗಿಂತ ಹೆಚ್ಚಿನ ತೀರ್ಮಾನ ಕೇಶವ ಕೃಪಾದಲ್ಲಿ: ಹೆಚ್ ಡಿಕೆ
ಚಿಕ್ಕಮಗಳೂರು: ತಂದೆ – ಮಗನ ಪಬ್ ಜಿ ಜಗಳ; ತಾಯಿಯ ಕೊಲೆಯಲ್ಲಿ ಅಂತ್ಯ
ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ
ಜಿ.ಟಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿದ್ದರಾಮಯ್ಯ