ಮುಖ್ಯಮಂತ್ರಿಗಳು ಆರೋಗ್ಯವಾಗಿದ್ದಾರೆ: ಸಿಎಂ ಕಚೇರಿ ಸ್ಪಷ್ಟನೆ
Team Udayavani, Jul 22, 2019, 8:54 AM IST
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟಪಡಿಸಿದೆ.
ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಇರುವುದರಿಂದ, ಅದನ್ನು ತಪ್ಪಿಸಲು ಸಿಎಂ ಕುಮಾರಸ್ವಾಮಿ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾತುಗಳನ್ನು ಕೆಲವು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿತ್ತು. ಆದರೆ ಅವು ಸುಳ್ಳು, ಅವರು ಆರೋಗ್ಯವಾಗಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ.