ವೃದ್ಧೆ ಸಮಸ್ಯೆಗೆ ಸ್ಪಂದಿಸಿದ CM ಸಿದ್ದರಾಮಯ್ಯ
Team Udayavani, Aug 27, 2023, 11:43 PM IST
ಚಳ್ಳಕೆರೆ: ವೃದ್ಧೆಯೊಬ್ಬರ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿರುವ ಬಗ್ಗೆ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳ ಕೆರೆ ತಾ| ತಳಕು ಹೋಬಳಿಯ ಬಸಾಪುರ ಗ್ರಾಮದ ಯುವ ಕಾಂಗ್ರೆಸ್ ಮುಖಂಡ ಮಹೇಂದ್ರ ಅವರು ತಮ್ಮ ಗ್ರಾಮದ ಬಡ ವೃದ್ಧೆ ದೊಣಮ್ಮ (81) ಅವರ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿರುವ ಬಗ್ಗೆ ತಮ್ಮ “ಎಕ್ಸ್” ಸಾಮಾಜಿಕ ಜಾಲತಾಣದ ಖಾತೆ ಮೂಲಕ ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ ಕೂಡಲೇ ವೃದ್ಧೆ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಸುಮಾರು 55 ವರ್ಷಗಳಿಂದ ದೊಣಮ್ಮ ಬಸಾಪುರ ದಲ್ಲಿ ಜಮೀನುಗಳಲ್ಲಿ ಕೂಲಿ ಕೆಲಸ ಮಾಡುತ್ತ ಜೀವನ ನಿರ್ವ ಹಿಸುತ್ತಿದ್ದಾರೆ.
ಸಿಎಂ ಕಚೇರಿಯಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ವೃದ್ಧೆ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ