ರಮೇಶ ಜಾರಕಿಹೊಳಿ ವಿರುದ್ಧ ಮತ್ತೆ ಹೋರಾಟ ಶುರು ಮಾಡುತ್ತಾ ಕಾಂಗ್ರೆಸ್‌?

Team Udayavani, May 5, 2022, 4:10 PM IST

19

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಸಿಡಿ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಗಳ ಮೂಲಕ ತಿರುಗಿಬಿದ್ದಿದ್ದ ಕಾಂಗ್ರೆಸ್‌ ನಾಯಕರು ಇದೀಗ ಗೋಕಾಕ ತಾಲೂಕಿನ ಹಿರೇನಂದಿಯ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆಯ ಸಾಲದ ಬಾಕಿ ಹಾಗೂ ಆರ್ಥಿಕ ದಿವಾಳಿ ವಿಚಾರ ಮುಂದಿಟ್ಟು ಮತ್ತೂಂದು ಹೋರಾಟ ಆರಂಭಿಸಲಿದ್ದಾರೆಯೇ?

ನೂರಾರು ಕೋಟಿ ರೂ. ಸಾಲದ ಬಾಕಿ ಪಾವತಿ ಮಾಡದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿರುವ ಕಾಂಗ್ರೆಸ್‌ ಮುಖಂಡರು, ಈ ವಿಷಯದಲ್ಲಿ ಸರ್ಕಾರ ರಮೇಶ ಜಾರಕಿಹೊಳಿ ಅವರನ್ನು ರಕ್ಷಿಸಲು ಮುಂದಾಗಿದೆ ಎಂದು ದೂರಿರುವುದು ಈ ರೀತಿಯ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆಯ ಸಾಲದ ಬಾಕಿ ಮತ್ತು ಆರ್ಥಿಕ ದಿವಾಳಿ ಘೋಷಣೆಗೆ ಸರ್ಕಾರದ ಮೇಲೆ ಒತ್ತಡದ ತಂತ್ರದ “ಅಸ್ತ್ರ’ ದೊಂದಿಗೆ ರಾಜ್ಯಮಟ್ಟದ ನಾಯಕರು ಮತ್ತೂಂದು ಹೋರಾಟಕ್ಕೆ ವೇದಿಕೆ ಸಿದ್ಧಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ನಾಯಕರ ಆರೋಪದ ಪ್ರಕಾರ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ವಿವಿಧ ಸಹಕಾರಿ ಸಂಸ್ಥೆಗಳಿಂದ ಪಡೆದಿರುವ 360 ಕೋಟಿ ರೂ. ಸಾಲವನ್ನು ಇದುವರೆಗೆ ಪಾವತಿ ಮಾಡಿಲ್ಲ. ಇದಲ್ಲದೆ ವಿವಿಧ ಸಹಕಾರಿ ಸೊಸೈಟಿಗಳಿಂದ ಕೋಟ್ಯಂತರ ರೂ. ಸಾಲ ಪಡೆದಿದೆ. ಕಳೆದ 10 ವರ್ಷಗಳಿಂದ ಕಬ್ಬು ಬೆಳೆಗಾರರಿಗೆ ಸುಮಾರು 50 ಕೋಟಿ ರೂ.ಬಾಕಿ ಹಣ ಪಾವತಿ ಮಾಡಬೇಕಿದೆ ಎನ್ನಲಾಗಿದೆ. ಈ ವಿಷಯದ ಬಗ್ಗೆ ರಮೇಶ ಜಾರಕಿಹೊಳಿ ಅವರನ್ನು ಸಂಪರ್ಕ ಮಾಡಲು ಪ್ರಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಸಕ್ಕರೆ ಕಾರ್ಖಾನೆಗಳು ಆರ್ಥಿಕವಾಗಿ ದಿವಾಳಿಯಾಗುವ ಸ್ಥಿತಿಯಲ್ಲಿ ಇಲ್ಲ. ಈ ರೀತಿಯ ವರದಿಗಳು ನಿರಾಧಾರ. ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಇನ್ನೂ 50 ಕೋಟಿ ರೂ ಬಾಕಿ ಬರಬೇಕಿದೆ. ಈ ವಿಷಯ ನ್ಯಾಯಾಲಯದಲ್ಲಿದೆ. ಆರ್ಥಿಕ ದಿವಾಳಿ ವಿಷಯ ನಿಜವೇ, ರಾಜಕೀಯ ಉದ್ದೇಶವೇ ಎಂಬುದರ ಬಗ್ಗೆ ಇಲಾಖೆ ಪರಿಶೀಲನೆ ಮಾಡಬೇಕು. ●ಸಿದಗೌಡ ಮೋದಗಿ, ಅಧ್ಯಕ್ಷ ಭಾರತೀಯ ಕೃಷಿಕ ಸಮಾಜ

ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ ಮೇಲೆ ಅದನ್ನು ಪಾವತಿ ಮಾಡದೇ ಇದ್ದರೆ ಅದು ಮಹಾ ವಂಚನೆ. ಈ ವಿಷಯದಲ್ಲಿ ಮೌನವಾಗಿರುವ ಸರಕಾರ ರಾಜಕೀಯವಾಗಿ ರಮೇಶ ಜಾರಕಿಹೊಳಿ ಅವರಿಗೆ ಅನುಕೂಲ ಮಾಡಿಕೊಡುತ್ತಿದೆ. ಕಾಂಗ್ರೆಸ್‌ ಆರೋಪ ಸುಳ್ಳು ಎಂದಾದರೆ ಅದನ್ನು ದಾಖಲೆ ಸಮೇತ ಸಾಬೀತುಮಾಡಬೇಕು. ಇಲ್ಲದಿದ್ದರೆ ಸರಕಾರ ಸಕ್ಕರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು. ● ಅಶೋಕ ಪೂಜಾರಿ, ಕಾಂಗ್ರೆಸ್‌ ಮುಖಂಡ

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.