ನಾಮಪತ್ರ ಸಲ್ಲಿಕೆ ವೇಳೆ ಕೈ-ಕಮಲ ಶಕ್ತಿ ಪ್ರದರ್ಶನ


Team Udayavani, Apr 30, 2019, 3:03 AM IST

Udayavani Kannada Newspaper

ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಸೋಮವಾರ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಹಾಗೂ ಬಿಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡರ ತಮ್ಮ, ತಮ್ಮ ಪಕ್ಷದ ನಾಯಕರೊಂದಿಗೆ ಉಮೇದುವಾರಿಕೆ ಸಲ್ಲಿಸಿದರು.

“ಕೈ’ ಮುಖಂಡರ ಸಾಥ್‌: ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರ ನಾಮಮತ್ರ ಸಲ್ಲಿಸುವ ಮೆರವಣಿಗೆ ಪಟ್ಟಣದ ಗಾಳಿ ಮಾರೆಮ್ಮಾ ದೇವಸ್ಥಾನದಿಂದ ಆರಂಭವಾಯಿತು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯರ್ತರು, ಶಿವಳ್ಳಿ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿದ್ದರು.

ಸಿದ್ದರಾಮಯ್ಯ, ದಿನೇಶ ಗುಂಡೂರಾವ್‌, ಮಾಜಿ ಸಚಿವರಾದ ಎಚ್‌.ಕೆ.ಪಾಟೀಲ, ವಿನಯ ಕುಲಕರ್ಣಿ, ಉಮಾಶ್ರೀ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್‌.ಎಚ್‌.ಕೋನರಡ್ಡಿ, ಮಾಜಿ ಶಾಸಕ ಎಂ.ಎಸ್‌.ಅಕ್ಕಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ| ಪುಷ್ಪಾ ಅಮರನಾಥ ಸೇರಿ ಹಲವು ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮೊದಲು ಬೆಳಗ್ಗೆ 11 ಗಂಟೆ ವೇಳೆಗೆ ಚುನಾವಣಾ ಕಚೇರಿಗೆ ಸ್ಥಳೀಯ ಮುಖಂಡರು ಹಾಗೂ ಪುತ್ರ ಅಮರಶಿವನೊಂದಿಗೆ ಆಗಮಿಸಿದ ಕುಸುಮಾವತಿ ಶಿವಳ್ಳಿ, ನಾಮಪತ್ರ ಸಲ್ಲಿಸಿದ್ದರು.

ಕಣ್ಣೀರಿಟ್ಟ ಕುಸುಮಾ ಶಿವಳ್ಳಿ: ಮೆರವಣಿಗೆಯಲ್ಲಿ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರು ತಮ್ಮ ಪತಿ ಸಿ.ಎಸ್‌.ಶಿವಳ್ಳಿ ಅವರನ್ನು ನೆನೆದು ಕಣ್ಣೀರಿಟ್ಟರು.

ಶಕ್ತಿ ತೋರಿಸಿದ ಬಿಜೆಪಿ: ಪ್ರವಾಸಿ ಮಂದಿರ ಬಳಿಯ ಮರಾಠ ಭವನದಿಂದ 1.30ರ ಸುಮಾರಿಗೆ ಬಿಜೆಪಿ ಮೆರವಣಿಗೆ ಆರಂಭವಾಯಿತು. ರಸ್ತೆಯುದ್ದಕ್ಕೂ ಕೇಸರಿ ಬಾವುಟಗಳು, ನಾಯಕರ ಕಟೌಟ್‌ಗಳು ರಾರಾಜಿಸುತ್ತಿದ್ದವು. ಮೆರವಣಿಗೆಯುದ್ದಕ್ಕೂ ಮೋದಿ ಪರ ಘೋಷಣೆಗಳು ಮೊಳಗಿದವು.

ಜಗದೀಶ ಶೆಟ್ಟರ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಬಿಜೆಪಿ ಮುಖಂಡ ಎಂ.ಆರ್‌.ಪಾಟೀಲ ಮೆರವಣಿಗೆಯಲ್ಲಿ ಪಾಲ್ಗೊಂಡು ಸಾಥ್‌ ನೀಡಿದರು. ಮೆರವಣಿಗೆಗೆ ಮುಂಚೆ ಅಭ್ಯರ್ಥಿ ಚಿಕ್ಕನಗೌಡರ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಒಂದು ನಾಮಪತ್ರ ಸಲ್ಲಿಸಿದ್ದರು.

ಓಡಿ ಬಂದ ಬಿಜೆಪಿ ಅಭ್ಯರ್ಥಿ: ಎಸ್‌.ಐ.ಚಿಕ್ಕನಗೌಡರ ನಾಮಪತ್ರ ಸಲ್ಲಿಸಲು ಲಘುಬಗೆಯಿಂದ ಓಡಿ ಬಂದರು. “ಬಿ’ ಫಾರ್ಮ್ ಸಹಿತ ನಾಮಪತ್ರ ಸಲ್ಲಿಸಲು ಇನ್ನು ಕೇವಲ 9 ನಿಮಿಷ ಬಾಕಿ ಇರುವಾಗ ಚುನಾವಣಾ ಕಚೇರಿ ಆವರಣ ಪ್ರವೇಶಿಸಿದರು. ಒಂದು ತಾಸಿನಲ್ಲಿ ಮೆರವಣಿಗೆ ಚುನಾವಣಾ ಕಚೇರಿ ತಲುಪಲಿದೆ ಎನ್ನುವ ನಿರೀಕ್ಷೆ ಮುಖಂಡರದ್ದಾಗಿತ್ತು. ಆದರೆ, ಮೆರವಣಿಗೆ ವಿಳಂಬವಾಗಿದ್ದರಿಂದ ಇನ್ನೂ ಚುನಾವಣಾ ಕಚೇರಿ ಮುಂದಿರುವಾಗಲೇ ತೆರೆದ ವಾಹನದಿಂದಿಳಿದು ನಾಮಪತ್ರ ಸಲ್ಲಿಸಲು ಅವರು ಓಡಿ ಬರಬೇಕಾಯಿತು.

ಕಾಂಗ್ರೆಸ್‌ ಕಾರ್ಯಕರ್ತರಿಗೆ ನಮಸ್ಕರಿಸಿದ ಬಿಜೆಪಿ ಮುಖಂಡರು: ಚುನಾವಣಾ ಕಚೇರಿಗೆ ಆಗಮಿಸಿದ ಬಿಜೆಪಿ ಮುಖಂಡರನ್ನು ಕಂಡ ಕಾಂಗ್ರೆಸ್‌ ಕಾರ್ಯಕರ್ತರು ಶಿವಳ್ಳಿ ಹೆಸರಲ್ಲಿ ಘೋಷಣೆ ಕೂಗಿದರು. ಆಗ ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ, ಅಭ್ಯರ್ಥಿ ಎಸ್‌.ಐ. ಚಿಕ್ಕನಗೌಡರ ಅವರು ಕಾಂಗ್ರೆಸ್‌ ಕಾರ್ಯಕರ್ತರತ್ತ ಕೈ ಬೀಸಿ ನಮಸ್ಕರಿಸಿದರು. ಇದನ್ನು ಗಮನಿಸಿದ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ನವರು ಎಂದು ಹೇಳುತ್ತಿದ್ದಂತೆ ಪರಸ್ಪರ ಮುಖ ನೋಡಿಕೊಂಡು ಮುಗುಳ್ನಗೆ ನಕ್ಕು ಒಳ ನಡೆದರು.

ಬಿಜೆಪಿಯಲ್ಲಿ ಯಾವುದೇ ಅಸಮಾಧಾನಗಳಿಲ್ಲ. ಎಂ.ಆರ್‌.ಪಾಟೀಲ್‌ ಇಲ್ಲದೆ ಚಿಕ್ಕನಗೌಡ ಇಲ್ಲ. ಅವರ ಬೆಂಬಲದಿಂದಲೇ ನನ್ನ ಗೆಲುವು ಸಾಧ್ಯ. ಈ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ. ನಮ್ಮ ಸರಕಾರದ ಸಾಧನೆಗಳು, ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಾದ ಅಭಿವೃದ್ಧಿ ಯೋಜನೆಗಳು ನನಗೆ ಗೆಲುವು ತಂದು ಕೊಡಲಿವೆ.
-ಎಸ್‌.ಐ.ಚಿಕ್ಕನಗೌಡರ, ಬಿಜೆಪಿ ಅಭ್ಯರ್ಥಿ.

ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಒಮ್ಮತದ ಅಭಿಪ್ರಾಯದ ಮೇರೆಗೆ ನಾನು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಸಿದ್ದರಾಮಯ್ಯ ಸಾಹೇಬರು ಈ ಚುನಾವಣೆ ಮಾಡುತ್ತಿದ್ದಾರೆ. ನನ್ನ ಪತಿ ಶಿವಳ್ಳಿ ಅವರು ಕ್ಷೇತ್ರದ ಜನರೊಂದಿಗೆ ಹೊಂದಿದ್ದ ಅವಿನಾಭಾವ ಸಂಬಂಧ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ.
-ಕುಸುಮಾವತಿ ಶಿವಳ್ಳಿ, ಮೈತ್ರಿ ಅಭ್ಯರ್ಥಿ.

ಟಾಪ್ ನ್ಯೂಸ್

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; ಇಬ್ಬರು ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 7 ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಹೈಕಮಾಂಡ್ ಜೊತೆ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳ

ಹೈಕಮಾಂಡ್ ಜೊತೆ ಸಿಎಂ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳ

ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್

ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್

1death

ವೈದ್ಯಕೀಯ ನಿರ್ಲಕ್ಷ್ಯ ಆರೋಪ: ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು; ಕುಟುಂಬಿಕರ ಆಕ್ರೋಶ

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

World Giants

ದಿಲ್ಶನ್,ತರಂಗ ಬ್ಯಾಟಿಂಗ್ ವೈಭವ: ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಏಶ್ಯನ್ ಲಯನ್ಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೈಕಮಾಂಡ್ ಜೊತೆ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳ

ಹೈಕಮಾಂಡ್ ಜೊತೆ ಸಿಎಂ ಚರ್ಚೆಯ ಬಳಿಕ ಸಂಪುಟ ಪುನಾರಚನೆ ಡೇಟ್ ಫಿಕ್ಸ್: ಕಾರಜೋಳ

ಜ.24ರಿಂದ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ

ಜ.24ರಿಂದ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಕೇಂದ್ರದಿಂದ ರಾಜ್ಯಕ್ಕೆ 3,467 ಕೋ. ರೂ. ಜಿಎಸ್‌ಟಿ ಪರಿಹಾರ

ಕೇಂದ್ರದಿಂದ ರಾಜ್ಯಕ್ಕೆ 3,467 ಕೋ. ರೂ. ಜಿಎಸ್‌ಟಿ ಪರಿಹಾರ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ

6elephant

ಸಂಪಾಜೆ ನೆಲ್ಲಿಕುಮೇರಿ ಕಾರ್ಣಿಕ ದೈವ ಕಟ್ಟೆಗೆ ಕಾಡಾನೆ ದಾಳಿ

5fire

ಬೆಂಕಿ ಅವಘಡ: ಕೃಷಿಭೂಮಿ ಬೆಂಕಿಗಾಹುತಿ

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; ಇಬ್ಬರು ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 7 ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

4bank

ಡಿಸಿಸಿ ಬ್ಯಾಂಕ್‌ನಿಂದ ಬಡ್ಡಿ ರಹಿತ ಸಾಲ ವಿತರಣೆ: ಹೇರೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.