ಮನವೊಲಿಕೆ ಕಸರತ್ತು ನಡೆಸಿದ ಕಾಂಗ್ರೆಸ್ ನಾಯಕರು
Team Udayavani, Jul 8, 2019, 3:08 AM IST
ಬೆಂಗಳೂರು: ರಾಜೀನಾಮೆ ಸಲ್ಲಿಸಿರುವ ಶಾಸಕರ ಮನವೊಲಿಕೆಗೆ ಕಾಂಗ್ರೆಸ್ ನಾಯಕರು ಭಾನುವಾರ ದಿನವಿಡೀ ಕಸರತ್ತು ನಡೆಸಿದ್ದಾರೆ. ಅತೃಪ್ತ ಶಾಸಕರನ್ನ ಸಂಪರ್ಕಿಸಲು ಸಾಧ್ಯವಾದ ಮಾರ್ಗಗಳನ್ನೆಲ್ಲ ಅನುಸರಿಸುತ್ತಿದ್ದಾರೆ. ಸ್ವತಃ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅತೃಪ್ತ ಶಾಸಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡುವ ಪ್ರಯತ್ನ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂಬೈನಲ್ಲಿ ಅತೃಪ್ತರ ಜತೆಗೆ ಸೇರಿಕೊಂಡಿರುವ ಬೈರತಿ ಬಸವರಾಜ್ ಜತೆ ಸುಮಾರು 10 ನಿಮಿಷ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಮುಂಬೈಗೆ ತೆರಳಿರುವ ಹತ್ತು ಶಾಸಕರಲ್ಲಿ ಐವರು ಶಾಸಕರೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರು ವಿವಿಧ ಮೂಲಗಳಿಂದ ಸಂಪರ್ಕ ಮಾಡುವ ಪ್ರಯತ್ನ ನಡೆಸಿದ್ದು, ಬಹುತೇಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಅಲ್ಲದೇ ರಾಜೀನಾಮೆ ನೀಡಿ ರಾಜ್ಯದಲ್ಲಿಯೇ ಉಳಿದಿರುವ ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ದೂರವಾಣಿ ಮೂಲಕ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ರಾಮಲಿಂಗಾ ರೆಡ್ಡಿ ತಮಗಿರುವ ಅಸಮಾಧಾನದ ಬಗ್ಗೆ ಪಕ್ಷದ ನಾಯಕರ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.
ಎಚ್.ಕೆ. ಪಾಟೀಲ್ ಭೇಟಿ: ಪಕ್ಷದ ನಾಯಕರ ನಡವಳಿಕೆಯಿಂದ ಮುನಿಸಿಕೊಂಡು ರಾಜೀನಾಮೆ ಸಲ್ಲಿಸಿರುವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ. ಪಾಟೀಲ್ ಪ್ರತ್ಯೇಕವಾಗಿ ಭೇಟಿ ಮಾಡಿ ಮನವೊಲಿಕೆ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹಿರಿಯ ಶಾಸಕರಾಗಿರುವ ತಮ್ಮನ್ನು ಪಕ್ಷ ಮೂಲೆಗುಂಪು ಮಾಡುವ ಪ್ರಯತ್ನ ನಡೆಸಿದೆ ಎಂದು ರಾಮಲಿಂಗಾರೆಡ್ಡಿ ಅಸಮಾಧಾನ ತೋಡಿಕೊಂಡಿದ್ದಾರೆ. ಅಲ್ಲದೇ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರ ಬಗ್ಗೆಯೂ ರಾಮಲಿಂಗಾರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಡಾ.ಜಿ.ಪರಮೇಶ್ವರ್ ಅವರನ್ನು ಬೆಂಗಳೂರು ಉಸ್ತುವಾರಿಯಿಂದ ಕೈ ಬಿಟ್ಟರೆ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.
ಮುನಿರತ್ನ ಭೇಟಿ ಮಾಡಿದ ಡಿಕೆಶಿ: ರಾಜೀನಾಮೆ ಸಲ್ಲಿಸಿ ಬೆಂಗಳೂರಿನಲ್ಲಿಯೇ ಉಳಿದುಕೊಂಡಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರನ್ನು ಶನಿವಾರ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೈತ್ರಿ ಸರ್ಕಾರದಲ್ಲಿ ತಮ್ಮ ಕ್ಷೇತ್ರದಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ಉಪ ಮುಖ್ಯಮಂತ್ರಿಗಳು ಯಾವುದೇ ಬೇಡಿಕೆಗಳಿಗೂ ಸ್ಪಂದಿಸುತ್ತಿಲ್ಲ ಎಂದು ಮುನಿರತ್ನ ತಮ್ಮ ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದರ ನಡುವೆ ಇನ್ನಷ್ಟು ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ಅನುಮಾನದಿಂದ ಭಾನುವಾರ ಕೆ.ಸಿ.ವೇಣುಗೋಪಾಲ್ ಅವರು, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ, ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಅವರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ.
ರಾಜೀನಾಮೆ ಇಂಗಿತ ವ್ಯಕ್ತಪಡಿಸಿರುವ ಪರಂ: ಬೆಂಗಳೂರಿನ ಶಾಸಕರು ತಮ್ಮ ವಿರುದ್ಧ ಆರೋಪ ಮಾಡುತ್ತಿರುವುದರಿಂದ ಬೇಸತ್ತಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆ.ಸಿ. ವೇಣುಗೋಪಾಲ್ ಎದುರು ಬೆಂಗಳೂರು ಉಸ್ತುವಾರಿ ಜವಾಬ್ದಾರಿ ಬಿಟ್ಟುಕೊಡುವುದಾಗಿ ಹೇಳಿದ್ದಾರೆ ಎನ್ನಲಾಗಿದ್ದು, ಅಗತ್ಯ ಬಿದ್ದರೆ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ಸಲ್ಲಿಸಿದ ತಕ್ಷಣ ಸರ್ಕಾರ ಬಿದ್ದ ಹಾಗೆ ಅಲ್ಲ. ಮುಂಬೈನಲ್ಲಿರುವ ಎಲ್ಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಶಾಸಕರೊಂದಿಗೆ ನಾವು ಮಾತನಾಡಿದ್ದೇವೆ. ಜೆಡಿಎಸ್ ಶಾಸಕರೊಂದಿಗೆ ಅವರು ಮಾತನಾಡಿದ್ದಾರೆ. ಎಲ್ಲವನ್ನೂ ನಿಮ್ಮ ಜೊತೆ ಹಂಚಿಕೊಳ್ಳಲು ಆಗುವುದಿಲ್ಲ.
-ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದಾಗಿನಿಂದಲೂ ಬಿಜೆಪಿಯವರು ಸರ್ಕಾರ ಕೆಡವಲು ಪ್ರಯತ್ನ ನಡೆಸುತ್ತಿದ್ದಾರೆ. ಶಾಸಕರು ವಿಶೇಷ ವಿಮಾನದಲ್ಲಿ ಹೇಗೆ ಮುಂಬೈಗೆ ಹೋಗುತ್ತಾರೆ? ಬಿಜೆಪಿ ಯವರು ಕಾಂಗ್ರೆಸ್ ಶಾಸಕರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ.
-ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ
ಸಿಎಂ ಸ್ಥಾನವನ್ನು ಐದು ವರ್ಷ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇವೆ. ಈಗ ಸಿಎಂ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಬೆನ್ನಿಗೆ ಚೂರಿ ಇರಿಯಲು ನಾನು ಸಿದ್ಧನಿಲ್ಲ. ನಾಯಕತ್ವ ಬದಲಾವಣೆ ಮಾಧ್ಯಮಗಳ ಸೃಷ್ಠಿ. ನಮ್ಮ ಶಾಸಕರು ಜೆಟ್ ಏರ್‌ವೆàಸ್‌ನಲ್ಲಿ ಹೋಗಿದ್ದಾರೆ. ಅವರಿಗೆ ಆ ಶಕ್ತಿ ಇದೆಯಾ ? ಇದರ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿದೆ.
-ಡಿ.ಕೆ.ಶಿವಕುಮಾರ್, ಜಲ ಸಂಪನ್ಮೂಲ ಸಚಿವ
ಮೈತ್ರಿ ಸರ್ಕಾರದಲ್ಲಿ ನನ್ನ ಕ್ಷೇತ್ರದ ಒಂದು ಕೆಲಸವೂ ಆಗುತ್ತಿಲ್ಲ. ಪರಮೇಶ್ವರ್ ಉಪ ಮುಖ್ಯಮಂತ್ರಿ ಆಗಿದ್ದರೂ ಯಾವುದೇ ಅಧಿಕಾರವಿಲ್ಲ. ಅವರು ಝೀರೋ ಟ್ರಾಫಿಕ್‌ಗೆ ಮಾತ್ರ ಸೀಮಿತ ಆಗಿದ್ದಾರೆ. ಎಲಿವೇಟೆಡ್ ಕಾರಿಡಾರ್ ಮಾಡಲು ತೀರ್ಮಾನಿಸಿದರೂ ಸಂಬಂಧ ಪಟ್ಟ ಶಾಸಕರ ಗಮನಕ್ಕೆ ತರುವುದಿಲ್ಲ.
-ಮುನಿರತ್ನ, ರಾಜೀನಾಮೆ ಸಲ್ಲಿಸಿರುವ ಶಾಸಕ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ
ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್ಕುಮಾರ್ ಕಟೀಲ್ ಖಂಡನೆ
ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್
ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯ:ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರು ಅಂತಿಮ
ರೈತರೇ, ಕಾಂಗ್ರೆಸ್ ನಿಮ್ಮ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹಾರಿಸುತ್ತಿದೆ: ಶ್ರೀರಾಮುಲು