ಕೊರೊನಾ ಎಫೆಕ್ಟ್: ಒಂದು ವಾರ ಕರ್ನಾಟಕ ಶಟ್ ಡೌನ್
ತುರ್ತು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ
Team Udayavani, Mar 13, 2020, 3:12 PM IST
ಬೆಂಗಳೂರು: ಕೊರೊನಾ ವೈರಸ್ ಕಾರಣದಿಂದ ರಾಜ್ಯದಲ್ಲಿ ಒಂದು ಸಾವು ಸಂಭವಿಸಿದ ಕಾರಣ ಹಾಗೂ ರಾಜ್ಯಾದ್ಯಂತ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಇಂದಿನಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ಶಾಪಿಂಗ್ ಮಾಲ್, ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳನ್ನು ಒಂದು ವಾರಗಳ ಕಾಲ ಮುಚ್ಚಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕೊರೊನಾ ವೈರಸ್ ಕಾರಣದಿಂದ ನಾಳೆಯಿಂದ ಒಂದು ವಾರ ಕಾಲ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಸಭೆ, ಸಮಾರಂಭ, ಜಾತ್ರೆ, ಮದುವೆ, ಜನ್ಮ ದಿನಾಚರಣೆ, ಬೇಸಿಗೆ ಶಿಬಿರ, ಪ್ರದರ್ಶನ, ಕ್ರೀಡಾ ಕೂಟಗಳನ್ನು ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತುರ್ತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಎಲ್ಲಾ ವಿಶ್ವವಿದ್ಯಾನಿಲಯಗಳಿಗೂ ಕೂಡ ಒಂದು ವಾರ ರಜೆಯನ್ನು ಘೋಷಿಸಲಾಗಿದೆ. ಜನರು ವಿವಿಧ ಭಾಗಗಳಿಗೆ ಪ್ರಯಾಣ ಮಾಡುವುದನ್ನು ಸಾಧ್ಯವಾದಷ್ಟೂ ಕಡಿಮೆ ಮಾಡಬೇಕು ಎಂದು ಯಡಿಯೂರೂಪ್ಪ ಅವರು ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
– ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ.
– ಮದುವೆ ಸಮಾರಂಭಗಳನ್ನು ಸರಳ ರೀತಿಯಲ್ಲಿ ನಡೆಸಲು ಸೂಚನೆ.
– ರಾಜ್ಯದಲ್ಲಿ ಬಾರ್, ರೆಸ್ಟೋರೆಂಟ್, ನೈಟ್ ಕ್ಲಬ್ ಮತ್ತು ಎಲ್ಲಾ ಕ್ರೀಡಾ ಚಟುವಟಿಕೆಗಳೂ ಒಂದು ವಾರ ಬಂದ್.
– ರಾಜ್ಯದಲ್ಲಿ ಎಲ್ಲಾ ಪರೀಕ್ಷೆಗಳೂ ನಿಗದಿಯಾಗಿರುವ ವೇಳಾಪಟ್ಟಿಯಂತೆ ನಡೆಯಲಿವೆ.
– ಶುಭ ಸಮಾರಂಭಗಳಿಗೆ ಸರಕಾರದ ನಿರ್ಬಂಧ. ಮದುವೆ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು