Karnataka: ನಿಗಮ, ಮಂಡಳಿ- ಸಿದ್ದು, ಡಿಕೆಶಿ ದಿಲ್ಲಿಯಲ್ಲಿ ಕಸರತ್ತು

ರಾಜ್ಯ ಉಸ್ತುವಾರಿ ಸುರ್ಜೇವಾಲಾ ಜತೆ ಸಭೆ

Team Udayavani, Jan 4, 2024, 12:23 AM IST

SIDDU DK SHI

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ನಾಯಕರು ಮತ್ತೆ ದಿಲ್ಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಇದರ ಬೆನ್ನಲ್ಲೇ ನಿಗಮ-ಮಂಡಳಿಗಳ ಅಧ್ಯಕ್ಷರ ಆಕಾಂಕ್ಷಿಗಳಲ್ಲಿ ನಿರೀಕ್ಷೆಗಳು ಮತ್ತೆ ಗರಿಗೆದರಿದ್ದು, ಸಂಕ್ರಾಂತಿಗೂ ಮೊದಲೇ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ.

ಈ ಮೊದಲೇ ನಿಗದಿಯಾದಂತೆ ಬುಧವಾರ ಸಂಜೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ದಿಲ್ಲಿಗೆ ತೆರಳಿದ್ದಾರೆ. ಗುರುವಾರ ಪಕ್ಷದ ಹೈಕಮಾಂಡ್‌ ಭೇಟಿಯಾಗಲಿರುವ ಅವರು, ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಸಹಿತ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ಹೈಕಮಾಂಡ್‌ ಸೂಚನೆಯಂತೆ ಪಕ್ಷದ ಹಿರಿಯ ಕಾರ್ಯಕರ್ತರ ಪಟ್ಟಿಯನ್ನೂ ಜತೆಗೆ ತೆಗೆದುಕೊಂಡು ಹೋಗಿರುವ ಇಬ್ಬರೂ ನಾಯಕರು (ಸಿಎಂ-ಡಿಸಿಎಂ), ತಿಂಗಳುಗಳಿಂದ ನನೆಗುದಿಗೆ ಬಿದ್ದಿರುವ ನಿಗಮ- ಮಂಡಳಿಗಳ ಅಧ್ಯಕ್ಷರ ಪಟ್ಟಿ ಬಿಡುಗಡೆ ಸಂಬಂಧ ರಾಷ್ಟ್ರೀಯ ನಾಯಕರ ಮೇಲೆ ಒತ್ತಡ ಹಾಕಲಿದ್ದಾರೆ. “ಹೊಸ್ತಿಲಲ್ಲೇ ಲೋಕಸಭಾ ಚುನಾವಣೆ ಇದೆ. ಈ ಹಂತದಲ್ಲೂ ಆಯ್ಕೆ ಅಂತಿಮಗೊಳ್ಳದಿದ್ದರೆ, ಇದು ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ’ ಎಂಬುದನ್ನು ತಮ್ಮ ನಾಯಕರಿಗೆ ಮನದಟ್ಟು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಷ್ಟಕ್ಕೂ ಶಾಸಕರ ನೇಮಕಾತಿ ಪಟ್ಟಿ ಅಂತಿಮಗೊಂಡಿದೆ. ಯಾರಿಗೆ ಯಾವ ನಿಗಮ ಅಥವಾ ಮಂಡಳಿ ಎನ್ನುವುದು ಕೂಡ ಬಹುತೇಕ ಪೂರ್ಣಗೊಂಡಿದೆ. ಕಾರ್ಯಕರ್ತರನ್ನೂ ಪಟ್ಟಿಯಲ್ಲಿ ಸೇರಿಸುವುದು ಬಾಕಿ ಇದೆ. ಆ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಬೇಗ ಬಿಡುಗಡೆ ಮಾಡಿದರೆ ಪಕ್ಷದಲ್ಲಿ ಹೊಸ ಹುರುಪು ತುಂಬಿದಂತಾಗಲಿದೆ. ಈ ಹಿನ್ನೆಲೆಯಲ್ಲಿ ಒಂದೆರಡು ದಿನಗಳಲ್ಲೇ ಪಟ್ಟಿ ಪ್ರಕಟಿಸುವಂತೆ ಮನವಿ ಮಾಡಲಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.

ಪರಿಷತ್‌ ಸದಸ್ಯರಿಗೆ ಅನುಮಾನ?
ಪಕ್ಷದ ವರಿಷ್ಠರ ಭೇಟಿಗೂ ಮುನ್ನ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರೊಂದಿಗೆ ಸಿಎಂ ಮತ್ತು ಡಿಸಿಎಂ ಮಾತುಕತೆ ನಡೆಸಲಿದ್ದಾರೆ. ಮೊದಲ ಹಂತದಲ್ಲಿ 32ರಿಂದ 35 ಜನರ ಆಯ್ಕೆ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆ ಇದ್ದು, ಇದರಲ್ಲಿ ಶಾಸಕರು ಮತ್ತು ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ವಿಧಾನ ಪರಿಷತ್ತಿನ ಸದಸ್ಯರು ಅನುಮಾನ ಎನ್ನಲಾಗಿದೆ.

ಪ್ರಮುಖ ಅಂಶ
– ನೇಮಕಾತಿಗಳನ್ನು ಬೇಗನೆ ಮಾಡುವಂತೆ ಅನೇಕ ಶಾಸಕರಿಂದ ತೀವ್ರ ಒತ್ತಾಯ.
– ಅನೇಕ ಬಾರಿ ಮುಂದೂಡಿಕೆ ಹಿನ್ನೆಲೆಯಲ್ಲಿ ಇನ್ನೂ ತಡ ಮಾಡದಿರಲು ನಿರ್ಧಾರ.
– ಲೋಕಸಭಾ ಚುನಾವಣೆ ಹತ್ತಿರ ಇರುವುದ ರಿಂದ ನಿಗಮ, ಮಂಡಳಿಗಳಿಗೆ ನೇಮಿಸದಿದ್ದರೆ ಚುನಾವಣೆ ವೇಳೆ ಪರಿಣಾಮ ಬೀರುವ ಸಾಧ್ಯತೆ.
– ಹೈಕಮಾಂಡ್‌ ನಾಯಕರ ಮುಂದೆ ವಾದ ಮಂಡಿಸಲು ಸಿಎಂ, ಡಿಸಿಎಂ ಸಿದ್ಧತೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.