ವೃತ್ತಿಪರ ಕೋರ್ಸುಗಳಿಗೆ ಕೌನ್ಸೆಲಿಂಗ್: 13ರಂದು ಪುನಃ ಕ್ಯುಪೇಕಾ ಜತೆ ಸಭೆ
Team Udayavani, Sep 7, 2022, 10:38 PM IST
ಬೆಂಗಳೂರು: ಎಂಜಿನಿಯರಿಂಗ್ ಶಿಕ್ಷಣಕ್ಕೆ ಪ್ರವೇಶಾತಿ ಕಲ್ಪಿಸುವ ಭಾಗವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕಾಮೆಡ್-ಕೆ ಯಾವಾಗ ಕೌನ್ಸೆಲಿಂಗ್ ಪ್ರಾರಂಭಿಸಬೇಕು ಎನ್ನುವುದನ್ನು ನಿರ್ಧರಿಸಲು ಖಾಸಗಿ ಅನುದಾನರಹಿತ ಎಂಜಿನಿಯರಿಂಗ್ ಕಾಲೇಜುಗಳ ಸಂಘದ (ಕ್ಯುಪೇಕಾ) ಜತೆ ಸೆ.13ರಂದು ಮತ್ತೊಂದು ಸುತ್ತಿನ ಸಭೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕ್ಯುಪೇಕಾ ಪ್ರತಿನಿಧಿಗಳ ಜತೆ ಬುಧವಾರ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಅವರು ಈ ವಿಚಾರ ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕಾಮೆಡ್-ಕೆ ಪರಸ್ಪರ ಸಮಾಲೋಚಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ರೂಪಿಸಲಿವೆ ಎಂದು ಅವರು ಹೇಳಿದರು.
ಸಭೆಯಲ್ಲಿ ಸರಕಾರದ ಪರವಾಗಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ, ಕ್ಯುಪೇಕಾ ಪರವಾಗಿ ಎಂ ಆರ್ ಜಯರಾಂ, ಶಾಮ್ ಮತ್ತು ಭಾಷಾ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ವೃತ್ತಿಪರ ಕಾಲೇಜುಗಳ ಸಂಘದ ಅಧ್ಯಕ್ಷ ಶಫಿ ಅಹಮದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…