Court; ಕೋಮುದ್ವೇಷದ ಎರಡು ಕೊಲೆ ಪ್ರಕರಣ: ಆರೋಪ ಸಾಬೀತು

Team Udayavani, Apr 9, 2024, 7:20 AM IST

Court; ಕೋಮುದ್ವೇಷದ ಎರಡು ಕೊಲೆ ಪ್ರಕರಣ: ಆರೋಪ ಸಾಬೀತು

ಮಂಗಳೂರು: ಉಳ್ಳಾಲ ಮತ್ತು ಮೆಲ್ಕಾರ್‌ ಸಮೀಪ ಕೋಮುದ್ವೇಷದ ಹಿನ್ನೆಲೆಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳ ಆರೋಪಿಗಳ ಮೇಲಿನ ಆರೋಪವು ನ್ಯಾಯಾಲಯದಲ್ಲಿ ಸಾಬೀತಾಗಿದೆ.

ಮಹಮ್ಮದ್‌ ನಾಸಿರ್‌ ಕೊಲೆ ಪ್ರಕರಣ
2015ರ ಆ. 6ರಂದು ಮೊಹಮ್ಮದ್‌ ಮುಸ್ತಾಫ‌ ಮತ್ತು ಮೊಹಮ್ಮದ್‌ ನಾಸೀರ್‌ ಮೆಲ್ಕಾರ್‌ ಕಡೆಯಿಂದ ಮುಡಿಪು ಕಡೆಗೆ ಆಟೋರಿಕ್ಷಾದಲ್ಲಿ ಹೋಗುತ್ತಿದ್ದಾಗ ಆರೋಪಿಗಳಾದ ವಿಜೇತ್‌ ಕುಮಾರ್‌ (22), ಕಿರಣ್‌ (24), ಅನೀಶ್‌ ಆಲಿಯಾಸ್‌ ಧನು (23) ಮತ್ತು ಅಭಿ ಆಲಿಯಾಸ್‌ ಅಭಿಜಿತ್‌ (24) ಬೈಕ್‌ನಲ್ಲಿ ಬಂದು ರಾತ್ರಿ 10.45ಕ್ಕೆ ಸಜೀಪ ಮೂಡ ಗ್ರಾಮದ ಕೊಳಕೆ ಎಂಬಲ್ಲಿ ಆಟೋರಿಕ್ಷಾ ತಡೆದು ನಿಲ್ಲಿಸಿ ತಲವಾರಿನಿಂದ ಹಲ್ಲೆ ನಡೆಸಿದ್ದರು. ಇದರಿಂದ ಮೊಹಮ್ಮದ್‌ ಮುಸ್ತಾಫ‌ ಮತ್ತು ನಾಸಿರ್‌ ಗಾಯಗೊಂಡು, ಚಿಕಿತ್ಸೆ ಫ‌ಲಕಾರಿಯಾಗದೆ ನಾಸೀರ್‌ ಮೃತಪಟ್ಟಿದ್ದರು.

ಕೋಮುದ್ವೇಷದಿಂದ ಕೊಲೆ
2015ರ ಆ. 5ರಂದು ರಾತ್ರಿ ಮುಸ್ಲಿಂ ಸಮುದಾಯದ 4-5 ಯುವಕರು ಬಂಟ್ವಾಳ ತಾಲೂಕಿನ ಕೊಳ್ನಾಡ್‌ ಗ್ರಾಮದ ಆಲಬೆಯಲ್ಲಿ ವಿಜೇತ್‌ ಕುಮಾರ್‌ ಮತ್ತು ಅಭಿ ಆಲಿಯಾಸ್‌ ಅಭಿಜಿತ್‌ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ಮನಸ್ತಾಪಗೊಂಡಿದ್ದ ಆರೋಪಿಗಳು ಮುಸ್ಲಿಂ ಸಮುದಾಯದ ಯುವಕರನ್ನು ಹತ್ಯೆ ಮಾಡಲು ಸಂಚು ನಡೆಸಿದ್ದರು.

ಕೊಲೆ ಪ್ರಕರಣದ ಬಗ್ಗೆ ಇನ್‌ಸ್ಪೆಕ್ಟರ್‌ ಕೆ.ಯು.ಬೆಳ್ಳಿಯಪ್ಪ ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 29 ಸಾಕ್ಷಿದಾರರನ್ನು ವಿಚಾರಿಸಿ 40 ದಾಖಲೆಗಳನ್ನು ಗುರುತಿಸಲಾಗಿದೆ. 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಎಚ್‌.ಎಸ್‌. ಅವರು ಆರೋಪಿಗಳು ದೋಷಿಗಳೆಂದು ಎ. 8ರಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಎ. 16ಕ್ಕೆ ನಿಗದಿಪಡಿಸಲಾಗಿದೆ. ಸರಕಾರದ ಪರ ಸರಕಾರಿ ಅಭಿಯೋಜಕರಾದ ಶೇಖರ ಶೆಟ್ಟಿ ವಿಚಾರಣೆ ನಡೆಸಿದ್ದು ಜುಡಿತ್‌ ಓಲ್ಗಾ ಮಾರ್ಗರೇಟ್‌ ಕ್ರಾಸ್ತಾ ವಾದ ಮಂಡಿಸಿದ್ದರು.

ರಾಜೇಶ್‌ ಕೋಟ್ಯಾನ್‌ ಕೊಲೆ ಪ್ರಕರಣ
2016ರ ಎಪ್ರಿಲ್‌ನಲ್ಲಿ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಗವೀರ ಪಟ್ಣದ ಹಿಂದೂಗಳು ಮತ್ತು ಮುಸ್ಲಿಂ ಯುವಕರ ನಡುವೆ ಕೋಮು ಸಂಘರ್ಷ ನಡೆಯುತ್ತಿತ್ತು. ಇದರಿಂದ ಪದೇ ಪದೇ ಒಬ್ಬರ ಮೇಲೊಬ್ಬರ ಮೇಲೆ ಹಲ್ಲೆ, ಕೊಲೆ ಯತ್ನ, ಮನೆಗೆ ನುಗ್ಗುವುದು, ಮನೆಗಳಿಗೆ ಹಾನಿ ಮಾಡುವುದು ಇತ್ಯಾದಿ ನಡೆಯುತ್ತಿತ್ತು. ಎ. 12ರ ಮುಂಜಾವ ಮೀನುಗಾರಿಕೆಗೆಂದು ಕೋಟೆಪುರ ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ರಾಜೇಶ್‌ ಕೋಟ್ಯಾನ್‌ ಆಲಿಯಾಸ್‌ ರಾಜ (44) ಅವರ ಮೇಲೆ ಆರೋಪಿಗಳು ಮರದ ದೊಣ್ಣೆಗಳಿಂದ ಹಲ್ಲೆ ಮಾಡಿ ಅನಂತರ ಮುಖಕ್ಕೆ ಕಲ್ಲಿನಿಂದ ಜಜ್ಜಿ ಹೊಡೆದು ಕೊಲೆ ಮಾಡಿದ್ದರು.

ಮೊಹಮ್ಮದ್‌ ಆಸಿಫ್ ಆಲಿಯಾಸ್‌ ಆಚಿ (23), ಮೊಹಮ್ಮದ್‌ ಸುಹೈಲ್‌ ಆಲಿಯಾಸ್‌ ಸುಹೈಲ್‌ (20), ಅಬ್ದುಲ್‌ ಮುತಾಲಿಪ್‌ ಆಲಿಯಾಸ್‌ ಮುತ್ತು (20), ಅಬ್ದುಲ್‌ ಅಸ್ವೀರ್‌ ಆಲಿಯಾಸ್‌ ಅಚ್ಚು (19) ಮತ್ತು ಕಾನೂನಿನ ಸಂಘರ್ಷಕ್ಕೊಳಗಾದ ಇಬ್ಬರು ಬಾಲಕರು ಪ್ರಕರಣದ ಆರೋಪಿಗಳಾಗಿದ್ದು, ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕರ ಹೊರತು ಇತರ ಆರೋಪಿಗಳ ವಿಚಾರಣೆ ನಡೆದಿದ್ದು ಅವರ ಮೇಲಿನ ಆರೋಪ ಸಾಬೀತಾಗಿದೆ. ಆರೋಪಿಗಳು ಹಿಂದೂವೊಬ್ಬನನ್ನು ಕೊಲೆ ಮಾಡಬೇಕೆಂದು ನಿರ್ಧರಿಸಿ ಸಂಚು ರೂಪಿಸಿದ್ದರು.

ಉಳ್ಳಾಲ ಠಾಣೆಯ ನಿರೀಕ್ಷಕ ಅಶೋಕ ಅವರು ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ದೇರಳಕಟ್ಟೆ ಕೆ.ಎಸ್‌. ಹೆಗ್ಡೆ ಆಸ್ಪತ್ರೆ ಫೊರೆನ್ಸಿಕ್‌ ವಿಭಾಗದ ವೈದ್ಯಾಧಿಕಾರಿ ಡಾ| ಮಹಾಬಲೇಶ್‌ ಶೆಟ್ಟಿ ಮತ್ತು ತಂಡದವರು ಘಟನ ಸ್ಥಳ ತಪಾಸಣೆ ನಡೆಸಿ ತಪಾಸಣ ವರದಿ ಮತ್ತು ಶವಪರೀಕ್ಷಾ ವರದಿ ಸಲ್ಲಿಸಿದ್ದರು. ಒಟ್ಟು 28 ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಿ 78 ದಾಖಲೆಗಳನ್ನು ಗುರುತಿಸಲಾಗಿದೆ.

ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌. ಅವರು ನಾಲ್ವರು ಆರೋಪಿಗಳು ದೋಷಿತರೆಂದು ಎ. 8ರಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಎ. 16ಕ್ಕೆ ನಿಗದಿಪಡಿಸಲಾಗಿದೆ. ಸರಕಾರದ ಪರ ಸರಕಾರಿ ಅಭಿಯೋಜಕಿ ಜುಡಿತ್‌ ಓಲ್ಗಾ ಮಾರ್ಗರೇಟ್‌ ಕ್ರಾಸ್ತಾ ಸಾಕ್ಷಿಗಳ ಸಾಕ್ಷಿ ವಿಚಾರಣೆ ಮಾಡಿ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.