ಕೋವಿಡ್ 19 ಪರಿಸ್ಥಿತಿ ನಿರ್ವಹಣೆ: ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ ಮಾ.31ಕ್ಕೆ
Team Udayavani, Mar 28, 2020, 3:02 PM IST
ಕೋವಿಡ್ 19 ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಕಾರ್ಯಪಡೆಯ ಮುಖ್ಯಸ್ಥ ರಮೇಶ್ ಕುಮಾರ್ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಹಸನಬ್ಬ ಅವರು ಉಪಸ್ಥಿತರಿದ್ದರು.
ಕಾರ್ಯಪಡೆಯ ಮೊದಲ ಸಭೆ ಮುಂದಿನ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಕಾರ್ಯಪಡೆಯ ಮುಖ್ಯಸ್ಥರು ಹಾಗೂ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಕಾರ್ಯಪಡೆಯ ಮುಂದಿನ ಕಾರ್ಯಕ್ರಮಗಳ ರೂಪುರೇಷೆ ಕುರಿತು ಚರ್ಚೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ