ಬಂಟ್ವಾಳ ಮಹಿಳೆ ಮೃತ್ಯು ಪ್ರಕರಣ ಒಟ್ಟು 34 ಮಂದಿಗೆ ಕ್ವಾರಂಟೈನ್: ನಳಿನ್ಕುಮಾರ್
Team Udayavani, Apr 20, 2020, 1:31 PM IST
ಬಂಟ್ವಾಳ: ಕೋವಿಡ್ ಸೋಂಕು ದೃಢಪಟ್ಟು ಬಂಟ್ವಾಳ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಮಹಿಳೆಯ ಕುಟುಂಬದ ಸದಸ್ಯರು ಸೇರಿದಂತೆ ಅವರ ಸಂಪರ್ಕದಲ್ಲಿದ್ದ 28 ಮಂದಿ ಹಾಗೂ ಮಹಿಳೆಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಇತರ ಸಿಬಂದಿ ಸೇರಿ 6 ಮಂದಿ ಹೀಗೆ 34 ಮಂದಿಯನ್ನು ಕ್ವಾರಂಟೈನ್ನಲ್ಲಿಡಲಾಗಿದೆ ಎಂದು ದ.ಕ.ಸಂಸದ ನಳಿನ್ಕುಮಾರ್ ಕಟೀಲು ತಿಳಿಸಿದರು.
ಅವರು ಸೋಮವಾರ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಅಽಕಾರಿಗಳ ಸಭೆ ನಡೆಸಿ ಪತ್ರಕರ್ತರ ಜತೆ ಮಾತನಾಡಿದರು. ಮಹಿಳೆಯ ಟ್ರಾವೆಲ್ ಹಿಸ್ಟರಿಯ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜತೆಗೆ ಬಂಟ್ವಾಳ ಪೇಟೆಯನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದ್ದು, ಅಲ್ಲಿನ ನಿವಾಸಿಗಳಿಗೆ ಆಹಾರ ಸಾಮಾಗ್ರಿಗಳನ್ನು ಮನೆಗಳಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ.
ಜತೆಗೆ ಬಂಟ್ವಾಳ ಸುತ್ತಮುತ್ತಲಲ್ಲೂ ಬಿ.ಸಿ.ರೋಡು, ಮೆಲ್ಕಾರ್, ಕಲ್ಲಡ್ಕ ಮೊದಲಾದ ಪ್ರದೇಶಗಳಲ್ಲಿ ಮಂಗಳೂರು ಮಾದರಿಯಲ್ಲೇ ಮಾರುಕಟ್ಟೆಯನ್ನು ಮಾಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಬAಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ ಮೊದಲಾದವರು ಜತೆಗಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ