ಕುಂದಾಪುರ ನಗರ ಪೊಲೀಸ್ ಠಾಣೆಯ ಎಎಸ್ಐಗೂ ಕೋವಿಡ್ ಸೋಂಕು ದೃಢ
Team Udayavani, Jul 18, 2020, 5:07 PM IST
ಕುಂದಾಪುರ: ಇಲ್ಲಿನ ನಗರ ಪೊಲೀಸ್ ಠಾಣೆಯ ಎಎಸ್ಐ ಒಬ್ಬರಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ಮುಂಜಾಗ್ರತಾ ಕ್ರಮವಾಗಿ ಠಾಣೆಯನ್ನು ಒಂದು ದಿನದ ಮಟ್ಟಿಗೆ ಪ್ರವಾಸಿ ಮಂದಿರಕ್ಕೆ ಸ್ಥಳಾಂತರಿಸಲಾಗಿದ್ದು, ಸ್ಯಾನಿಟೈಸ್ ಮಾಡಲಾಗಿದೆ.
ಹೈವೇ ಪೆಟ್ರೋಲ್ ವಾಹನದಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ಅವರ ಕರ್ತವ್ಯ ಪಾಳಿ ಜು.10 ಕ್ಕೆ ಮುಗಿದಿತ್ತು. ಇವರು ಕರ್ತವ್ಯ ನಿರ್ವಹಿಸುತ್ತಿದ್ದ ವಾಹನದಲ್ಲಿನ ಇನ್ನೊಂದು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಹಾಗೂ ಮತ್ತೋರ್ವ ಎಎಸ್ಐ ಅವರಿಗೆ ಸೋಂಕು ದೃಢವಾಗಿದ್ದ ಹಿನ್ನೆಲೆಯಲ್ಲಿ ಇವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಶನಿವಾರ ಬಂದಿರುವ ವರದಿಯಲ್ಲಿ ಸೋಂಕು ಇರುವುದು ಖಚಿತಗೊಂಡಿದೆ.
ಸೋಂಕಿತ ಎಎಸ್ಐ ಅವರೊಂದಿಗೆ ಕೆಲ ದಿನಗಳ ಹಿಂದೆ ಠಾಣೆಯ ಪಿಎಸ್ಐ ಹಾಗೂ ಕೆಲ ಸಿಬಂದಿ ಸಂಪರ್ಕಿತರಾಗಿದ್ದರಿಂದ ಅವರನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ