ಕೋವಿಡ್ 19: ಮನೆ ಸಮೀಪ ಲಸಿಕಾ ಕೇಂದ್ರಗಳ ಸಂಖ್ಯೆ ಹೆಚ್ಚಿಸಿ: ರಾಜ್ಯಗಳಿಗೆ ಕೇಂದ್ರ
ವೇಗವನ್ನು ಹೆಚ್ಚಳ ಮಾಡುವಲ್ಲಿ ರಾಜ್ಯ ಸರ್ಕಾರಗಳ ಸಾಮೂಹಿಕ ಪ್ರಯತ್ನ ಶ್ಲಾಘನೀಯ ಎಂದು ತಿಳಿಸಿದ್ದರು.
Team Udayavani, Jun 1, 2021, 8:34 AM IST
ನವದೆಹಲಿ:ಕೋವಿಡ್ 19 ಲಸಿಕೆ ಅಭಿಯಾನ ಚುರುಕುಗೊಳಿಸುವಂತೆ ಸೂಚಿಸಿರುವ ಕೇಂದ್ರ ಸರ್ಕಾರ, ಮನೆಗಳಿಗೆ ಸಮೀಪ ಇರುವ ಲಸಿಕಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕೋವಿಡ್ 19 ಲಸಿಕಾ ಪ್ರಗತಿ ಕುರಿತು ನಡೆಸಿದ ಪರಿಶೀಲನಾ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒತ್ತಾಯಿಸಿದೆ.
ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳ ಬಳಕೆ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ ಎಂದು ವರದಿ ತಿಳಿಸಿದೆ.
ಮನೆಗಳ ಸಮೀಪ ಇರುವ ಕೋವಿಡ್ 19 ಲಸಿಕಾ ಕೇಂದ್ರಗಳನ್ನು ಗುರುತಿಸುವ ಪ್ರಕ್ರಿಯೆ ಮತ್ತು ಅಸ್ತಿತ್ವದಲ್ಲಿರುವ ಕೋವಿಡ್ ಲಸಿಕೆ ಕೇಂದ್ರಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆಗೊಳಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇ ಕೊನೆಯ ವಾರದಲ್ಲಿ ಲಸಿಕೆ ನೀಡುವ ಕಾರ್ಯದ ವೇಗವನ್ನು ಹೆಚ್ಚಳ ಮಾಡುವಲ್ಲಿ ರಾಜ್ಯ ಸರ್ಕಾರಗಳ ಸಾಮೂಹಿಕ ಪ್ರಯತ್ನ ಶ್ಲಾಘನೀಯ ಎಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ
Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ
Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್ಗಳು ಧ್ವಂಸ!!
Kerala: ಸಿಪಿಐ(ಎಂ) ಪ್ರಣಾಳಿಕೆಯಲ್ಲಿನ ಭರವಸೆಗೆ ರಾಜನಾಥ್ ಸಿಂಗ್ ಆಕ್ರೋಶ.. ಏನದು ಭರವಸೆ?
Gujarat: ಹಿಂಬದಿಯಿಂದ ಟ್ರಕ್ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ