ಮಾಂಸದಂಗಡಿಗಳ ನೌಕರರ ಭೀತಿಯ ಬದುಕು

Team Udayavani, May 19, 2020, 2:54 PM IST

ಮಾಂಸದಂಗಡಿಗಳ ನೌಕರರ ಭೀತಿಯ ಬದುಕು

ಡಬ್ಲಿನ್‌: ಲಾಕ್‌ಡೌನ್‌ ಸಡಿಲಿಕೆಯಾದ ಬಳಿಕ ಅಯರ್‌ಲ್ಯಾಂಡ್‌ ಮತ್ತು ಉತ್ತರ ಅಯರ್‌ಲ್ಯಾಂಡಿನಲ್ಲಿ ನೂರಾರು ಮಾಂಸದಂಗಡಿ ಮತ್ತು ಮಾಂಸ ಸಂಸ್ಕರಣಾ ಘಟಕಗಳನ್ನು ತೆರೆಯಲಾಗಿದೆ. ಆದರೆ ಇವುಗಳ ನೌಕರರು ಯಾವುದೇ ಕ್ಷಣದಲ್ಲಿ ಕೋವಿಡ್‌ ವೈರಸ್‌ಗೆ ತುತ್ತಾಗುವ ಭೀತಿಯಲ್ಲೇ ಕೆಲಸ ಮಾಡುವ ಸ್ಥಿತಿಯಿದೆ.

ಮಾಂಸದಂಗಡಿಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ. ಇಷ್ಟು ಮಾತ್ರವಲ್ಲದೆ ನೌಕರರಿಗೆ ಮಾಲಕರು ಮಾಸ್ಕ್, ಗ್ಲೌಸ್‌, ಪಿಪಿಇ ಉಡುಗೆ ಇತ್ಯಾದಿ ಸುರಕ್ಷಾ ಸಾಧನಗಳನ್ನು ಒದಗಿಸುತ್ತಿಲ್ಲ. ನೌಕರರು ಬೇಕಿದ್ದರೆ ಅವರೇ ಖರೀದಿಸಬೇಕು. ಈ ದಯನೀಯ ಪರಿಸ್ಥಿತಿಯಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ ಎಂದು ದ ಗಾರ್ಡಿಯನ್‌ ವರದಿ ಮಾಡಿದೆ.

ಎಲ್ಲಿಯಾದರೂ ಪ್ರಾಣಿಗಳಿಂದ ಸೋಂಕು ಹರಡುವುದಾಗಿದ್ದರೆ ಮಾಲಕರು ಅಂಗಡಿಗಳನ್ನು ಮುಚ್ಚುತ್ತಿದ್ದರು. ಆದರೆ ಸೋಂಕು ಮನುಷ್ಯರಿಂದ ಹರಡುವ ಕಾರಣ ಮಾಲಕರಿಗೆ ನೌಕರರ ಆರೋಗ್ಯದ ಬಗ್ಗೆ ಚಿಂತೆಯಿಲ್ಲ ಎನ್ನುತ್ತಾರೆ ದಶಕಗಳಿಂದ ಮಾಂಸ ಸಂಸ್ಕರಣಾ ಘಟಕದಲ್ಲಿ ದುಡಿಯುತ್ತಿರುವ ಮಾರ್ಕೊ ಎಂಬ ನೌಕರ.

ಮಾಂಸದಂಗಡಿ ಮತ್ತು ಸಂಸ್ಕರಣಾ ಘಟಕಗಳ ನೌಕರರೆಲ್ಲ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ ಬಡವರು. ಬಹುತೇಕ ರೊಮೇನಿಯ ಮುಂತಾದ ದೇಶಗಳಿಂದ ಬಂದವರು. ಸ್ವಂತ ದುಡ್ಡಿನಲ್ಲಿ ಪಿಪಿಇ ಕಿಟ್‌ಗಳನ್ನು ಖರೀದಿಸುವಷ್ಟು ಸಾಮರ್ಥ್ಯ ಅವರಲ್ಲಿ ಇಲ್ಲ.

ಮಾಂಸದಂಗಡಿಗಳು ಮತ್ತು ಸಂಸ್ಕರಣಾ ಘಟಕಗಳು ಸಾಮಾನ್ಯವಾಗಿ ಕೊಳಕು ಪ್ರದೇಶಗಳಾಗಿರುತ್ತವೆ. ಇಂಥಹ ಕಡೆ ಕೋವಿಡ್‌ ವೈರಸ್‌ ಮಾತ್ರವಲ್ಲದೆ ಇತರ ರೋಗರುಜಿನಗಳು ಬರುವ ಸಾಧ್ಯತೆಯೂ ಹೆಚ್ಚು ಇರುತ್ತದೆ. ಆದರೆ ನೌಕರರು ಯಾವುದೇ ಸುರಕ್ಷಾ ವಿಧಾನಗಳಿಲ್ಲದೆ ಇಲ್ಲಿ ದುಡಿಯುತ್ತಿರುತ್ತಾರೆ.

ಅಯರ್‌ಲ್ಯಾಂಡ್‌ ಮಾತ್ರವಲ್ಲ ಜಗತ್ತಿನಾದ್ಯಂತ ಕೋವಿಡ್‌ ವೈರಸ್‌ ಮಾಂಸ ಸಂಸ್ಕರಣಾ ಘಟಕಗಳು ಮತ್ತು ಇನ್ನಿತರ ಆಹಾರ ಸಂಸ್ಕರಣಾ ಘಟಕಗಳ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರಿದೆ. ಅನೇಕ ಘಟಕಗಳು ನೌಕರರ ಕೊರತೆಯಿಂದ ಮುಚ್ಚಿವೆ. ಅಯರ್‌ಲ್ಯಾಂಡ್‌ವೊಂದರಲ್ಲೇ ಮಾಂಸ ಘಟಕಗಳ 571 ನೌಕರರು ಕೋವಿಡ್‌ ಸೋಂಕಿಗೊಳಗಾಗಿದ್ದಾರೆ. ಉತ್ತರ ಅಯರ್‌ಲ್ಯಾಂಡಿನಲ್ಲೂ ಸೋಂಕಿತರು ಬಹಳ ಸಂಖ್ಯೆಯಲ್ಲಿದ್ದು ಕಳೆದ ವಾರ ಓರ್ವ ನೌಕರ ವೈರಸ್‌ಗೆ ಬಲಿಯಾಗಿದ್ದಾನೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.