ಸಿಎಂ ಅಂಗಳದಲ್ಲಿ ರಾತ್ರಿ ಕರ್ಫ್ಯೂ ಚೆಂಡು

ಕೋವಿಡ್‌ ನಿಯಂತ್ರಣದ ಬಗ್ಗೆ ಸಮನ್ವಯ ಸಭೆ

Team Udayavani, Aug 3, 2021, 1:57 PM IST

covid

ಬೆಂಗಳೂರು: ನಗರದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಭೀಕರತೆ ಹೆಚ್ಚಾಗುವ ಆತಂಕವಿದ್ದು, ಪುನಃ ವೀಕೆಂಡ್‌ ಮತ್ತು ರಾತ್ರಿ ಕರ್ಫ್ಯೂ ಜಾರಿ ಬಗ್ಗೆ ಚಿಂತನೆ ನಡೆಯುತ್ತಿದೆ. ಈ ನಡುವೆ ಪಾಲಿಕೆ, ಜನಸಾಮಾನ್ಯರ ಜೀವನಕ್ಕೆ ತೊಂದರೆಯಾಗದಂತೆ ಕೋವಿಡ್‌ 3ನೇ ಅಲೆ ಎದುರಿಸಲು ಪೂರ್ವ ಸಿದ್ಧತೆ ನಡೆಸುತ್ತಿದೆ. ಜತೆಗೆ, ಕರ್ಫ್ಯೂ ಜಾರಿ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಅಂತಿಮ
ತೀರ್ಮಾನ ಪ್ರಕಟಿಸುವ ಸಾಧ್ಯತೆಯಿದೆ.

ಸರ್ಕಾರ ಮಟ್ಟದಲ್ಲಿ ಕೋವಿಡ್‌ ಟಾಸ್ಕ್ ಫೋರ್ಸ್‌ ಸಮಿತಿ ಈಗಾಗಲೇ ಸರ್ಕಾರಕ್ಕೆ ವರದಿ ನೀಡಿದೆ. ಈ ನಡುವೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ,ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್‌ ನಿಯಮಗಳ ಪಾಲನೆ ಸಂಬಂಧ ಸೋಮವಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್‌ ಆಯುಕ್ತರ ಜತೆಗೆ ಸಮನ್ವಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪೂರ್ವ ನಿಯೋಜಿತವಾಗಿ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ರಾತ್ರಿ ಕರ್ಫ್ಯೂ ಹಾಗೂ ಪರಿಣಾಮಕಾರಿ ಕ್ರಮಗಳ ಜಾರಿ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ, ರಾತ್ರಿ ಕರ್ಫ್ಯೂ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯಬೇಕಿದೆ. ಶೀಘ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಈ ಬಗ್ಗೆ ಸಮಾಲೋಚನೆ ನಡೆಯಲಿದೆ ಎಂದು ತಿಳಿಸಿದರು.

ನಗರದಲ್ಲಿ ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್‌ ದೃಢವಾದವರಿಗೆಕಡ್ಡಾಯವಾಗಿ ಫಿಸಿಕಲ್‌ ಟ್ರಯಾಜ್‌ ಮಾಡುವುದು,ಕಾಂಟ್ಯಾಕ್ಟ್ಟ್ರೇಸಿಂಗ್‌,ಐಸೋಲೇಟ್‌, ಮೂರು ಅಥವಾ ಅದಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದ ಪ್ರದೇಶವನ್ನು ಕಂಟೈನ್ಮೆಂಟ್‌ ವಲಯವನ್ನಾಗಿ ಗುರುತಿಸುವಕೆಲಸ ಮಾಡಲಾಗುತ್ತಿದೆ ಎಂದರು.

ಮಾಸ್ಕ್, ಸಾಮಾಜಿಕ ಅಂತರ ಬಗ್ಗೆ ಹೆಚ್ಚು ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೊಲೀಸರು ಕರ್ತವ್ಯ ನಿರ್ವಹಿಸುವಾಗ ಎಚ್ಚರಿಕೆ
ವಹಿಸಬೇಕು. ಕೋವಿಡ್‌ ಹೆಚ್ಚು ಇರುವ ಕಡೆ ಮೈಕ್ರೋಕಂಟೈನ್ಮೆಂಟ್‌ ಮತ್ತು ಕಂಟೈನ್ಮೆಂಟ್‌ಝೋನ್ ನಿರ್ಮಾಣ ಮಾಡುವುದು ಹಾಗೂ ಮೂರನೇ ಅಲೆಗೆ ಬೇಕಿರುವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಪಾಲಿಕೆ ವಿಶೇಷ ಆಯುಕ್ತ(ಆರೋಗ್ಯ) ಡಿ.ರಂದೀಪ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ ಮುರುಗನ್‌, ಪಾಲಿಕೆ ಅಧಿಕಾರಿಗಳಾದ ಮನೋಜ್‌ ಜೈನ್‌,
ಡಾ.ಹರೀಶ್‌ ಕುಮಾರ್‌, ರವೀಂದ್ರ, ದಯಾನಂದ್‌,ರೆಡ್ಡಿ ಶಂಕರ ಬಾಬು, ತುಳಸಿ ಮದ್ದಿನೇನಿ, ರವೀಂದ್ರ, ಎಲ್ಲ ವಲಯ ಜಂಟಿ ಆಯುಕ್ತರು, ವಲಯ ಡಿಸಿಪಿಗಳು, ಮುಖ್ಯ ಆರೋಗ್ಯ ಅಧಿಕಾರಿ, ಎಲ್ಲ ವಲಯ ಆರೋಗ್ಯಾಧಿಕಾರಿಗಳು ಇದ್ದರು. ತಳಮಟ್ಟದಿಂದ ಕೆಲಸ ಮಾಡಬೇಕು: ಪಾಲಿಕೆ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಮಾತನಾಡಿ,ನಗರದಲ್ಲಿ ಕೋವಿಡ್‌ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ತಳಮಟ್ಟದಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಆಯಾ ವಲಯ ಮಟ್ಟದಲ್ಲಿ ಸೋಂಕು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪಾಲಿಕೆ ಹಾಗೂ ಪೊಲಿಸ್‌ ಇಲಾಖೆ,ಎಲ್ಲ ನಾಗರೀಕರು ಕಡ್ಡಾಯವಾಗಿ ಕೋವಿಡ್‌ ನಿಯಮಗಳನ್ನು ಪಾಲಿಸಲು ಜಾಗೃತಿ ಮುಡಿಸಬೇಕು. ಜಾಗೃತಿ ಮುಡಿಸಿದ ಬಳಿಕವೂ ನಿಯಮಗಳನ್ನು ಪಾಲಿಸದಿದ್ದಲ್ಲಿ ದಂಡ ವಿಧಿಸಬೇಕು ಹಾಗೂ ಪ್ರಕರಣಗಳನ್ನು ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಉತ್ತಮ ಸಮನ್ವಯತೆ
ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಮಾತನಾಡಿ, ನಗರದಲ್ಲಿ ಕೋವಿಡ್‌ ನಿಯಂತ್ರಿಸುವ ಸಲುವಾಗಿ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸ್‌ ಸಿಬ್ಬಂದಿಯ ಜೊತೆ ಉತ್ತಮ ಸಮನ್ವಯತೆಯಿದೆ. ಪೊಲೀಸ್‌ ಇಲಾಖೆಯಿಂದ ಬೇಕಾದಂತಹ ಸಹಕಾರ ನೀಡಲಾಗುವುದು. ಕೋವಿಡ್‌ ನಿಯಮಗಳನ್ನು ಪಾಲಿಸದಿರುವವರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಹೇಳಿದರು.

ನಗರದಲ್ಲಿ ರಾತ್ರಿಕರ್ಫ್ಯೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗಿದ್ದು, ಅದನ್ನು ಸರಿಯಾಗಿ ಅನುಸರಿಸಬೇಕಿದೆ. ಅದಕ್ಕೆ ಪೊಲೀಸ್‌ ಇಲಾಖೆ ಸಹಕಾರ ಪ್ರಮುಖವಾಗಿದೆ.
-ಗೌರವ್‌ ಗುಪ್ತ,
ಬಿಬಿಎಂಪಿ ಮುಖ್ಯ ಆಯುಕ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಳ: ಆಯುಕ್ತ
ಬೆಂಗಳೂರು: ಪಾಲಿಕೆಗೆ ಅಗತ್ಯ ಸಂಖ್ಯೆಯಲ್ಲಿ ಕೋವಿಡ್‌ ಲಸಿಕೆ ಲಭ್ಯವಾಗುತ್ತಿಲ್ಲ. ಹೀಗಾಗಿ, ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ಬೇಡಿಕೆಗೆ ತಕ್ಕಂತೆ ಪಾಲಿಕೆಗೆ ಕೋವಿಡ್‌ ಲಸಿಕೆ ಲಭ್ಯವಾಗಲಿಲ್ಲ. ನಗರದಲ್ಲಿ ಶೇ.17 ರಷ್ಟು ಜನರು ಮಾತ್ರ ಲಸಿಕೆ ಪಡೆದಿದ್ದಾರೆ. ಬಿಬಿಎಂಪಿಗೆ ನಿತ್ಯ 1.50 ಲಕ್ಷ ಡೋಸ್‌ ಲಸಿಕೆ ಬೇಕಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಗೆ
ಪ್ರಸ್ತಾವನೆ(ಬೇಡಿಕೆ) ಸಲ್ಲಿಸಲಾಗಿದೆ ಎಂದರು.

ಮೂರನೇ ಅಲೆಗೆ ಪಾಲಿಕೆ ಸಿದ್ಧತೆ ನಡೆಸಿರುವ ಕುರಿತು ಮಾತನಾಡಿ, ಸದ್ಯ ಎರಡನೇ ಅಲೆಯ ವ್ಯವಸ್ಥೆ ಹಾಗೇ ಉಳಿದಿದೆ. ಇನ್ನುಮುಂದೆ ಫಿಜಿಕಲ್‌ ಟ್ರಯಾಜ್‌ ಕಡ್ಡಾಯವಾಗಿ ಮಾಡಲಾಗುತ್ತದೆ. 400ರಷ್ಟು ಬೆಡ್‌ ಮಾತ್ರ ಸರ್ಕಾರಿ ಕೋಟಾದಲ್ಲಿ ರೋಗಿಗಳು ಇದ್ದಾರೆ. ಎಲ್ಲ ದೊಡ್ಡ ಆಸ್ಪತ್ರೆಗಳಲ್ಲೂ ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣ ಮಾಡಲಾಗಿದೆ. ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೂ ಈ ಬಗ್ಗೆ ಸೂಚನೆ ನೀಡಲಾಗಿದೆ. ಪೊಬತ್ತಿಯಲ್ಲಿರುವ ಆಸ್ಪತ್ರೆಯಲ್ಲಿ ಪಾಲಿಕೆಯು, ಪ್ರತ್ಯೇಕ ಆಕ್ಸಿಜನ್‌ ಪ್ಲಾಂಟ್‌ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

12panchayath

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆ

ಒಮಿಕ್ರಾನ್ ಎಫೆಕ್ಟ್: ಹಲವು ದೇಶಗಳಲ್ಲಿ ಗಡಿ ಬಂದ್, ಎಷ್ಟು ದೇಶಗಳಲ್ಲಿ ವೈರಸ್ ಪತ್ತೆಯಾಗಿದೆ?

ಒಮಿಕ್ರಾನ್ ಎಫೆಕ್ಟ್: ಹಲವು ದೇಶಗಳಲ್ಲಿ ಗಡಿ ಬಂದ್, ಎಷ್ಟು ದೇಶಗಳಲ್ಲಿ ವೈರಸ್ ಪತ್ತೆಯಾಗಿದೆ?

ಕೆ.ಎಲ್.ರಾಹುಲ್ ಕಾರಣಕ್ಕೆ ಲಕ್ನೋ ಫ್ರಾಂಚೈಸಿ ವಿರುದ್ಧ ದೂರು ನೀಡಿದ ಐಪಿಎಲ್ ತಂಡಗಳು!

ಕೆ.ಎಲ್.ರಾಹುಲ್ ಕಾರಣಕ್ಕೆ ಲಕ್ನೋ ಫ್ರಾಂಚೈಸಿ ವಿರುದ್ಧ ದೂರು ನೀಡಿದ ಐಪಿಎಲ್ ತಂಡಗಳು!

ಇಷ್ಟು ಬೇಗ ಹಳಸಿತೇ ಕಮಲಾ-ಬೈಡೆನ್‌ ಸಂಬಂಧ?

ಇಷ್ಟು ಬೇಗ ಹಳಸಿತೇ ಕಮಲಾ-ಬೈಡೆನ್‌ ಸಂಬಂಧ?

1-dk

ಯಾರು ಮುಳುಗುತ್ತಿದ್ದಾರೆ? ಬಿಜೆಪಿಗೆ ಡಿ.ಕೆ. ಶಿವಕುಮಾರ್ ಪ್ರಶ್ನೆ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dk

ಯಾರು ಮುಳುಗುತ್ತಿದ್ದಾರೆ? ಬಿಜೆಪಿಗೆ ಡಿ.ಕೆ. ಶಿವಕುಮಾರ್ ಪ್ರಶ್ನೆ

bommai

ಬೆಳೆ ಹಾನಿಗೆ ಹೆಚ್ವಿನ ಅನುದಾನ ಒದಗಿಸಲು ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ ಬೊಮ್ಮಾಯಿ

1-fdfdf

ಅನಿಲ್ ಲಾಡ್ ರನ್ನು ಬಂಧಿಸಬೇಕು,ಕಾಂಗ್ರೆಸ್ ಕ್ರಮ ಕೈಗೊಳ್ಳಲಿ: ಛಲವಾದಿ ನಾರಾಯಣ ಸ್ವಾಮಿ

ಕೆ.ಸುಧಾಕರ್

ಮತ್ತೆ ಲಾಕ್ ಡೌನ್ ಮಾಡುವ ಯಾವುದೇ ಚಿಂತೆನೆ ಇಲ್ಲ: ಸಚಿವ ಕೆ.ಸುಧಾಕರ್

1-dsf

ನಲಪಾಡ್ ಹೆಸರು‌ ಬಹಿರಂಗವಾದ ಬಳಿಕ ಕಾಂಗ್ರೆಸ್ ಮೌನ : ಅಶ್ವಥ್ ನಾರಾಯಣ

MUST WATCH

udayavani youtube

Suratkal : ಮತ್ತೆ ATM ಕೇಂದ್ರ ಪುಡಿ ಪುಡಿ! 2ತಿಂಗಳ ಅಂತರದಲ್ಲಿ ನಡೆದ 2ನೇ ಘಟನೆ

udayavani youtube

ದಾಂಡೇಲಿ : ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು, ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

ಹೊಸ ಸೇರ್ಪಡೆ

ಬಿಕ್ಷುಕ ಸಾವು

ಚಳಿಗಾಳಿ ತಾಳಲಾರದೇ ನಿಲ್ದಾಣದಲ್ಲಿ ಭಿಕ್ಷುಕ ಸಾವು ..!

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

12panchayath

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆ

ಒಮಿಕ್ರಾನ್ ಎಫೆಕ್ಟ್: ಹಲವು ದೇಶಗಳಲ್ಲಿ ಗಡಿ ಬಂದ್, ಎಷ್ಟು ದೇಶಗಳಲ್ಲಿ ವೈರಸ್ ಪತ್ತೆಯಾಗಿದೆ?

ಒಮಿಕ್ರಾನ್ ಎಫೆಕ್ಟ್: ಹಲವು ದೇಶಗಳಲ್ಲಿ ಗಡಿ ಬಂದ್, ಎಷ್ಟು ದೇಶಗಳಲ್ಲಿ ವೈರಸ್ ಪತ್ತೆಯಾಗಿದೆ?

election city corporation

ಅನರ್ಹತೆ ಭೀತಿಯಲಿ 7 “ಕ್ಕೆ ನಗರಸಭೆ ಸದಸ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.