ಹೇಮಗಿರಿಯಲ್ಲಿ ಫೆ.10ರಂದು ದನಗಳ ಜಾತ್ರೆ : ಗ್ರಾಮಸ್ಥರು, ಕಂದಾಯ ಇಲಾಖೆ ನೌಕರರಿಂದ ಶ್ರಮದಾನ

Team Udayavani, Jan 26, 2021, 2:01 PM IST

ಹೇಮಗಿರಿಯಲ್ಲಿ ಫೆ.10ರಂದು ದನಗಳ ಜಾತ್ರೆ : ಗ್ರಾಮಸ್ಥರು, ಕಂದಾಯ ಇಲಾಖೆ ನೌಕರರಿಂದ ಶ್ರಮದಾನi

ಮಂಡ್ಯ: ಇತಿಹಾಸ ಪ್ರಸಿದ್ಧ ಹೇಮಗಿರಿಯಲ್ಲಿ ದನಗಳ ಜಾತ್ರೆ ಫೆ.10ರಂದು ಪ್ರಾರಂಭವಾಗುತ್ತಿ ರುವ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಎಂ. ಶಿವಮೂರ್ತಿ ಮತ್ತು ಗ್ರಾಮಾಂತರ ಠಾಣೆಯ ಪಿಎಸ್‌ಐ ಸುರೇಶ್‌ ನೇತೃತ್ವದಲ್ಲಿ ಬಂಡಿಹೊಳೆ ಗ್ರಾಮಸ್ಥರು ಹಾಗೂ ಕಂದಾಯ ಇಲಾಖಾ ನೌಕರರು ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವತ್ಛಗೊಳಿಸಿದರು.

ಹೇಮಗಿರಿ ಪುರಾತನ ಕಾಲದಿಂದಲೂ ದನಗಳ ಜಾತ್ರೆಗೆ ಹೆಸರು ವಾಸಿಯಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ದನಕರುಗಳನ್ನು ಜಾತ್ರೆಗೆ ಕರೆತರಲಾಗುತ್ತದೆ. ಒಂದು ವಾರಗಳ ಕಾಲ ನಡೆಯುವ ದನಗಳ ಜಾತ್ರೆಯನ್ನು ನೋಡುವುದೇ
ಒಂದು ಸೊಬಗು. ಮಾಲೀಕರು ತಮ್ಮ ದನಗಳಿಗೆ ವಿಶೇಷ ಅಲಂಕಾರಗಳನ್ನು ಮಾಡಿಕೊಂಡು ಮೆರವಣಿಗೆಯಲ್ಲಿ ವಾದ್ಯಗಳಂದಿಗೆ ಇಲ್ಲಿಗೆ ಆಗಮಿಸುತ್ತಾರೆ. ದನಗಳಿಗೆ ಶಾಮಿಯಾನ ಹಾಕಿಸಿ ದನಗಳನ್ನು ನೋಡಲು ಬಂದವರಿಗೆ ಸ್ಥಳೀಯದಲ್ಲಿ
ಸಿಗುವ ಸತ್ಕಾರ ಮಾಡಿ ಕಳುಹಿಸುವ ಪರಿಪಾಟ ಹಿಂದಿನಿಂದಲೂ ಬೆಳೆದುಬಂದಿದೆ.

ಇದನ್ನೂ ಓದಿ:ಕೋಟ : ಮಕ್ಕಳ ಅಪಹರಣ ಯತ್ನ ಆರೋಪ ಇಬ್ಬರು ಪೊಲೀಸರ ವಶಕ್ಕೆ

ಟೀ ಶರ್ಟ್‌ ವಿತರಣೆ: ಈ ಹಿನ್ನೆಲೆಯಲ್ಲಿ ಹೇಮಗಿರಿ ಬೆಟ್ಟದ ಸುತ್ತ ಹಾಗೂ ದನಕರುಗಳನ್ನು ಕಟ್ಟುವ ಜಾತ್ರಾ ಮಾಳದಲ್ಲಿ ಹುಲುಸಾಗಿ ಬೆಳೆದಿದ್ದ ಗಿಡಗಳನ್ನು ಸ್ವತ್ಛಗೊಳಿಸುವ ಕಾರ್ಯ ನಡೆಯಿತು. ಸುಮಾರು 50-60 ಜನರ ತಂಡ ಕುಡುಗೋಲುಗಳನ್ನು ಹಿಡಿದು ಶ್ರಮದಾನದಲ್ಲಿ ಭಾಗವಹಿಸಿ ನಾಲ್ಕು ಗಂಟೆಗೂ ಅಧಿಕ ಸಮಯ ಸ್ವತ್ಛತಾ ಕೆಲಸದಲ್ಲಿ ಭಾಗವಹಿಸಿದ್ದರು. ಬಿಜಿಎಸ್‌
ಶಾಲೆಯಿಂದ ಉಪಹಾರದ ವ್ಯವಸ್ಥೆ, ತಾಲೂಕು ಆಡಳಿತದಿಂದ ಶ್ರಮದಾನದಲ್ಲಿ ಭಾಗವಹಿಸಿದವರಿಗೆ ಟೀ ಶರ್ಟ್‌ಗಳನ್ನು ವಿತರಿಸಲಾಯಿತು.

ಉಪನ್ಯಾಸಕ ಪದ್ಮನಾಭ, ರಾಜಸ್ವ ನಿರೀಕ್ಷಕಿ ಚಂದ್ರಕಲಾ, ಬಂಡಿಹೊಳೆ ಗ್ರಾಪಂ ಸದಸ್ಯ ದರ್ಶನ್‌, ಮಾಜಿ ಅಧ್ಯಕ್ಷರಾದ ಕಾಯಿಮಂಜೇಗೌಡ, ಮಂಜುನಾಥ್‌ ಮುಖಂಡರಾದ ರಾಜಶೇಖರ, ವಿಶ್ವನಾಥ್‌, ಚಂದ್ರಹಾಸೇಗೌಡ, ಜಯರಾಮೇ ಗೌಡ, ರಾಜಸ್ವ ನಿರೀಕ್ಷಕರಾದ ರಾಮಚಂದ್ರ, ರಾಜಮೂರ್ತಿ, ಗೋಪಾಲಕೃಷ್ಣ ಅವಧಾನಿಗಳು, ಪ್ರಾಂಶುಪಾಲೆ ಪವಿತ್ರ ಭಾಗವಹಿಸಿದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.