Crime: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Team Udayavani, Oct 17, 2023, 12:04 AM IST
ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆಯಂತಹ ಮೂರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿ, ಬಜಾಲ್ ಫೈಝಲ್ ನಗರದ ತೌಸೀಫ್(27)ನನ್ನು ಪೊಲೀಸರು ಮುಂಬಯಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಆರೋಪಿ ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಲಾಗಿತ್ತು ಅ. 14ರಂದು ಆರೋಪಿ ಸೌದಿ ಅರೇಬಿಯಾದ ರಿಯಾದ್ನಿಂದ ಮಂಗಳೂರಿಗೆ ಬರಲು ಮುಂಬಯಿಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನದಲ್ಲಿ ಇಳಿಯುತ್ತಿದ್ದ. ಇಮಿಗ್ರೇಷನ್ ಅಧಿಕಾರಿಗಳು ಮಂಗಳೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ