ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

ಒಡಿಶಾ ಪೊಲೀಸರ ಅಸಹಕಾರದಿಂದ ಮೂರು ದಿನ ಅನ್ನಾಹಾರ ಬಿಟ್ಟು ಮೃತದೇಹಕ್ಕೆ ಕಾದಿದ್ದ ತಾಯಿ

Team Udayavani, Jan 23, 2022, 7:55 AM IST

ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

ಸಾಂದರ್ಭಿಕ ಚಿತ್ರ.

ಕಾರ್ಕಳ: ಒಡಿಶಾದ ಖಾಸಗಿ ಕಂಪೆನಿಯಲ್ಲಿ ಕೆಲಸಕಿದ್ದ ಕಾರ್ಕಳ ಮೂಲದ ಯುವಕನೋರ್ವ ವಿಷಾಹಾರ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಚಿಕಿತ್ಸೆ ಫ‌ಲಿಸದೆ ದಾರಿ ಮಧ್ಯೆ ಮೃತಪಟ್ಟಿದ್ದು, ಪುತ್ರನ ಶವ ಪಡೆಯಲು ತಾಯಿ 3 ದಿನಗಳಿಂದ ಅನ್ನಾಹಾರ ಸೇವಿಸಿದೆ ಕಾಯುತ್ತಲಿದ್ದರು. ಒಡಿಶಾ ಪೊಲೀಸರ ಅಸಹಕಾರದಿಂದ ಹಸ್ತಾಂತರ ಪ್ರಕ್ರಿಯೆಗೆ ಅಡ್ಡಿಯಾಗಿತ್ತು. ಕೊನೆಗೆ ಶನಿವಾರ ಜಿಲ್ಲಾ ಪೊಲೀಸ್‌ ಅಧಿಕಾರಿಗಳ ಸಹಕಾರದಿಂದ ಪುತ್ರನ ಮೃತದೇಹವನ್ನು ಕಾರ್ಕಳ ಪೊಲೀಸರು ತಾಯಿಗೆ ಹಸ್ತಾಂತರಿಸಿದರು.

ಘಟನೆ ಹಿನ್ನೆಲೆ
ಕಸಾಬಾ ನಿವಾಸಿ ಧಮೇಂದ್ರ ಅವರ ಅಣ್ಣನ ಪುತ್ರ ಕಾರ್ತಿಕ್‌ (25) ಐದು ವರ್ಷಗಳಿಂದ ಮಂಗಳೂರು ಪ್ಲಾನ್‌ ಟೆಕ್‌ ಕಂಪೆನಿಯಲ್ಲಿ ಸೇಫ್ಟಿ ಸೂಪರ್‌ವೈಸರ್‌ ಆಗಿ ಕೆಲಸ ಮಾಡುತ್ತಿದ್ದರು. ಅನಂತರ ಒಡಿಶಾಕ್ಕೆ ತೆರಳಿ ಅದೇ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಜ. 14ರಂದು ಮಂಗಳೂರು ಕಂಪೆನಿಯ ಮ್ಯಾನೇಜರ್‌ ಕುಶಲ್‌ ಅವರು ಧರ್ಮೆಂದ್ರ ಅವರಿಗೆ ಕರೆ ಮಾಡಿ ಕಾರ್ತಿಕ್‌ ವಿಷಾಹಾರ ಸೇವಿಸಿದ್ದಾನೆ. ಆತನ ಸ್ನೇಹಿತರು ಕಟಕ್‌ನ ರಿಲಾಕ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾಗಿ ತಿಳಿಸಿದ್ದಾರೆ. ಧಮೇಂದ್ರವರು ಆತನ ಪೋಷಕರಿಗೆ ವಿಚಾರ ತಿಳಿಸಿ ಸಂಬಂಧಿಕರಾದ ವೇಲು ಮತ್ತು ಕೃಷ್ಣ ಜತೆ ಜ. 17ರಂದು ಕಟಕ್‌ ತಲುಪಿದ್ದರು.

ದಾರಿ ಮಧ್ಯೆ ಸಾವು!
ಕಟಕ್‌ನ ರಿಲಾಕ್ಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕಾರ್ತಿಕ್‌ ಆ ವೇಳೆ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಆತನ ಚಿಕಿತ್ಸೆಗೆ ಹೆಚ್ಚಿನ ಹಣದ ಆವಶ್ಯಕತೆ ಬಗ್ಗೆ ಆಸ್ಪತ್ರೆಯವರು ತಿಳಿಸಿದ್ದರು. 94 ಸಾವಿರ ರೂ. ಆಸ್ಪತ್ರೆ ಬಿಲ್‌ ಕೂಡ ಆಗಿತ್ತು. ಆಸ್ಪತ್ರೆಯಿಂದ ಅಲ್ಲಿನ ಮಂಗಲ್‌ ಬಾಗ್‌ ಪೊಲೀಸ್‌ ಠಾಣೆಗೆ ಮಾಹಿತಿ ಬಂದು ಪೊಲೀಸರು ಆಸ್ಪತ್ರೆಗೆ ತೆರಳಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಕಾರ್ತಿಕ್‌ನನ್ನು ಅಲ್ಲಿನ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಆ್ಯಂಬುಲೆನ್ಸ್‌ನಲ್ಲಿ ಉಡುಪಿ ಕಡೆಗೆ ಕರೆ ತರುತ್ತಿದ್ದ ವೇಳೆ ಜ. 19ರ ಮಧ್ಯಾಹ್ನ ದಾರಿ ಮಧ್ಯೆ ಜೂಸ್‌ ಕುಡಿಸಿದ್ದರು. ಕಾರ್ಕಳ ತಲುಪುವ ವೇಳೆ ಆತ ತೀರಾ ಅಸ್ವಸ್ಥನಾಗಿದ್ದ. ಸರಕಾರಿ ಆಸ್ಪತ್ರೆಗೆ ಕರೆ ತಂದಾಗ ಅಲ್ಲಿ ವೈದ್ಯರು ಆತ ಮೃತಪಟ್ಟಿದ್ದನ್ನು ಖಚಿತಪಡಿಸಿದ್ದರು.

ದೂರು ಸ್ವೀಕರಿಸದ
ಒಡಿಶಾ ಪೊಲೀಸರು
ಘಟನೆ ಬಗ್ಗೆ ಮಾಹಿತಿ ಪಡೆದ ಕಾರ್ಕಳ ನಗರ ಪೊಲೀಸ್‌ ಠಾಣೆ ಯವರು ಕಾರ್ತಿಕ್‌ ಒಡಿಶಾ ರಾಜ್ಯದ ಪಾರಾದೀಪ್‌ ಲಾಕ್‌ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾರಣದಿಂದ ಪ್ರಕರಣದ ಬಗ್ಗೆ ಒಡಿಶಾದ ಪಾರಾದೀಪ್‌ ಲಾಕ್‌ ಪೊಲೀಸ್‌ ಠಾಣೆಗೆ ಸೂಚನ ಪತ್ರ ಕಳುಹಿಸಿ ಮಾಹಿತಿ ನೀಡಿದ್ದರು. ಕಾರ್ತಿಕ್‌ನ ಮೃತದೇಹ ಮಣಿಪಾಲ ಕೆಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಒಡಿಶಾ ಪಾರಾದೀಪ್‌ ಲಾಕ್‌ ಠಾಣೆಯ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಬಿಟ್ಟುಕೊಡದೆ ಇರುವುದರಿಂದ ಮೃತದೇಹವು ಮೂರು ದಿನಗಳಿಂದ ಶವಗಾರದಲ್ಲೇ ಇರುವಂತಾಗಿದೆ. ಈ ಬಗ್ಗೆ ಜಿಲ್ಲಾ ಎಸ್‌ಪಿಯವರು ಮುತುವರ್ಜಿ ವಹಿಸಿ ಒಡಿಶಾ ಎಸ್‌ಪಿಯವರಲ್ಲಿ ಮಾತುಕತೆ ನಡೆಸಿದರೂ, ಅಲ್ಲಿನ ಪೊಲೀಸರು ಕಾರ್ಕಳಕ್ಕೆ ಬರಲು ಹಿಂದೇಟು ಹಾಕಿದ್ದರು. ಕೊನೆಗೆ ಎಸ್‌ಪಿಯವರು ಸ್ವಯಂ ನಿರ್ಧಾರ ಕೈಗೊಂಡು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಪ್ರಕ್ರಿಯೆಗಳ ಮೂಲಕ ತಾಯಿಗೆ ಮೃತದೇಹವನ್ನು ಹಸ್ತಾಂತರಿಸಲು ಕಿರಿಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದರು. ಅದರಂತೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಟಾಪ್ ನ್ಯೂಸ್

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ 

ಕುತುಬ್‌ ಮಿನಾರ್‌ ಉತ್ಖನನಕ್ಕೆ ಆದೇಶಿಸಿಲ್ಲ! ಸಚಿವ ಜಿ.ಕೆ.ರೆಡ್ಡಿ ಸ್ಪಷ್ಟನೆ ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

ಕಡೆಕಾರ್‌: ಕೆರೆಯಲ್ಲಿ ಮುಳುಗಿ 8 ವರ್ಷದ ಬಾಲಕ ಸಾವು

ಬ್ರಹ್ಮಾವರ: ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಕಾರು ಪತ್ತೆ; ಯುವಕ – ಯುವತಿ ಸಜೀವ ದಹನ

ಬ್ರಹ್ಮಾವರ: ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಕಾರು ಪತ್ತೆ; ಸುಟ್ಟು ಕರಕಲಾದ ಯುವಕ – ಯುವತಿ

ಉಡುಪಿ: ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!

ಉಡುಪಿ: ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!

ಮರಳು ದಿಬ್ಬಗಳ ತೆರವು, ಸಾಗಾಟ ನಿಷೇಧ: ಡಿಸಿ ಕೂರ್ಮಾ ರಾವ್‌

ಮರಳು ದಿಬ್ಬಗಳ ತೆರವು, ಸಾಗಾಟ ನಿಷೇಧ: ಡಿಸಿ ಕೂರ್ಮಾ ರಾವ್‌

ಉಡುಪಿ ಜಿಲ್ಲೆಯ ಇನ್ನೋರ್ವ ವಿದ್ಯಾರ್ಥಿಗೆ ಪೂರ್ಣಾಂಕ

ಉಡುಪಿ ಜಿಲ್ಲೆಯ ಇನ್ನೋರ್ವ ವಿದ್ಯಾರ್ಥಿಗೆ ಪೂರ್ಣಾಂಕ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.