IT-BT ಸಹಭಾಗಿತ್ವದಲ್ಲಿ ಸೈಬರ್‌ ಕೇಂದ್ರ: ಪರಮೇಶ್ವರ್‌

ಬೆಂಗಳೂರು ಸೈಬರ್‌ ಸ್ಪೇರ್‌ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಕೇಂದ್ರ ಸ್ಥಾಪನೆ

Team Udayavani, Sep 28, 2023, 12:12 AM IST

dr g param

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್‌ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್‌ಸ್ಪೇರ್‌ ಸೆಂಟರ್‌ ಫಾರ್‌ ಎಕ್ಸ್‌ಲೆನ್ಸ್‌ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ಐಟಿ-ಬಿಟಿ ಕಂಪೆನಿಗಳ ಮುಖ್ಯಸ್ಥರ ಜತೆ ಹಮ್ಮಿಕೊಂಡಿದ್ದ ಟೆಕ್‌ ಫ್ಯೂಶನ್‌ ಸನ್‌ರೈಸ್‌ ಸಮ್ಮಿಟ್‌-2023 ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮುಂದಿದೆ. ಸಾರ್ವಜನಿಕ ಸುರಕ್ಷತೆಯಿಂದ ಪೊಲೀಸ್‌ ಇಲಾಖೆಯಲ್ಲೂ ಸೈಬರ್‌ ಸೆಕ್ಯೂರಿಟಿ ಕೌಶಲ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ. ಪೊಲೀಸ್‌ ಇಲಾಖೆಯಲ್ಲಿ ಎಂಜಿನಿಯರ್‌, ಎಂಎಸ್ಸಿ ಹಾಗೂ ತಾಂತ್ರಿಕ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಇದ್ದಾರೆ. ಅಂತಹ ಅಧಿಕಾರಿಯನ್ನು ಗುರುತಿಸಿ ಐಟಿ ಕಂಪೆನಿಗಳ ಸಹಭಾಗಿತ್ವದಲ್ಲಿ ಸೈಬರ್‌ ಸೆಕ್ಯೂರಿಟಿ ಕುರಿತು ತರಬೇತಿ ನೀಡಲಾಗುತ್ತದೆ. ಅದಕ್ಕಾಗಿ ಸೈಬರ್‌ ಸ್ಪೇರ್‌ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದರು.
ಸಭೆಯಲ್ಲಿ ನಗರದ ಸುಮಾರು 40ಕ್ಕೂ ಹೆಚ್ಚು ಐಟಿ ಕಂಪನಿ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದು, ಸೈಬರ್‌ ಸುರಕ್ಷತೆ ಹಾಗೂ ತಂತ್ರಜ್ಞಾನದ ಬಗ್ಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಸಂಚಾರ ದಟ್ಟಣೆ, ಸೈಬರ್‌ ಕ್ರೈಂ ಸಮಸ್ಯೆ ಪ್ರಮುಖವಾಗಿದೆ. ಈ ಸಮಸ್ಯೆಗಳ ಪರಿಹಾರ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದರು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌, ನಗರ ಪೊಲೀಸ್‌ ಆಯುಕ್ತ ದಯಾನಂದ, ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್‌. ಅನುಚೇತ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ ಸತೀಶ್‌ ಕುಮಾರ್‌, ರಮಣ ಗುಪ್ತಾ, ನೇಮಕಾತಿ ಡಿಜಿಪಿ ಕಮಲ್‌ ಪಂತ್‌, ಎಡಿಜಿಪಿ ಪ್ರತಾಪ್‌ ರೆಡ್ಡಿ ಸೇರಿ ಇತರೆ ಹಿರಿಯ ಐಪಿಎಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಯೂಆರ್‌ಕೋಡ್‌ ಸ್ಕ್ಯಾನ್‌ ದೂರು; ಯಶಸ್ವಿ
ಪೊಲೀಸ್‌ ಇಲಾಖೆ ನಗರದಲ್ಲಿನ ಐಒಎಸ್‌ ತಂತ್ರಜ್ಞಾನ ಅಳವಡಿಕೆ, ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮೂಲಕ ದೂರು ಸ್ವೀಕರಿಸುವುದು, ಮೊಬೈಲ್‌ ಕಳ್ಳತನ ಪ್ರಕರಣವನ್ನು ಸುಲಭವಾಗಿ ದಾಖಲಿಸಲು ಮೊಬೈಲ್‌ ಆ್ಯಪ್‌ಗ್ಳು ಹಾಗೂ ವೆಬ್‌ಸೈಟ್‌ಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಇವುಗಳ ಬಳಕೆಯಲ್ಲಿ ಯಶಸ್ವಿಯಾಗಿದ್ದೇವೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ನಿರ್ವಹಣೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ಹೇಗೆ ರೂಪಿಸಬೇಕು ಎಂಬ ಬಗ್ಗೆಯೂ ಐಟಿ ಕಂಪೆನಿಗಳಿಂದ ಸಲಹೆ ಪಡೆಯಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.