ಡಿಕೆಶಿ ಇಂದು ಬಿಡುಗಡೆಯಾಗುವ ವಿಶ್ವಾಸವಿದೆ: ಹೆಚ್.ಡಿ.ದೇವೇಗೌಡ
ಬಿಜೆಪಿ ವಿರೋಧಿಸುವವರ ವಿರುದ್ದ ಕೇಂದ್ರದ ಸೇಡಿನ ರಾಜಕಾರಣ
Team Udayavani, Sep 25, 2019, 11:03 AM IST
ನವದೆಹಲಿ: ಬಿಜೆಪಿ ವಿರೋಧಿಸುವವರ ವಿರುದ್ದ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ.ಇದು ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಂದ ಸಂಸದ ಡಿ.ಕೆ.ಸುರೇಶ್ ಜೊತೆ ಕೆಲ ಹೊತ್ತು ಸಮಾಲೋಚನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ , ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ. ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಹೊಸದೇನಲ್ಲ. ಕಳೆದ ಐದು ವರ್ಷದಿಂದ ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ಹೇಳುವ ಅಗತ್ಯವಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು ,ತಿಹಾರ್ ಜೈಲಿನಲ್ಲಿರುವ ಶಿವಕುಮಾರ್ ಭೇಟಿಯಾಗಲು ಕಾಲಾವಕಾಶ ದೊರೆಯಲಿಲ್ಲ ಎಂದು ತಿಳಿಸಿದರು.
ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಎಚ್.ಡಿ.ದೇವೇಗೌಡರು ಹಾಗೂ ರೇವಣ್ಣ ಅವರು ಶಿವಕುಮಾರ್ ಭೇಟಿಯಾಗಲು ಬಂದಿದ್ದರು. ಕಾಲಾವಕಾಶ ಕೊರತೆಯಿಂದ ಭೇಟಿ ಸಾಧ್ಯವಾಗಲಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಪೋನ್ ಮಾಡಿ ನನ್ನ ಜತೆ ಮಾತನಾಡಿದ್ದಾರೆ. ಇಂದು ಜಾಮೀನು ಅರ್ಜಿ ತೀರ್ಪು ಇದೆ. ಡಿ.ಕೆ ಶಿವಕುಮಾರ್ ಬಿಡುಗಡೆ ಯಾಗುವ ವಿಶ್ವಾಸವಿದೆ ಎಂದು ತಿಳಿಸಿದರು.
ಈ ವೇಳೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ
ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು
ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ
ಜೂ. 21: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ