ದಕ್ಷಿಣ ಕನ್ನಡ: 111; ಉಡುಪಿ: 88 ಮಂದಿಗೆ ಕೋವಿಡ್ ದೃಢ
Team Udayavani, Jan 6, 2022, 7:05 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದಿನದ ಪ್ರಕರಣ ಗಣನೀಯ ಏರಿಕೆ ಕಂಡಿದ್ದು, ನೂರರ ಗಡಿ ದಾಟಿದೆ. ಜಿಲ್ಲೆಯಲ್ಲಿ ಬುಧವಾರ 111 ಮಂದಿಗೆ ಕೊರೊನಾ ದೃಢಪಟ್ಟಿದೆ.
11 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 441 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಸದ್ಯ ಶೇ.1.43 ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.
ಉಡುಪಿ: 88 ಮಂದಿಗೆ ಸೋಂಕು
ಉಡುಪಿ: ಜಿಲ್ಲೆಯಲ್ಲಿ ಬುಧವಾರ 88 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 4,092 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 18 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 352 ಪ್ರಕರಣಗಳು ಸಕ್ರಿಯವಾಗಿವೆ.
ಕಾಸರಗೋಡು: 83 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 83 ಮಂದಿಗೆ ಸೋಂಕು ದೃಢಪಟ್ಟಿದ್ದು 74 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 361 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೇರಳ 4,801 ಮಂದಿಗೆ ಸೋಂಕು
ರಾಜ್ಯದಲ್ಲಿ ಬುಧವಾರ 4,801 ಮಂದಿಗೆ ಸೋಂಕು ದೃಢಪಟ್ಟಿದ್ದು 1,813 ಮಂದಿ ಗುಣಮುಖರಾಗಿದ್ದಾರೆ. 29 ಓಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಡಗು: 22 ಮಂದಿಗೆ ಕೊರೊನಾ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ 22 ಮಂದಿಗೆ ಕೊರೊನಾ ದೃಢಪಟ್ಟಿದೆ. 197 ಸಕ್ರಿಯ ಪ್ರಕರಣಗಳಿವೆ. ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 37 ಆಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.77 ಆಗಿದೆ.