ಕೋವಿಡ್ ಲಸಿಕಾ ಕೇಂದ್ರದಲ್ಲಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ
Team Udayavani, Jan 14, 2021, 4:44 PM IST
ಮಂಗಳೂರು : ಕೋವಿಡ್ ನಿರೋಧಕ ಲಸಿಕೆ ಈಗಾಗಲೇ ಜಿಲ್ಲೆಗೆ ಆಗಮಿಸಿದ್ದು, ಜನವರಿ 16ರಂದು ಅಧಿಕೃತವಾಗಿ ಆರಂಭವಾಗಲಿದ್ದು ಜಿಲ್ಲೆಯ ಎಲ್ಲಾ ಕೇಂದ್ರದಲ್ಲಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಕೋವಿಡ್ 19 ಲಸಿಕಾ ಶಿಬಿರದ ಪೂರ್ವ ಸಿದ್ದತೆಯ ಕುರಿತ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು ಜನವರಿ 16 ರಿಂದ ಜಿಲ್ಲೆಯ 6 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದು, ವ್ಯಾಕ್ಸಿನೇಷನ್ ಪಡೆಯುವ ಫಲಾನುಭವಿಗಳನ್ನು ವೀಕ್ಷಣೆಯಲ್ಲಿಟ್ಟು ಅಡ್ಡ ಪರಿಣಾಮದ ಕುರಿತು ಖಾತ್ರಿ ಪಡಿಸಿಕೊಳ್ಳಿ ಎಂದರು.
ಮಂಗಳೂರು ಕೇಂದ್ರಕ್ಕೆ ಲಸಿಕೆ ತಲುಪಿದ್ದು, ಅದನ್ನು ಜಿಲ್ಲೆಯ 6 ಕೇಂದ್ರಗಳಿಗೆ ತಲುಪಿಸುವ ತಯಾರಿ ನಡೆದಿದೆ ಎಂದರು.
ಇದನ್ನೂ ಓದಿ:ನಾವು 17 ಮಂದಿ ಶಾಸಕರು ಮತ್ತೊಮ್ಮೆ ಸಭೆ ಸೇರಲಿದ್ದೇವೆ: ಆರ್.ಶಂಕರ್
ಉದ್ಘಾಟನೆಯ ದಿನದಂದು ಆರೋಗ್ಯ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಈವರೆಗೆ ಯಾವುದೇ ಅಡ್ಡ ಪರಿಣಾಮ ಯಾವುದೇ ಭಾಗದಲ್ಲಿ ಕಂಡುಬಂದಿಲ್ಲ ಅದರಂತೆ ಲಸಿಕೆ ನೀಡುವ ಮುನ್ನ ಫಲಾನುಭವಿಗಳನ್ನು ವೈದ್ಯಕೀಯ ತಪಾಸಣೆ ನಡೆಸಿ, 18 ವರ್ಷಕ್ಕಿಂತ ಮೇಲ್ಪಟ್ಟವರನ್ನು ಅತ್ಯಂತ ಸೂಕ್ಷ್ಮವಾಗಿ ತಪಾಸಣೆ ನಡೆಸಬೇಕು. ಫಲಾನುಭವಿಗಳಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಜಾಗೃತಿ ವಹಿಸಬೇಕು ಹೇಳಿದರು.
ವ್ಯಾಕ್ಸಿನ್ ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಸಮರ್ಪಕವಾಗಿ ಬಳಕೆಯಾಗುವಂತೆ ನಿಗಾ ವಹಿಸಬೇಕು ಹಾಗೂ ಇನ್ನಿತರ ಅಗತ್ಯ ವೈದ್ಯಕೀಯ ಉಪಕರಣಗಳು ಲಭ್ಯವಿರಬೇಕು. ಅದರ ಜೊತೆಗೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಒಂದು ವೇಳೆ ವ್ಯಾಕ್ಸಿನ್ ಪಡೆದ ವ್ಯಕ್ತಿಯಲ್ಲಿ ಯಾವುದೇ ತೊಂದರೆ ಕಂಡು ಬಂದಲ್ಲಿ ಸೂಕ್ತ ತಪಾಸನಣೆ ನಡೆಸಿ ತುರ್ತು ಚಿಕಿತ್ಸೆ ನೀಡಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಕೃಷಿ ಸಚಿವರಿಂದ ಬಿಡುಗಡೆಕಾರ್ಲಕಜೆ ಅಕ್ಕಿ
ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ
ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
2ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ, 447 ಫಲಾನುಭವಿಗಳಲ್ಲಿ ಅಡ್ಡಪರಿಣಾಮ ಪತ್ತೆ: ಕೇಂದ್ರ
ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ