7 ಬಾರಿ ಪಾಸಿಟಿವ್‌ ಬಂದ ವ್ಯಕ್ತಿ ಹೋಂ ಕ್ವಾರಂಟೈನ್‌ಗೆ

Team Udayavani, Jun 21, 2020, 7:27 AM IST

7 ಬಾರಿ ಪಾಸಿಟಿವ್‌ ಬಂದ ವ್ಯಕ್ತಿ ಹೋಂ ಕ್ವಾರಂಟೈನ್‌ಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ನಾಲ್ವರಿಗೆ ಕೋವಿಡ್ ದೃಢಪಟ್ಟಿದೆ. ಇದೇ ವೇಳೆ 15 ಮಂದಿ ಗುಣಮುಖರಾಗಿದ್ದಾರೆ.

ಸೌದಿ ಅರೇಬಿಯಾದಿಂದ ಜೂ. 11ರಂದು ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ 30 ವರ್ಷದ ಯುವಕ, ಕುವೈಟ್‌ನಿಂದ ಜೂ. 17ರಂದು ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ 57 ವರ್ಷದ ವ್ಯಕ್ತಿ, ಮುಂಬಯಿಯಿಂದ ಜೂ. 9ರಂದು ಆಗಮಿಸಿ ಕ್ವಾರಂಟೈನ್‌ನಲ್ಲಿದ್ದ 21 ವರ್ಷದ ಯುವಕ ಹಾಗೂ ಈ ಹಿಂದೆ ಕೋವಿಡ್ ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 21  ವರ್ಷದ ಯುವಕನಿಗೆ ಕೋವಿಡ್ ದೃಢಪಟ್ಟಿದೆ. ಸೋಂಕು ಪೀಡಿತರನ್ನು ವೆನ್ಲಾಕ್‌ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದೊಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ಕೋವಿಡ್‌-19 ತಾಂತ್ರಿಕ ಸಲಹಾ ಸಮಿತಿಯ ತೀರ್ಮಾನದಂತೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಈ ವ್ಯಕ್ತಿಗೆ ಏಳು ಬಾರಿ ಕೋವಿಡ್ ಪರೀಕ್ಷೆ ಮಾಡಿದಾಗಲೂ ಪಾಸಿಟಿವ್‌ ಬಂದಿತ್ತು. ಒಂದು ತಿಂಗಳಾದರೂ ಕೋವಿಡ್ ಹೋಗದ ಹಿನ್ನೆಲೆಯಲ್ಲಿ ಇದೀಗ ತಾಂತ್ರಿಕ ಸಲಹಾ ಸಮಿತಿಯ ತೀರ್ಮಾನದಂತೆ ವ್ಯಕ್ತಿಯನ್ನು ಹೋಂ ಕ್ವಾರಂಟೈನ್‌ಗೆ ಕಳುಹಿಸಿಕೊಡಲಾಗಿದೆ. 14 ದಿನಗಳ ಹೋಂ ಕ್ವಾರಂಟೈನ್‌ ಬಳಿಕ ಮತ್ತು  ಗಂಟಲ ದ್ರವ ಪರೀಕ್ಷೆ ನಡೆಸಲಾ ಗುತ್ತದೆ. ಎಲ್ಲ ರೀತಿಯ ಮುಂಜಾಗರೂಕತೆ ಬಗ್ಗೆ ವ್ಯಕ್ತಿಗೆ ತಿಳಿಸಲಾಗಿದೆ ಎಂದು ಡಿಎಚ್‌ಒ ಡಾ| ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಇಬ್ಬರು ಐಸಿಯುವಿನಲ್ಲಿ
ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 70 ವರ್ಷದ ವೃದ್ಧ ಮಧುಮೇಹ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯು ವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 52 ವರ್ಷದ ವ್ಯಕ್ತಿ ಮಧುಮೇಹ ಮತ್ತು ಅಬುìದ ರೋಗದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

56 ವರದಿ ಬಾಕಿ
ಕೋವಿಡ್‌ ಆಸ್ಪತ್ರೆಯಲ್ಲಿ ಗುರುವಾರ ಸ್ವೀಕರಿಸಲಾದ 121 ಮಂದಿಯ ಗಂಟಲ ದ್ರವ ಮಾದರಿ ಪರೀಕ್ಷೆ ವರದಿ ಪೈಕಿ 4 ಪಾಸಿಟಿವ್‌, 117 ನೆಗೆಟಿವ್‌ ಆಗಿವೆ.
ಹೊಸದಾಗಿ 116 ಮಂದಿಯ ಮಾದರಿಯನ್ನು ಪರೀಕ್ಷೆಗೆ ಕಳುಹಿಸ ಲಾಗಿದ್ದು, ಈ ಹಿಂದಿನ 56 ಮಂದಿಯ ಪರೀಕ್ಷಾ ವರದಿಗಳು ಬರಲು ಬಾಕಿ ಇವೆ.

ಮನೆ ಬಿಡದ ವೃದ್ಧನಿಗೂ ತಗಲಿದ ಸೋಂಕು!
ಪುತ್ತೂರು: ಜ್ವರ, ಕೆಮ್ಮು, ಶೀತದ ಕಾರಣಕ್ಕೆ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಚಿಕ್ಕಮುಟ್ನೂರು ರಾಗಿದಕುಮೇರಿನ ವೃದ್ಧರೊಬ್ಬರಿಗೆ ಕೋವಿಡ್ ಸೋಂಕು ತಗಲಿರುವುದು ಶನಿವಾರ ದೃಢಪಟ್ಟಿದೆ.

ಅವರು ಹೊರದೇಶ ಅಥವಾ ಹೊರ ರಾಜ್ಯ ದಿಂದ ಬಂದವರಲ್ಲ. ಕೋವಿಡ್ ಸೋಂಕು ಪೀಡಿತ ವ್ಯಕ್ತಿಗಳ ಅಥವಾ ಪರಿಸರದ ಯಾರ ಸಂಪರ್ಕವನ್ನೂ ಹೊಂದಿದವರಲ್ಲ.

ಮನೆಯಲ್ಲೇ ಇದ್ದ ಅವರನ್ನು ಕೊರೊನಾ ಬಾಧಿಸಿರುವುದು ಹೇಗೆ ಎಂದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಸೋಂಕಿನ ಮೂಲ ವನ್ನು ಶೋಧಿಸಲಾಗುತ್ತಿದೆ.

ಅವರನ್ನು ಮಂಗಳೂರು ವೆನ್ಲಾಕ್‌ ಕೋವಿಡ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ವ್ಯಕ್ತಿ ನಗರಸಭೆ ಸದಸ್ಯೆಯೋರ್ವರ ಮಾವನಾಗಿದ್ದು, ಒಂದೇ ಮನೆಯಲ್ಲಿ ವಾಸವಾಗಿದ್ದರು.

ಪಾಸಿಟಿವ್‌ ಕಂಡು ಬಂದ ಕಾರಣ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಜನಪ್ರತಿನಿಧಿ ಹಾಗೂ ಅವರ ಸಂಪರ್ಕದಲ್ಲಿದ್ದ ಇತರರನ್ನು ಗುರುತಿಸಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ನಗರಸಭಾ ಸದಸ್ಯೆಯ ಗಂಟಲ ದ್ರವ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.