ದ.ಕ, ಉ.ಕ: ಸೋಂಕಿನ ಮೂಲ ಇನ್ನೂ ಕಗ್ಗಂಟು

ತನಿಖಾ ವರದಿ ಇನ್ನಷ್ಟು ವಿಳಂಬ

Team Udayavani, May 11, 2020, 12:08 PM IST

covid-19ದ.ಕ, ಉ.ಕ: ಸೋಂಕಿನ ಮೂಲ ಇನ್ನೂ ಕಗ್ಗಂಟು

ಮಂಗಳೂರು: ಮಂಗಳೂರಿನ ಫಸ್ಟ್‌ ನ್ಯೂರೋ ಆಸ್ಪತ್ರೆಗೆ ಬಂದು ಹೋದ ರೋಗಿಯ ಮುಖಾಂತರ ಭಟ್ಕಳದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ರವಿವಾರ ಮತ್ತೆ 7 ಪ್ರಕರಣ ಸಹಿತ ಒಟ್ಟು ಪ್ರಕರಣ 28ಕ್ಕೆ ಏರಿಕೆಯಾಗಿದೆ. ಆದರೆ ದ.ಕ. ಮತ್ತು ಭಟ್ಕಳದಲ್ಲಿ ಹರಡುತ್ತಿರುವ ಸೋಂಕಿನ ಮೂಲ ಇನ್ನೂ ಕಗ್ಗಂಟಾಗಿಯೇ ಉಳಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫಸ್ಟ್‌ ನ್ಯೂರೋ ಆಸ್ಪತ್ರೆಗೆ ಭೇಟಿ ನೀಡಿದ್ದ ಬಂಟ್ವಾಳದ 50 ವರ್ಷದ ಮಹಿಳೆಗೆ ತದನಂತರದಲ್ಲಿ ಕೋವಿಡ್ ಸೋಂಕು ಹರಡಿ ಬಳಿಕ ಮೃತಪಟ್ಟಿದ್ದರು. ಆನಂತರ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವೃದ್ಧೆಯರು, ಆಸ್ಪತ್ರೆಯ ಸಿಬಂದಿಗೆ ಮತ್ತು ಅವರ ಸಂಪರ್ಕದಿಂದ ಸೇರಿದಂತೆ ಒಟ್ಟು 17 ಮಂದಿಗೆ ಸೋಂಕು ಕಾಣಿಸಿಕೊಂಡಿತ್ತು.

ಮಹಿಳೆ ಮೃತಪಟ್ಟ ದಿನದಂದೇ ಎ. 20ರಂದು ಭಟ್ಕಳದ ಐದು ತಿಂಗಳ ಮಗುವನ್ನೂ ಚಿಕಿತ್ಸೆಗೆ ಇದೇ ಆಸ್ಪತ್ರೆಗೆ ಕರೆ ತರಲಾಗಿದ್ದು, ಇದೀಗ ಆ ಮಗು, ಆತನ ತಂದೆ, ಕುಟುಂಬದವರು, ಮನೆ ಸನಿಹದವರು, ಸ್ನೇಹಿತರು ಹೀಗೆ ಒಟ್ಟು 28 ಮಂದಿಯಲ್ಲಿ ಕಳೆದೊಂದು ವಾರದ ಅವಧಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಡುವೆ ದ.ಕ. ಜಿಲ್ಲೆಯಲ್ಲಿ ಸೋಂಕು ಕಾಣಿಸಿ ಕೊಂಡಿರುವ ಮೂಲವೇ ಉ.ಕ. ಜಿಲ್ಲೆಯ ಮೂಲವೂ ಆಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಹೇಳಿದ್ದರು. ಫಸ್ಟ್‌ ನ್ಯೂರೋದ್ದವರಿಗೆ ಸೋಂಕು ಹೇಗೆ ತಗಲಿತು ಎಂಬ ಬಗ್ಗೆ ತನಿಖೆಗೆ ಕಳೆದ ವಾರವೇ ದ.ಕ. ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದರು.

ದ.ಕ.: ರವಿವಾರ ಪಾಸಿಟಿವ್‌ ಪ್ರಕರಣವಿಲ್ಲ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ ಯಾವುದೇ ಪಾಸಿಟಿವ್‌ ಪ್ರಕರಣ ದಾಖಲಾಗಿಲ್ಲ.
ರವಿವಾರ ಒಟ್ಟು 190 ಮಂದಿಯ ಗಂಟಲ ದ್ರವ ಮಾದರಿಯ ವರದಿ ಬಂದಿದ್ದು, ಯಾವುದೇ ಪಾಸಿಟಿವ್‌ ಪ್ರಕರಣ ಕಂಡು ಬಂದಿಲ್ಲ. ರವಿವಾರ 88 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 184 ವರದಿಗಳು ಬರಲು ಬಾಕಿ ಇವೆ. ಎನ್‌ಐಟಿಕೆಯಲ್ಲಿ ಒಟ್ಟು 32 ಮಂದಿ, ಇಎಸ್‌ಐ ಆಸ್ಪತ್ರೆಯಲ್ಲಿ 40 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ.

ವೃದ್ಧೆಯ ಸ್ಥಿತಿ ಗಂಭೀರ
ಕೋವಿಡ್ ದೃಢಪಟ್ಟು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೋಳೂರಿನ 58 ವರ್ಷದ ವೃದ್ಧೆಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆನ್ಲಾಕ್‌ ಆಸ್ಪತ್ರೆಯಲ್ಲಿ ಒಟ್ಟು 15 ಕೋವಿಡ್ ಬಾಧಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಲಶೇಖರದ 80 ವರ್ಷದ ವೃದ್ಧೆ ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಉಳಿದ 13 ಮಂದಿಯ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೂಲ ಪತ್ತೆ ತನಿಖಾ ವರದಿ ರವಿವಾರ ಸಿಗಬೇಕಿತ್ತು. ಆದರೆ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ದ್ವಿತೀಯ ಹಂತದ ಗಂಟಲ ದ್ರವ ಮಾದರಿ ಪರೀಕ್ಷಾ ವರದಿ ಬರಲು ಇನ್ನೂ ಎರಡು ದಿನ ಬೇಕಾಗಬಹುದು. ಆ ಬಳಿಕ ತನಿಖಾ ಸಮಿತಿ ಮತ್ತು ಅಧಿಕಾರಿಗಳು ಇನ್ನೊಂದು ಸುತ್ತಿನ ಸಭೆ ಸೇರಿ ಚರ್ಚಿಸಿ ಬಳಿಕ ಪರೀಕ್ಷಾ ವರದಿಯನ್ನೂ ಗಣನೆಗೆ ತೆಗೆದುಕೊಂಡು ಕೋವಿಡ್ ಹರಡುವಿಕೆ ಮೂಲದ ಬಗ್ಗೆ ವರದಿ ಸಲ್ಲಿಸಲಿದ್ದಾರೆ.
– ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.