ಮುದಗಲ್ಲ ತಾಲೂಕಿನಲ್ಲಿ ಡಿಎಪಿ ರಸಗೊಬ್ಬರ ಅಭಾವ


Team Udayavani, Nov 10, 2021, 3:48 PM IST

24former

ಮುದಗಲ್ಲ: ತಾಲೂಕಿನಲ್ಲಿ ಕೃಷಿಗೆ ಅಗತ್ಯವಿರುವ ಡಿಎಪಿ ರಸಗೊಬ್ಬರ ಅಭಾವ ತಲೆದೋರಿದ್ದು ಗೊಬ್ಬರ ಸಿಗದೆ ರೈತರು ಪರದಾಡುವಂತಾಗಿದೆ.

ಕಳೆದ ಎರಡ್ಮೂರು ತಿಂಗಳಿಂದ ರೈತರು ಹಿಂಗಾರು ಬಿತ್ತನೆಯಲ್ಲಿ ತೊಡಗಿದ್ದಾರೆ. ಉತ್ತಮ ಮಳೆಯಿಂದ ಸಪ್ಪೆಯಾದ ಹೊಲಗಳಿಗೆ ಮಂಗಳ ಡಿಎಪಿಗೆ ಹೆಚ್ಚಿನ ಬೇಡಿಕೆ ಬಂದಿದೆ.

ಪಟ್ಟಣದ ಕೆಲವು ರಸಗೊಬ್ಬರ ಅಂಗಡಿಗಳಲ್ಲಿ ಮಂಗಳ ಡಿಎಪಿ(ಕಪ್ಪು) ಗೊಬ್ಬರ ಕೇಳಿದರೆ ಐಪಿಎಲ್‌ ಡಿಎಪಿ(ಬಿಳಿ) ಗೊಬ್ಬರವಿದೆ ಎಂದು ಹೇಳುತ್ತಾರೆ. ಬೇಡಿಕೆ ಇದ್ದಾಗ ಡಿಎಪಿ ಗೊಬ್ಬರ ಸಿಗದೇ ಇರುವುದರಿಂದ ರೈತ ಕಂಗಾಲಾಗಿದ್ದಾನೆ.

ಬೀಜ, ಗೊಬ್ಬರ ನಿಗದಿತ ದರದಲ್ಲಿಯೇ ಮಾರಾಟ ಮಾಡಬೇಕು, ಚೀಲದ ಮೇಲೆ ನಮೂದಿಸಿರುವ ಬೆಲೆಗೆ ಮಾರಾಟ ಮಾಡಿ ರೈತರಿಗೆ ರಸೀದಿ ನೀಡಬೇಕು. ತಪ್ಪಿದರೆ ಶಿಸ್ತುಕ್ರಮ ಜರುಗಿಸುತ್ತೇವೆಂದು ಕೃಷಿ ಅಧಿಕಾರಿಗಳು ಪ್ರತಿ ವರ್ಷ ಮಾಧ್ಯಮಗಳ ಮೂಲಕ ಹೇಳುತ್ತಲೇ ಬಂದಿದ್ದಾರೆ.

ವಾಸ್ತವದಲ್ಲಿ ಈ ಸೂಚನೆ ಪಾಲನೆಯಾಗಿಲ್ಲ, ಯಾವ ವರ್ತಕನಿಗೆ ನೋಟಿಸ್‌ ನೀಡಿ ದಂಡ ಹಾಕಿದ ಉದಾಹರಣೆಯೇ ಇಲ್ಲ. 50ಕೆ.ಜಿ ಯೂರಿಯಾ ಗೊಬ್ಬರ ಚೀಲಕ್ಕೆ ಸರಕಾರ ನಿಗದಿ ಮಾಡಿದ ದರ 267ರೂ.ಇದೆ, ಹಮಾಲಿ-ಸಾರಿಗೆ ವೆಚ್ಚ ಸೇರಿ 290 ಅಥವಾ 300ಕ್ಕೆ ಮಾರಾಟ ಮಾಡಿದರೆ ಪರವಾಗಿಲ್ಲ. ಆದರೆ ಪಟ್ಟಣದಲ್ಲಿ ಕೆಲ ವರ್ತಕರು 350ರೂ.ಗಳಂತೆ ಮಾರುತ್ತಿದ್ದಾರೆ. ಐಪಿಎಲ್‌ ಡಿಎಪಿ 1350ರೂ.ಗೆ ಮಾರಲಾಗುತ್ತಿದೆ. ಎಂದು ರೈತರು ದೂರಿದ್ದಾರೆ.

ಇದನ್ನೂ ಓದಿ: ಪ್ರೀತಿಗೆ ವಿರೋಧ;ಪ್ರಿಯತಮೆ ಮನೆಯಲ್ಲೇ ಆಕೆಯ ಹತ್ಯೆಗೆ ಯತ್ನ, ಪ್ರಿಯತಮನೂ ಆಸ್ಪತ್ರೆಗೆ ದಾಖಲು

ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ

ಡಿಎಪಿ ಗೊಬ್ಬರ ಅಭಾವ ಪರಿಸ್ಥಿತಿಯನ್ನು ಮನಗಂಡ ಕೆಲ ಮಾರಾಟಗಾರರು ತಮ್ಮಲ್ಲಿರುವ ಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರುತ್ತಿದ್ದಾರೆ. ಇನ್ನು ಕೆಲವರು ಬೇರೆಡೆ ದಾಸ್ತಾನು ಮಾಡಿ ಅಭಾವ ಸೃಷ್ಟಿಯಾಗುವಂತೆ ಮಾಡಿದ್ದಾರೆಂಬ ಆರೋಪ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವ್ಯಾಪಕವಾಗಿ ಕೇಳಿ ಬರುತ್ತಿದೆ.

ಕೆಲವು ಗ್ರಾಮೀಣ ಭಾಗದಲ್ಲಿ ಅಂಗಡಿಗಳನ್ನು ತೆರೆದು ಹೆಚ್ಚಿನ ದರಕ್ಕೆ ಗೊಬ್ಬರ ಮಾರುತ್ತಿದ್ದಾರೆ. ರೈತರಿಗೆ ಜಿಎಸ್‌ಟಿ ರಸೀದಿ ನೀಡುತ್ತಿಲ್ಲ ಎಂದು ರೈತರಾದ ಗ್ಯಾನಪ್ಪ, ಮಲ್ಲಪ್ಪ, ದುರುಗಪ್ಪ, ಭೀಮಪ್ಪ ಆರೋಪಿಸಿದ್ದಾರೆ.

ರೈತರೊಂದಿಗೆ ಒಂದೇ ಒಂದು ಸಭೆಯಿಲ್ಲ
ಒಂದು ಕಾರ್ಯಕ್ರಮ ಮಾಡಬೇಕಾದರೆ ಹತ್ತಾರು ಪೂರ್ವಭಾವಿ ಸಭೆ ಮಾಡಿ ಚರ್ಚಿಸುವ ಅಧಿಕಾರಿಗಳು ಬಹುಸಂಖ್ಯಾತ ರೈತಾಪಿ ವರ್ಗದ ಕೃಷಿ ಚಟುವಟಿಕೆ ಆರಂಭವಾಗುವ ರೈತರೊಂದಿಗೆ ಒಂದೇ ಒಂದು ಸಭೆ ನಡೆಸುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ಕೃಷಿ ಪರಿಕರ, ಬೀಜ, ಗೊಬ್ಬರ ವ್ಯವಸ್ಥಿತವಾಗಿ ಸಂಗ್ರಹಿಸಲು ಆಸಕ್ತಿ ವಹಿಸುವುಲ್ಲ. ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡಿದರೆನ್ನುವಂತೆ ಮಳೆ ಬಿದ್ದ ಮೇಲೆಯೇ ಕೃಷಿ ಇಲಾಖೆ ಅಧಿಕಾರಿಗಳು ಕಣ್ಣು ಹಾಯಿಸುತ್ತಿರುವುದು ಸರಿಯಲ್ಲ ಎಂದು ರೈತ ಮುಖಂಡ ಅಮರಣ್ಣ ಗುಡಿಹಾಳರ ಆರೋಪಿಸುತ್ತಾರೆ.

-ದೇವಪ್ಪ ರಾಠೊಡ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.