ಖಾತೆ ಬದಲಾವಣೆಯಿಂದ ಯಾವುದೇ ಸಮಸ್ಯೆ ಇಲ್ಲ: ಡಿಸಿಎಂ

Team Udayavani, Feb 13, 2020, 7:43 PM IST

ಶಿವಮೊಗ್ಗ: “ಖಾತೆ ಹಂಚಿಕೆ ಬಳಿಕ ನೂತನ ಸಚಿವರ ಮನವಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೆಲ ಖಾತೆ ಬದಲಾಯಿಸಿಕೊಟ್ಟಿದ್ದಾರೆ. ಹೀಗಾಗಿ ಯಾವುದೇ ಸಮಸ್ಯೆ ಇಲ್ಲ’ ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಸ್ವಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರೂ ತೃಪ್ತಿಯಿಂದಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಕೆಲಸವನ್ನು ಸಿಎಂ ಯಶಸ್ವಿಯಾಗಿ ಮಾಡಿದ್ದಾರೆಂದರು.

ಎಲ್ಲರಿಗೂ ಸಚಿವರಾಗಬೇಕೆಂಬ ಆಸೆ ಇರುತ್ತದೆ. ಮುಖ್ಯಮಂತ್ರಿಗಳು ಸೂಕ್ತ ಸಂದರ್ಭದಲ್ಲಿ ಕ್ರಮ ಕೈಗೊಳ್ಳುತ್ತಾರೆ. ಸೋತವರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ನಿರ್ಧರಿಸುತ್ತಾರೆ ಎಂದರು.

ಶಿವಮೊಗ್ಗಕ್ಕೂ, ತನಗೂ ತುಂಬಾ ಹಳೆಯ ನಂಟಿದೆ. ಪ್ರೌಢಶಾಲೆ ಹಾಗೂ ಪಿಯುಸಿಯನ್ನು ಇಲ್ಲೇ ಓದಿದ್ದರಿಂದ ವಿಶೇಷ ಒಲವಿದೆ. ಮುಖ್ಯಮಂತ್ರಿಗಳು ಜಿಲ್ಲೆಯನ್ನು ಹೆಚ್ಚು ಅಭಿವೃದ್ಧಿ ಮಾಡಬೇಕೆಂಬ ಕನಸು ಹೊಂದಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕೂಡ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಶಿಕ್ಷಣ, ಕೌಶಲ್ಯವಿದ್ದಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯವಿದೆ.

ಅದಕ್ಕಾಗಿಯೇ ಶಿಕ್ಷಣ-ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ