Supreme Court: ಕೊಲಿಜಿಯಂ ಶಿಫಾರಸು ಅಂಗೀಕಾರಕ್ಕೆ ವಿಳಂಬ- ನಾಳೆ ಸುಪ್ರೀಂನಲ್ಲಿ ವಿಚಾರಣೆ
Team Udayavani, Oct 7, 2023, 10:55 PM IST
ನವದೆಹಲಿ:ಕೊಲಿಜಿಯಂ ಶಿಫಾರಸು ಮಾಡಿರುವ ಹೆಸರುಗಳಿಗೆ ಸಮ್ಮತಿ ಸೂಚಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ. ನ್ಯಾ.ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾ.ಸುಧಾಂಶು ಧುಲಿಯಾ ನೇತೃತ್ವದ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸಲಿದೆ.
ಸೆ.26ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇಮಕದಲ್ಲಿ ಕೇಂದ್ರದ ವಿಳಂಬವನ್ನು ಪ್ರಶ್ನಿಸಿ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕ್ಕೆ ಸೂಚನೆ ನೀಡಿತ್ತು ಅವರು ವಾರದ ಗಡುವು ಕೇಳಿದ್ದರು. ಅ.9ರ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಈ ಬಗ್ಗೆ ನ್ಯಾಯಪೀಠಕ್ಕೆ ಮಾಹಿತಿ ನೀಡಲಿದ್ದಾರೆ. ಈ ಅರ್ಜಿ ಜತೆಗೆ ಸುಪ್ರೀಂ ಆದೇಶವನ್ನು ಪಾಲಿಸುವಲ್ಲಿ ವಿಳಂಬಗೊಂಡಿದ್ದಕ್ಕೆ ಕೇಂದ್ರ ಕಾನೂನು ಸಚಿವಾಲಯದ ವಿರುದ್ಧ ಕ್ರಮಕ್ಕೆ ಆಗ್ರಹಿಸಿರುವ ಅರ್ಜಿಯನ್ನೂ ಸುಪ್ರೀಂ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!