Delhi: ದಿಲ್ಲಿ ವಾಯುಮಾಲಿನ್ಯ- ಬೇಕಿದೆ ಶಾಶ್ವತ ಪರಿಹಾರ


Team Udayavani, Nov 3, 2023, 11:34 PM IST

pollution

ರಾಷ್ಟ್ರ ರಾಜಧಾನಿ ಹೊಸದಿಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಮಾಲಿನ್ಯದ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದ್ದು ತೀರಾ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರ ರಾಜಧಾನಿ ಪ್ರದೇಶ(ಎನ್‌ಸಿಆರ್‌) ವ್ಯಾಪ್ತಿಯಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆಯಾಗಿದ್ದು ಉಸಿರಾಟಕ್ಕೂ ಕಷ್ಟಸಾಧ್ಯವಾಗಿದೆ. ರಾಷ್ಟ್ರ ರಾಜಧಾನಿ ಮಟ್ಟಿಗೆ ಇದೊಂದು ವಾರ್ಷಿಕ ಸಮಸ್ಯೆ ಯಾಗಿ ಮಾರ್ಪಟ್ಟಿದ್ದು ದಿಲ್ಲಿ ಸರಕಾರ ಮತ್ತು ಕೇಂದ್ರ ಸರಕಾರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ವಿಫ‌ಲವಾಗಿರುವ ಬಗೆಗೆ ಸಾರ್ವ ಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಚಳಿಗಾಲ ಋತು ಆರಂಭಗೊಳ್ಳುತ್ತಿರುವಂತೆಯೇ ದಿಲ್ಲಿ ಮತ್ತು ಸುತ್ತ ಮುತ್ತಲಿನ ಪ್ರದೇಶದಲ್ಲಿ ವಾಯುಮಾಲಿನ್ಯದ ಪ್ರಮಾಣ ಮಿತಿ ಮೀರುವುದು ಕಳೆದೊಂದು ದಶಕದಿಂದ ಸಾಮಾನ್ಯ ಎಂಬಂತಾಗಿದೆ. ನೆರೆ ರಾಜ್ಯಗಳಾದ ಹರಿ ಯಾಣ ಮತ್ತು ಪಂಜಾಬ್‌ನಲ್ಲಿ ಈ ಅವಧಿಯಲ್ಲಿ ಬೆಳೆ ಕಳೆಗಳನ್ನು ರಾಶಿ ಹಾಕಿ ಸುಡುವುದರಿಂದ ಇದರ ಹೊಗೆ ವಾತಾವರಣವನ್ನು ಸೇರಿ ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಭಾರೀ ಪ್ರಮಾಣದಲ್ಲಿ ಇಂಗಾಲ ವನ್ನು ಹೊರಸೂಸುವ ಸರಕು ಸಾಗಣೆಯ ವಾಹನಗಳು, ನಗರದ ಹೊರವಲ ಯದಲ್ಲಿನ ಕೈಗಾರಿಕ ಪ್ರದೇಶಗಳಲ್ಲಿನ ಕೈಗಾರಿಕ ಕಂಪೆನಿಗಳು ಹೊರಸೂಸುವ ಹೊಗೆ, ಕಟ್ಟಡ ನಿರ್ಮಾಣ ಮತ್ತು ಹಳೆಯ ಕಟ್ಟಡಗಳನ್ನು ಕೆಡಹುವ ಪ್ರಕ್ರಿ ಯೆಗಳು, ಹೆಚ್ಚುತ್ತಿರುವ ಖಾಸಗಿ ವಾಹನಗಳು, ವಿವಿಧ ಅಭಿವೃದ್ಧಿ ಕಾಮ ಗಾರಿಗಳು…ಹೀಗೆ ಹತ್ತು ಹಲವು ಕಾರಣಗಳಿಂದಾಗಿ ದಿಲ್ಲಿ ವಾಯು ಮಾಲಿನ್ಯದಿಂದಾಗಿ ತತ್ತರಿಸುವಂತಾಗಿದೆ. ಕಳೆದೆರಡು ದಿನಗಳಿಂದೀಚೆಗೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು ಸರಕಾರ ನಗರದಾದ್ಯಂತ ವಾಯು ತುರ್ತುಸ್ಥಿತಿಯನ್ನು ಘೋಷಿಸಿದೆ.

ಎನ್‌ಸಿಆರ್‌ ವ್ಯಾಪ್ತಿಯಲ್ಲಿನ ವಾಯುಮಾಲಿನ್ಯದ ಪ್ರಮಾಣವನ್ನು ಸಾಧ್ಯವಾದಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ದಿಲ್ಲಿ ಸರಕಾರ ಮತ್ತು ದಿಲ್ಲಿ ಮಹಾನಗರ ಪಾಲಿಕೆ ಬಿಗಿ ಕ್ರಮಗಳನ್ನು ಕೈಗೊಂಡಿವೆ.

ಪ್ರತೀ ವರ್ಷವೂ ದಿಲ್ಲಿ ಸಹಿತ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯು ಗುಣಮಟ್ಟ ಸೂಚ್ಯಂಕ ತೀರಾ ಕಳಪೆ ಮಟ್ಟಕ್ಕೆ ತಲುಪಿದಾಗ ಸರಕಾರ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳು ಇಂತಹುದೇ ತಾತ್ಕಾಲಿಕ ಕ್ರಮಗಳಿಗೆ ಶರಣಾಗುತ್ತಿವೆಯೇ ವಿನಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ನಡೆಸದಿರುವುದು ತೀರಾ ವಿಪರ್ಯಾಸ. ವಾಯುಮಾಲಿನ್ಯದ ವಿಚಾರ ಮುನ್ನೆಲೆಗೆ ಬಂದಾಗಲೆಲ್ಲ ದಿಲ್ಲಿಯ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಪರಸ್ಪರ ಬೆರಳು ತೋರಿಸುವ ಪ್ರಯತ್ನ ನಡೆಸುತ್ತಿವೆಯೇ ಹೊರತು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.

ದೇಶದ ರಾಜಧಾನಿಯಲ್ಲಿ ಉಸಿರಾಟ ನಡೆಸುವುದೂ ಕಷ್ಟಸಾಧ್ಯ ಎಂಬ ಪರಿಸ್ಥಿತಿ ಸೃಷ್ಟಿಯಾಗುತ್ತಿರುವುದು ಇದೇ ಮೊದಲೇನಲ್ಲ. ಹಾಗಿದ್ದರೂ ಸರಕಾರ ನಗರದ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಯಾವುದೇ ದೂರದೃಷ್ಟಿಯ ಯೋಚನೆ, ಯೋಜನೆಗಳನ್ನು ರೂಪಿಸಿ, ಕಾರ್ಯಗತಗೊಳಿಸುವತ್ತ ಲಕ್ಷ್ಯ ಹರಿಸದಿರುವುದು ಬಲುದೊಡ್ಡ ಪ್ರಮಾದವೇ ಸರಿ. ನಮ್ಮನ್ನಾಳುವವರಿಗೆ ಜನಸಾಮಾನ್ಯನ ಸಂಕಷ್ಟ ಅರಿವಿಗೆ ಬರದೇ ಹೋದರೆ ಇಂಥ ಅವ್ಯವಸ್ಥೆಗಳು ಮರುಕಳಿಸುತ್ತಲೇ ಇರುತ್ತವೆ. ಎಲ್ಲದಕ್ಕೂ “ಸದ್ಯ ಬೀಸೋ ದೊಣ್ಣೆಯಿಂದ ಪಾರಾದರೆ ಸಾಕು’ ಎಂಬ ನಿಲುವಿಗೆ ಅಂಟಿಕೊಂಡರೆ ಇಂಥ ದುಃಸ್ಥಿತಿ ಬಂದೊದಗುತ್ತದೆ. ಇನ್ನಾದರೂ ರಾಜ್ಯ ಮತ್ತು ಕೇಂದ್ರ ಸರಕಾರಗಳು ರಾಜಧಾನಿಯ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಚ್ಛಾಶಕ್ತಿ, ಬದ್ಧತೆಯನ್ನು ಪ್ರದರ್ಶಿಸಬೇಕು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.