Khalistan: ಅಮೆರಿಕದಲ್ಲಿ ಖಲಿಸ್ತಾನಿಗಳಿಂದ ದೇಗುಲ ವಿರೂಪ- ಭಾರತ ಖಂಡನೆ
- ಗೋಡೆಯಲ್ಲಿ ಭಾರತ, ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಬರಹ
Team Udayavani, Dec 23, 2023, 8:54 PM IST
ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾದ ನೆವಾರ್ಕ್ ನಗರದಲ್ಲಿರುವ ಸ್ವಾಮಿ ನಾರಾಯಣ್ ವಾಸನ್ ಮಂದಿರದ ಗೋಡೆಗಳ ಮೇಲೆ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆಯಲಾಗಿದೆ. ಅಲ್ಲದೇ ಭಾರತದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಬರಹಗಳೂ ಅಲ್ಲಿ ಪತ್ತೆಯಾಗಿವೆ.
ಇದರ ಬೆನ್ನಲ್ಲೇ ಘಟನೆ ಕುರಿತು ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಎಸ್. ಜೈಶಂಕರ್, “ದೇಗುಲ ವಿರೂಪಗೊಳಿಸಿದ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಇದು ಹಿಂದೂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಈ ಕುರಿತು ತನಿಖೆಗೆ ಅಮೆರಿಕ ಸರ್ಕಾರವನ್ನು ಭಾರತ ಆಗ್ರಹಿಸುತ್ತದೆ” ಎಂದು ಹೇಳಿದ್ದಾರೆ.
“ಭಾರತದ ವಿರುದ್ಧ ಉಗ್ರವಾದ ಮತ್ತು ಪ್ರತ್ಯೇಕತಾವಾದ ಶಕ್ತಿಗಳಿಗೆ ವಿದೇಶದಲ್ಲಿ ಅವಕಾಶ ದೊರೆಯಬಾರದು ಎಂದು ನಾವು ಪ್ರಬಲವಾಗಿ ಪ್ರತಿಪಾದಿಸುತ್ತೇವೆ. ದೇಗುಲವನ್ನು ವಿರೂಪಗೊಳಿಸಿದವರ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಬೇಕು” ಎಂದು ಜೈಶಂಕರ್ ಆಗ್ರಹಿಸಿದ್ದಾರೆ.
“ಸ್ಯಾನ್ಫ್ರ್ಯಾನ್ಸಿಸ್ಕೊದಲ್ಲಿರುವ ಭಾರತದ ರಾಯಭಾರ ಕಚೇರಿಯು ಅಮೆರಿಕ ಅಧಿಕಾರಿಗಳೊಂದಿಗೆ ಖಂಡನೆಯನ್ನು ದಾಖಲಿಸಿದೆ. ಅಲ್ಲದೇ ಸ್ಥಳೀಯ ಪೊಲೀಸರಿಂದ ತನಿಖೆಗೆ ಒತ್ತಾಯಿಸಿದ್ದು, ಈಗಾಗಲೇ ಅಮೆರಿಕದ ಪೊಲೀಸರು ತನಿಖೆ ಆರಂಭಿಸಿದ್ದಾರೆ’ ಎಂದು ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ