Udayavni Special

ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳು ವೇಗ ಪಡೆಯುವುದು ಅವಶ್ಯ


Team Udayavani, Sep 27, 2021, 5:55 AM IST

mang

ಮಂಗಳೂರು ನಗರದಲ್ಲಿ ಸ್ಮಾರ್ಟ್‌ಸಿಟಿ ಸೇರಿದಂತೆ ವಿವಿಧ ಯೋಜನೆಗಳ ಹಲವಾರು ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಾಮಗಾರಿಗಳು ಆರಂಭವಾಗಿ ವರ್ಷ ಕಳೆದರೂ ಪೂರ್ತಿ ಯಾಗಿಲ್ಲ. ಕಾಮಗಾರಿಯ ಉದ್ದೇಶದಿಂದ ಮುಚ್ಚಿರುವ ಕೆಲವು ರಸ್ತೆಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಂಚಾರಕ್ಕೆ ತೆರವುಗೊಂಡಿಲ್ಲ. ಇದರ ಜತೆಗೆ ಹೊಸದಾಗಿ ಕಾಮಗಾರಿಗೆ ಇನ್ನು ಕೆಲವು ರಸ್ತೆಗಳನ್ನು ಮುಚ್ಚಲಾಗುತ್ತಿದೆ. ಇದು ಒಟ್ಟಾರೆಯಾಗಿ ನಗರದ ಜನಜೀವನ, ಸಂಚಾರ, ವಾಣಿಜ್ಯ ವ್ಯವಹಾರಗಳ ಮೇಲೆ ಪರಿಣಾಮ ಬೀರಿದೆ.

ಪುರಭವನದ ಬಳಿ ಅಂಡರ್‌ಪಾಸ್‌ ಕಾಮಗಾರಿ ಆರಂಭವಾಗಿ ವರ್ಷ ಕಳೆದಿದೆ. ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಇದೇ ರೀತಿಯಾಗಿ ಕಾಮಗಾರಿ ಮುಂದುವರಿದರೆ ಅದು ಪೂರ್ಣಗೊಳ್ಳಲು ಇನ್ನೂ ಕೆಲವು ತಿಂಗಳು ಬೇಕಾಗಬಹುದು. ಕಾಮಗಾರಿಯಿಂದಾಗಿ ಪುರಭವನ ಮುಂಭಾಗದಲ್ಲಿ ನಳನಳಿಸುತ್ತಿದ್ದ ಉದ್ಯಾನವನ ಕೂಡ ತನ್ನ ಸ್ವರೂಪವನ್ನು ಕಳೆದುಕೊಂಡು ಹಾಳುಕೊಂಪೆಯಂತಾಗಿದೆ. ಇದೇ ಕಾಮಗಾರಿ ಯಿಂದಾಗಿ ಲೇಡಿಗೋಶನ್‌ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಕ್ಲಾಕ್‌ಟವರ್‌ನಿಂದ ಎ.ಬಿ. ಶೆಟ್ಟಿ ವೃತ್ತದವರೆಗಿನ ರಸ್ತೆಯನ್ನು ಏಕಮುಖ ಸಂಚಾರ ಮಾಡಿರುವುದರಿಂದ ಲೇಡಿಗೋಶನ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ. ಆಗಾಗ ಟ್ರಾಫಿಕ್‌ ಜಾಮ್‌ ತಲೆದೋರುತ್ತಿದೆ. ಪಕ್ಕದಲ್ಲೇ ಮಾರುಕಟ್ಟೆ ರಸ್ತೆಯನ್ನು ಕಾಮಗಾರಿಗೆ ಅಗೆದು ಹಾಕಲಾಗಿದೆ. ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌ನಿಂದ ಕ್ಲಾಕ್‌ಟವರ್‌ವರೆಗೆ ಫುಟ್‌ಪಾತ್‌ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದ್ದು, ಸಮಸ್ಯೆಯನ್ನು ಇನ್ನಷ್ಟು ಬಿಗಡಾಯಿಸಿದೆ. ಮಾರ್ಗನ್ಸ್‌ಗೆಟ್‌, ಮಂಗಳಾದೇವಿ ರಸ್ತೆಯನ್ನು ಸ್ಮಾರ್ಟ್‌ಸಿಟಿ ಕಾಮಗಾರಿಗೆಂದು ಅಗೆಯಲಾಗಿದೆ.

ಇದನ್ನೂ ಓದಿ:ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲು ಸಚಿವರ ಆಗ್ರಹ

ಕೊರೊನಾ ಸೋಂಕು ಪ್ರಮಾಣ ಇಳಿಕೆಯಾಗಿ ನಗರದಲ್ಲಿ ಜನಜೀವನ ಸಹಜಸ್ಥಿತಿಯತ್ತ ಮರಳುತ್ತಿದೆ. ವಾಣಿಜ್ಯ ಚಟುವಟಿಕೆಗಳು ಚೇತರಿಸುತ್ತಿದೆ. ಶಾಲಾ ಕಾಲೇಜುಗಳು ಆರಂಭಗೊಂಡಿವೆ. ಶುಭ ಸಮಾರಂಭಗಳು ನಡೆಯುತ್ತಿವೆ. ಈ ಎಲ್ಲ ಅಂಶಗಳನ್ನು ಗಮನ ದಲ್ಲಿಟ್ಟುಕೊಂಡು ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳಿಗೆ ವೇಗ ನೀಡಿ ತ್ವರಿತವಾಗಿ ಪೂರ್ಣಗೊಳಿಸಬೇಕಾಗಿದೆ.

ಎಲ್ಲೆಡೆ ರಸ್ತೆ ಅಗೆತ, ಏಕಮುಖ ಸಂಚಾರ ಆದೇಶದಿಂದಾಗಿ ವಾಹನ ಸವಾರರೂ ಪರದಾಡುತ್ತಿದ್ದಾರೆ. ಇನ್ನು ಸ್ವಂತ ವಾಹನದೊಂದಿಗೆ ಮಂಗಳೂರು ನಗರ ಪ್ರವೇಶಿಸಿದರೆಂದರೆ ಅವರ ಸ್ಥಿತಿಯನ್ನು ಹೇಳುವುದಕ್ಕೆ ಸಾಧ್ಯವಿಲ್ಲದಂತಾಗುತ್ತದೆ. ಒಂದೆಡೆ ಪಾರ್ಕಿಂಗ್‌ ಸಮಸ್ಯೆ, ಇನ್ನೊಂದೆಡೆ ನಿಯಮ ಪಾಲನೆ, ಮತ್ತೂಂದೆಡೆ ರಸ್ತೆ ಸಮಸ್ಯೆ. ಕೊನೆಗೆ ಎಲ್ಲಿಗೆ ಹೋಗುವುದೆಂದು ತಿಳಿಯದೆ ನಗರ ಸುತ್ತುವುದೇ ಕಾಯಕ ವಾಗಿಬಿಡುತ್ತದೆ.

ಇನ್ನೊಂದು ಸಮಸ್ಯೆಯೆಂದರೆ ಕಾಮಗಾರಿ ಪೂರ್ಣಗೊಂಡ ಬೆನ್ನಲ್ಲೇ ಮತ್ತೆ ಆ ರಸ್ತೆಯನ್ನು ಅಗೆಯುವುದು ಬಹುತೇಕ ಕಡೆಗಳಲ್ಲಿ ಕಂಡುಬರುತ್ತಿದೆ. ಇದರಿಂದ ಮತ್ತೆ ಸಂಚಾರಕ್ಕೆ ಅಡಚಣೆಗಳಾಗುತ್ತದೆ. ಆದುದರಿಂದ ಕಾಮಗಾರಿ ನಡೆಯುವ ಸಂದರ್ಭದಲ್ಲೇ ಆ ರಸ್ತೆಗೆ ಸಂಬಂಧಪಟ್ಟಂತೆ ಎಲ್ಲ ಕೆಲಸಗಳನ್ನು ಪೂರ್ತಿಗೊಳಿಸುವ ನಿಟ್ಟಿನಲ್ಲಿ ಸ್ಮಾರ್ಟ್‌ಸಿಟಿ ಕಂಪೆನಿ ಹಾಗೂ ಪಾಲಿಕೆ ನಿಗಾ ವಹಿಸುವುದು ಅಗತ್ಯ.

-ಸಂ.

ಟಾಪ್ ನ್ಯೂಸ್

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

MUST WATCH

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

ಹೊಸ ಸೇರ್ಪಡೆ

nayi

ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.