DMA: ಮುನ್ನೆಚ್ಚರಿಕೆ ವಹಿಸಲು ವಿಪತ್ತು ನಿರ್ವಹಣ ಪ್ರಾಧಿಕಾರ ಸೂಚನೆ

ಕರಾವಳಿಯಲ್ಲಿ ಬಿಸಿಗಾಳಿ ಭೀತಿ

Team Udayavani, Mar 12, 2024, 10:30 AM IST

3-weather

ಮಂಗಳೂರು/ಉಡುಪಿ: ಮಾರ್ಚ್‌ ನಿಂದ ತೊಡಗಿ ಮೇ ಅಂತ್ಯದವರೆಗೆ ತೀವ್ರವಾದ ಬಿಸಿಲು ಹಾಗೂ ಕೆಲವೆಡೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ನೀಡಿದ್ದು, ಜನರು ಜಾಗರೂಕತೆ ವಹಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಸೂಚಿಸಿದೆ.

ಬಿಸಿಗಾಳಿ(ಹೀಟ್‌ವೇವ್‌) ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಬಿಸಿಲು ಇರುವಾಗ ಕೊಡೆ ಬಳಸುವುದು, ತಂಪಿರುವ ಸ್ಥಳದಲ್ಲಿರುವುದು, ತೆಳುವಾದ ಮತ್ತು ಸಡಿಲವಾದ ಹತ್ತಿ ಉಡುಪು ಬಳಸುವುದು, ಆದಷ್ಟು ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಉತ್ತಮ ಎಂದು ತಿಳಿಸಿದೆ..

ಹಿರಿಯ ನಾಗರಿಕರು ಮತ್ತು ಮಕ್ಕಳು ಹೆಚ್ಚು ನೀರು ಕುಡಿಯಬೇಕು, ಬೆಳಗ್ಗೆ 11ರಿಂದ ಸಂಜೆ 4ರ ವರೆಗೆ ಹೊರಾಂಗಣ ದೈಹಿಕ ಚಟುವಟಿಕೆಗಳನ್ನು ಕಡಿಮೆ ಮಾಡಿ, ಸಾಕಷ್ಟು ನೀರು, ಮಜ್ಜಿಗೆಯಂತಹ ದ್ರವ ಪದಾರ್ಥ ಸೇವಿಸಬೇಕು. ಹತ್ತಿ ಅಥವಾ ಟರ್ಬನ್‌ ಟೋಪಿ ಧರಿಸಬೇಕು. ಮನೆಯೊಳಗೆ ಸಾಕಷ್ಟು ಗಾಳಿಯಾಡುವಂತೆ ನೋಡಿಕೊಳ್ಳಬೇಕು.

ಹೀಟ್‌ ಸ್ಟ್ರೋಕ್‌ಗೆ ಒಳಗಾದ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ, ತಣ್ಣೀರಿನಿಂದ ಸ್ಪಾಂಜ್‌ಬಾತ್‌ ಮಾಡಿಸಬೇಕು. ಸುಧಾರಣೆ ಕಂಡುಬರದಿದ್ದರೆ ಕೂಲಿಂಗ್‌ ವ್ಯವಸ್ಥೆಯೊಂದಿಗೆ ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು.

ಹೊರಗೆ ಬಿಸಿಲಿನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಡ್ಡಾಯ ವಿರಾಮವನ್ನು ನಿಗದಿಪಡಿಸಬೇಕು. ಬಿಸಿಲಿನಿಂದ ವಿಟಮಿನ್‌ ಸಿ ಕೊರತೆ ಎದುರಾಗುವುದರಿಂದ ಹೆಚ್ಚು ನಿಂಬೆ ಹಣ್ಣಿನ ಪಾನಕ ಸೇವಿಸುವುದು ಉತ್ತಮ. ಸಕ್ಕರೆ ಬದಲಿಗೆ ಬೆಲ್ಲ ಸೂಕ್ತ. ಬೆಳಗ್ಗೆ ಎದ್ದ ಬಳಿಕ ತುಳಸಿ ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ಎರಡು ಲೋಟ ನೀರು ಬೆರೆಸಿ ಕುಡಿದರೆ ಕೆಲಸ ಮಾಡುವಾಗ ಸುಸ್ತಾಗುವುದಿಲ್ಲ. ಆಹಾರದಲ್ಲಿ ಮಸಾಲೆ ಪದಾರ್ಥ ಹೆಚ್ಚು ಬಳಸಬಾರದು. ತಣ್ಣೀರ ಸ್ನಾನ ಹೆಚ್ಚು ಸೂಕ್ತ. 5 ವರ್ಷದೊಳಗಿನ ಮಕ್ಕಳಿಗೆ ಪ್ರತಿ ಅರ್ಧಗಂಟೆಗೊಮ್ಮೆ ಒಂದು ಚಿಟಿಕೆ ಅಯೋಡಿನ್‌ ಉಪ್ಪು ಬೆರೆಸಿದ ನೀರು ಕುಡಿಸಬೇಕು ಎಂದು ಪ್ರಾಧಿಕಾರ ತಿಳಿಸಿದೆ.

ತುರ್ತು ಸೇವೆಗಾಗಿ 1077 ಅಥವಾ 0824 – 2442590 (ಮಂಗಳೂರು) ಅಥವಾ 0820-2574802 (ಉಡುಪಿ) ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.