
ಕಾಂಗ್ರೆಸ್‌ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
Team Udayavani, Feb 4, 2023, 8:26 PM IST

ದಾವಣಗೆರೆ: ಮುಂಬರುವ ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ಯಾರು ಗುರಿಯಾಗಿಸಿಕೊಂಡಿದ್ದಾರೋ ಅವರನ್ನೇ ನಾವು ಸೋಲಿಸುತ್ತೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರಿಗೇ ಇನ್ನೂ ಕ್ಷೇತ್ರ ಸಿಕ್ಕಿಲ್ಲ. ಈಗಲೂ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಅವರ ಪಕ್ಷದೊಳಗೇ ಅವರನ್ನು ಇವರು, ಇವರನ್ನು ಅವರು ಸೋಲಿಸಲು ಓಡಾಡುತ್ತಿದ್ದಾರೆ. ಈಗಾಗಲೇ ಡಾ| ಜಿ.ಪರಮೇಶ್ವರ, ಎಂ.ಬಿ.ಪಾಟೀಲ್ ಅವರಲ್ಲಿ ಅಸಮಾಧಾನ ಶುರುವಾಗಿದೆ.
ಈ ನಡುವೆ ಕಾಂಗ್ರೆಸ್‌ನವರು 150 ಸ್ಥಾನ ಗೆಲ್ಲುತ್ತೇವೆಂದು ತಮ್ಮ ಬೆನ್ನು ತಾವೇ ಚಪ್ಪರಿಸಿಕೊಳ್ಳುತ್ತಿದ್ದಾರೆ. ನಾವು ಅಭಿವೃದ್ಧಿ ಕಾರ್ಯ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿ ಗೆಲುವು ಸಾಧಿಸುತ್ತೇವೆ ಎಂದರು.
ಕಾಂಗ್ರೆಸ್, ಜೆಡಿಎಸ್ ಪಕ್ಷ ತೊರೆದು ಅವರ ಅಧಿಕಾರ ಕಿತ್ತುಕೊಂಡೆವು ಎಂಬ ಕಾರಣಕ್ಕಾಗಿ ಕೆಲವು ಮಹಾನಾಯಕರು ನಮಗೆ ಕೆಟ್ಟ ಹೆಸರು ತರುವ ಹುನ್ನಾರ ನಡೆಸಿದ್ದರು. ಅದಕ್ಕಾಗಿ ನಾವು ಈ ಹಿಂದೆ ಸಿಡಿ ವಿಷಯವಾಗಿ ಕೋರ್ಟ್‌ನಿಂದ ತಡೆಯಾಜ್ಞೆ ತಂದೆವು ಎಂದು ತಿಳಿಸಿದರು.
ಟಾಪ್ ನ್ಯೂಸ್
