ಸರಕಾರಿ ನೌಕರರಿಗೆ ದೀಪಾವಳಿ ಕೊಡುಗೆ
Team Udayavani, Oct 18, 2019, 5:43 AM IST
ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಬಿಜೆಪಿ ಸರಕಾರ ದೀಪಾವಳಿ ಕೊಡುಗೆ ನೀಡಲು ಮುಂದಾಗಿದೆ. ಸರಕಾರಿ ನೌಕರರ ಮೂಲ ವೇತನಕ್ಕೆ ಶೇ.4.75ರಷ್ಟು ತುಟ್ಟಿ ಭತ್ತೆ ಹೆಚ್ಚಳ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಗೆ ನೀಡಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆ ಇದೆ.
ಇತ್ತೀಚೆಗೆ ಕೇಂದ್ರ ಸರಕಾರ ತನ್ನ ನೌಕರರಿಗೆ ಮೂಲ ವೇತನಕ್ಕೆ ಶೇ. 5 ತುಟ್ಟಿ ಭತ್ತೆ ಹೆಚ್ಚಳ ಮಾಡಿತ್ತು. ರಾಜ್ಯ ಸರಕಾರವೂ ಅದರ ಆಧಾರ ದಲ್ಲಿಯೇ ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ತೆ ಹೆಚ್ಚಳ ಮಾಡಲಿದ್ದು, 6ನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ತೆ ಹೆಚ್ಚಳವಾಗಲಿದೆ. ಪ್ರಸಕ್ತ ವರ್ಷ ಶೇ. 4.75 ತುಟ್ಟಿ ಭತ್ತೆ ಹೆಚ್ಚಳ ಮಾಡಲು ಮುಖ್ಯ ಮಂತ್ರಿ ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಸರಕಾರಿ ನೌಕರರಿಗೆ ಸದ್ಯ ಶೇ. 6.50ರಷ್ಟು ತುಟ್ಟಿ ಭತ್ತೆ ಇದೆ. ಹೊಸದಾಗಿ ಶೇ. 4.75ರಷ್ಟು ಹೆಚ್ಚಳವಾದರೆ ಒಟ್ಟಾರೆ ಶೇ. 11.25ರಷ್ಟು ತುಟ್ಟಿ ಭತ್ತೆ ನೀಡಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?