ಗಡೇ ದುರ್ಗಾ ದೇವಿ ಹರಕೆ ತೀರಿಸಿದ ಡಿಕೆಶಿ


Team Udayavani, Jan 30, 2020, 3:06 AM IST

gadhe-durga

ಕಲಬುರಗಿ/ಯಾದಗಿರಿ: ಜಿಲ್ಲೆಯ ಗೋನಾಲ ಗಡೇ ದುರ್ಗಾದೇವಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರು ಬುಧವಾರ ದೇವ ಸ್ಥಾನಕ್ಕೆ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ನೆರವೇರಿಸಿದರು.

ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಕಳೆದ ಬಾರಿ ಜಾತ್ರೆಯಲ್ಲಿ ಭಾಗವಹಿಸಬೇಕು ಎಂದು ಜನರ ನಿರೀಕ್ಷೆ ಇತ್ತು. ರಾಜಕೀಯ ಒತ್ತಡಗಳಿಂದ ಭಾಗವಹಿಸಲು ಆಗಿರಲಿಲ್ಲ. 6 ತಿಂಗಳ ಹಿಂದೆಯೇ ಜಾತ್ರೆಯಲ್ಲಿ ಭಾಗ ವಹಿಸುವ ಸಂಕಲ್ಪ ಮಾಡಿದ್ದೆ. ಆ ಸಂಕಲ್ಪ ಈಗ ಈಡೇರಿತು ಎಂದರು.

ಈ ವೇಳೆ, ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಪ್ರಮುಖ ಕಾರ್ಯಕರ್ತರು ಇದ್ದರು. ಡಿ.ಕೆ.ಶಿವಕುಮಾರ ಅವರನ್ನು ಹತ್ತಿರದಿಂದ ಕಂಡ ಅಭಿಮಾನಿಗಳು “ಮುಂದಿನ ಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಜಯವಾಗಲಿ’ ಎಂಬ ಘೋಷಣೆ ಮೊಳಗಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ: ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ನಾನು ಕೆಪಿಸಿಸಿ ಹುದ್ದೆಗೆ ಅರ್ಜಿನೂ ಹಾಕಿಲ್ಲ, ಆಕಾಂಕ್ಷಿಯೂ ಅಲ್ಲ, ಅಧ್ಯಕ್ಷ ಸ್ಥಾನವನ್ನೇ ಕೇಳಿಲ್ಲ’ ಎಂದರು. ದುಗುಡದಿಂದ ಕೆಪಿಸಿಸಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ರಾಜೀನಾಮೆ ನೀಡಿದ್ದಾರೆ. ಅವರ ರಾಜೀ ನಾಮೆಯನ್ನು ಪಕ್ಷ ಅಂಗೀಕರಿಸಿಲ್ಲ. ಈಗಲೂ ದಿನೇಶ ಗುಂಡೂರಾವ್‌ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ.

ಹೀಗಾಗಿ, ಅಧ್ಯಕ್ಷ ಸ್ಥಾನವನ್ನು ನಾನು ಕೇಳಿದರೆ ತಾನೇ ಯಾರಾದರೂ ಅಡ್ಡಗಾಲು ಹಾಕುವುದು ಎಂದರು. ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಒಂದೇ ಪಕ್ಷದವರು. ಬೇರೆ- ಬೇರೆ ಪಕ್ಷದವರು ಭೇಟಿಯಾದರೂ ಕೇಳಲಿಲ್ಲ. ಆದರೆ, ನಮ್ಮ ಪಕ್ಷದವರು ಒಟ್ಟಿಗೆ ಕುಳಿತು ಚಹ ಕುಡಿಯುವುದು, ಊಟ, ತಿಂಡಿ ತಿನ್ನುವುದೇ ತಪ್ಪೇ? ದಿನೇಶ ಗುಂಡೂರಾವ್‌, ಸಿದ್ದರಾಮಯ್ಯ ಅವರನ್ನು ನಮ್ಮ ವರಿಷ್ಠರು ನೇಮಿಸಿದ್ದಾರೆ.

ವರೇ ನಮ್ಮ ನಾಯಕರು, ಅವರ ಕೈ ಕೆಳಗೆ ನಾವು ಕೆಲಸ ಮಾಡುತ್ತೇವೆ ಎಂದರು. ಮಿಣಿ, ಮಿಣಿ ಪೌಡರ್‌ ಕುರಿತಾದ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರು “ಮಿಣಿ ಮಿಣಿ ಪೌಡರ್‌’ ಅಂದರೆ ತಪ್ಪಾಗಿ ಬಿಡುತ್ತಾ? ನನ್ನ ಮುಖನೂ ಮಿಣಿ ಮಿಣಿ ಅಂತಿದೆ. ನಿಮ್ಮ ಮುಖನೂ ಮಿಣಿ ಮಿಣಿ ಅಂತಿದೆ ಎಂದರು.

ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಮಾಡುವುದು, ಬಿಡುವುದು ಅವರಿಗೆ ಬಿಟ್ಟಿದ್ದು. ಅವರ ಪಕ್ಷದ ವಿಚಾರ ನಮಗ್ಯಾಕೆ ಬೇಕು? ನಮಗೂ, ಅದಕ್ಕೂ ಸಂಬಂಧವಿಲ್ಲ. ಅವರು ಬೇಕಾದರೆ ಎಲ್ಲರನ್ನೂ ಡಿಸಿಎಂ ಮಾಡಲಿ, ಬೇಕಾದರೆ ಸಿಎಂ ಮಾಡಲಿ. ಅದಕ್ಕೆ ನಮ್ಮ ತಕರಾರಿಲ್ಲ.
-ಡಿ.ಕೆ.ಶಿವಕುಮಾರ್‌, ಮಾಜಿ ಸಚಿವ

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ಚಿನ್ನ ಪಡೆದು ದುಡ್ಡು ಕೊಡುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ಚಿನ್ನ ಕೊಟ್ಟು ದುಡ್ಡು ಪಡೆಯುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.