Education: ಜ. 10ರಿಂದ ಸಿಇಟಿಗೆ ಅರ್ಜಿ ಸಲ್ಲಿಕೆ ಆರಂಭ?
Team Udayavani, Jan 3, 2024, 1:13 AM IST
ಬೆಂಗಳೂರು: ಈ ಬಾರಿ ಜ. 10 ಅಥವಾ 12ರಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆಅರ್ಜಿ ಸಲ್ಲಿಕೆ ಆರಂಭಗೊಳ್ಳುವ ನಿರೀಕ್ಷೆ ಇದೆ. ಇದೇವೇಳೆ ಸಿಇಟಿ ಅರ್ಜಿಗಳು ಸರಿಯಾದ ಮಾಹಿತಿ ಹೊಂದಿದ್ದರಷ್ಟೇ ಆನ್ಲೈನ್ನಲ್ಲಿ ಸಲ್ಲಿಕೆಯಾಗುವ ವ್ಯವಸ್ಥೆ ಜಾರಿಯಾಗಲಿದೆ. ಈ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿ ಕಾರವು ಸಿಇಟಿ ಪ್ರಕ್ರಿಯೆಯಲ್ಲಿ ಭೌತಿಕ ದಾಖಲೆ ಪರಿಶೀಲನೆ ಪ್ರಕ್ರಿಯೆಯನ್ನೇ ಕೈಬಿಡುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯನ್ನು ಇರಿಸಿದೆ.
ಅಭ್ಯರ್ಥಿಯ ಸಂಪೂರ್ಣ ಹೆಸರು, ತಂದೆ, ತಾಯಿ ಹೆಸರಿನ ಅಕ್ಷರಗಳಲ್ಲಿ ಆಗುವ ತಪ್ಪು, ಆರ್ಡಿ ಸಂಖ್ಯೆಯಲ್ಲಿ ತಪ್ಪು, ಪ್ರವರ್ಗ/ಜಾತಿ ಮಾಹಿತಿ ತಪ್ಪು ಗಳಿಂದ ಸಿಇಟಿಯ ಕೌನ್ಸೆಲಿಂಗ್ ಪ್ರಕ್ರಿಯೆ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆನ್ಲೈನ್ನಲ್ಲಿ ಅರ್ಜಿ ತುಂಬುವಾಗ ಮಾಹಿತಿ ಲೋಪ ಕಂಡುಬಂದರೆ ಪ್ರಕ್ರಿಯೆ ಮುಂದಿನ ಹಂತಕ್ಕೆ ಹೋಗದಂತೆ ಸಾಫ್ಟ್ ವೇರ್ ವಿನ್ಯಾಸಗೊಳಿಸಲಾಗಿದೆ.
ಜತೆಗೆ ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ (ಸ್ಯಾಟ್ಸ್)ಯಿಂದ ಸಿಇಟಿ ಸಾಫ್ಟ್ವೇರ್ ನೇರವಾಗಿ ದಾಖಲೆ, ಮಾಹಿತಿ ಯನ್ನು ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಸಿಬಿಎಸ್ಇ ಮತ್ತು ಐಸಿ ಎಸ್ಇಯಿಂದಲೂ ನೇರ ಮಾಹಿತಿ ಸಿಇಟಿ ಸಾಫ್ಟ್ವೇರ್ ಸೇರಲಿದೆ. ಇದನ್ನು ಆಧರಿಸಿ ಕೆಇಎಯ ಸಾಫ್ಟ್ವೇರ್ ಅಭ್ಯರ್ಥಿಗಳ ಮಾಹಿತಿಯನ್ನು ಪರಿಷ್ಕರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ