ಚುನಾವಣಾ ಆಯೋಗ ನೀಡುವ ಗುರುತಿನ ಚೀಟಿಯನ್ನು ದುರುಪಯೋಗ ಮಾಡದಿರಿ : ಫವಾಜ್ ಪಿ.ಎ


Team Udayavani, Jan 25, 2022, 7:26 PM IST

ಚುನಾವಣಾ ಆಯೋಗ ನೀಡುವ ಗುರುತಿನ ಚೀಟಿಯನ್ನು ದುರುಪಯೋಗ ಮಾಡದಿರಿ : ಫವಾಜ್ ಪಿ.ಎ

ಭಟ್ಕಳ: ಇಲ್ಲಿನ ತಹಸಿಲ್ದಾರ್ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ಜಾಗೃತಿ ದಿನಾಚರಣೆಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಫವಾಜ್ ಪಿ.ಎ. ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಸರಕಾರ ಇಲ್ಲವೇ ಚುನಾವಣಾ ಆಯೋಗ ನೀಡುವ ಗುರುತಿನ ಚೀಟಿಯನ್ನು ಯಾವುದೇ ರೀತಿಯಿಂದ ದುರುಪಯೋಗ ಪಡಿಸಿಕೊಂಡರೆ ಅಂತರವರಿಗೆ ಶಿಕ್ಷೆಯಾಗಲಿದೆ, ಎಂದೂ ಅದನ್ನು ದುರುಪಯೋಗ ಪಡಿಸಿಕೊಳ್ಳದಿರಿ ಎಂದು ಕರೆ ನೀಡಿದರು.

ಒಬ್ಬ ವ್ಯಕ್ತಿಗೆ ಸಂವಿಧಾನಾತ್ಮಕವಾಗಿ ಇರುವ ಹಕ್ಕನ್ನು ಹೇಗೆ ಚಲಾಯಿಸಬೇಕು ಎನ್ನುವ ಕುರಿತು ತಿಳಿವಳಿಗೆ ನೀಡಲು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆರಂಭಿಸಲಾಗಿದ್ದು ಪ್ರತಿಯೋರ್ವ ಯುವ ಮತದಾರರು ಇದರ ಮಹತ್ವವನ್ನು ಅರಿತು ನಮ್ಮ ಜನ ಪ್ರತಿನಿಧಿಗಳನ್ನು ಆರಿಸುವಾಗ ಮತಚಲಾವಣೆಯನ್ನು ಮಾಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ನೀಡಿದ ನ್ಯೂ ಇಂಗ್ಲೀಷ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ವೀರೇಂದ್ರ ಶ್ಯಾನುಭಾಗ್ ಅವರು ಭಾರತದಲ್ಲಿ ಮಾತ್ರ ಪ್ರತಿಯೋರ್ವರಿಗೂ ಕೂಡಾ ಮತದಾನದ ಹಕ್ಕನ್ನು ನೀಡಲಾಗಿದೆ. ಬೇರೆ ಬೇರೆ ದೇಶದಲ್ಲಿ ಈ ರೀತಿಯ ಹಕ್ಕನ್ನು ಹಣವಂತರಿಗೆ, ಆಸ್ತಿವಂತರಿಗೆ ಹೀಗಿ ನೀಡಿರುವ ಉದಾಹರಣೆಯಿದೆ. ಚುನಾವಣೆಯಲ್ಲಿ ಮತದಾನ ಮಾಡುವುವಾಗ ನಾವು ಜಾಗೃತೆಯನ್ನು ವಹಿಸಬೇಕು. ಅಪರಾಧಿಕ ಹಿನ್ನೆಲೆಯುಳ್ಳವರಿಗೆ ಮತದಾನ ಮಾಡದಂತೆ ಕರೆ ನೀಡಿದ ಅವರು ಅನೇಕ ಚುನಾವಣೆಗಳ ಮತದಾನದ ಶೇಖಡಾವಾರು ನೋಡಿದಾಗ ಸುಶಿಕ್ಷತರೇ ಮತದಾನದಿಂದ ದೂರ ಇರುವುದು ಕಂಡು ಬರುತ್ತದೆ, ಇದು ಆಗಕೂಡದು ಎಂದ ಅವರು ಪ್ರತಿಯೋರ್ವರೂ ಕೂಡಾ ಮತದಾನ ಮಾಡುವಂತೆ ಕರೆ ನೀಡಿದರು. ಮತದಾನ ಭಾರತದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದ ಅವರು ಅದನ್ನು ನಾವು ಸರಿಯಾಗಿ ನಿಭಾಯಿಸಿದಲ್ಲಿ ರಾಷ್ಟ್ರದಲ್ಲಿ ಸದೃಢ ಸರಕಾರವನ್ನು ಸ್ಥಾಪಿಸಿದಂತಾಗುತ್ತದೆ ಎಂದರು.
ಕಾರ್ಯಕ್ರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಉಪಸ್ಥಿತರಿದ್ದರು.

ಇದನ್ನೂ ಓದಿ : ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ: ಕಿರಣಕುಮಾರ ವಡಗೇರಿ

ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು. ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ತಹಸೀಲ್ದಾರ್ ರವಿಚಂದ್ರ ಸ್ವಾಗತಿಸಿದರು. ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ವಂದಿಸಿದರು.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.