ಎರಡು ತಿಂಗಳಿಂದ ವಿದ್ಯುತ್ ಸಮಸ್ಯೆ : ಬೆಸ್ಕಾಂ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ


Team Udayavani, Apr 7, 2022, 6:12 PM IST

ಎರಡು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ : ಚಿಕ್ಕಜಾಜೂರು ಗ್ರಾಮಸ್ಥರಿಂದ ಪ್ರತಿಭಟನೆ

ಚಿಕ್ಕಜಾಜೂರು : ಸುಮಾರು ಎರಡು ತಿಂಗಳಿನಿಂದ ಚಿಕ್ಕಜಾಜೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದ್ದು ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ವಿದ್ಯುತ್ ಸಮಸ್ಯೆಯಿಂದ ಹೈರಾಣಾಗಿ ಹೋಗಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಚಿಕ್ಕಜಾಜೂರು ವಿದ್ಯುತ್ ಪ್ರಸರಣ ಕೇಂದ್ರ ಕಚೇರಿಯ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆಯಿತು.

ಚಿಕ್ಕಜಾಜೂರು ಹಾಗೂ ಅಕ್ಕಪಕ್ಕದ ಗ್ರಾಮಗಳಲ್ಲಿ ಸರಿಸುಮಾರು ಎರಡು ತಿಂಗಳಿಂದ ಕೇವಲ 2 ರಿಂದ 3 ಗಂಟೆ ವಿದ್ಯುತ್ ಪೂರೈಸುತ್ತಿದ್ದು ಮಹಿಳೆಯರಿಗೆ ದಿನನಿತ್ಯದ ಬಳಕೆಗೆ ನೀರನ್ನು ಸಹ ಸಂಗ್ರಹಿಸಲು ಸಾಧ್ಯವಾಗದೇ ತಲೆಮೇಲೆ ಕೈಹೊತ್ತು ಕುಳಿತುಕೊಳ್ಳುವ ಪ್ರಸಂಗ ಎದುರಾಗಿದೆ. SSLC ಪರೀಕ್ಷೆಗಳು ನಡೆಯುತ್ತಿದ್ದು ವಿದ್ಯಾರ್ಥಿಗಳು ಪರೀಕ್ಷೆಗಾಗಿ ಓದಿಕೊಳ್ಳಲು ಕರೆಂಟ್ ಇಲ್ಲದೇ ತುಂಬಾ ತೊಂದರೆ ಆಗಿದೆ, ಈ ಭಾಗದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಗರಿಷ್ಠ ಅಂಕ ತೆಗೆದುಕೊಳ್ಳದಿದ್ದರೆ ಇದಕ್ಕೆ ನೇರವಾಗಿ ಬೆಸ್ಕಾಂ ಇಲಾಖೆಯೆ ಕಾರಣ ಎಂದು ಪೋಷಕರು ಕಚೇರಿಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಿ,ಎಸ್,ಮೂರ್ತಿ ನೇತೃತ್ವದಲ್ಲಿ ಗುರುವಾರ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಸೇರಿದಂತೆ ಬೆಳಿಗ್ಗೆಯಿಂದಲೇ ಚಿಕ್ಕಜಾಜೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ : ಬೆಲೆ ಏರಿಕೆ ಬಿಸಿಗೆ ಜನತೆ ಜೀವಂತ ಶವವಾಗಿದ್ದಾರೆ: ಡಿ.ಕೆ.ಶಿವಕುಮಾರ್‌

ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ರವರಿಗೆ ಪಿಎಸ್ ಮೂರ್ತಿ ದೂರವಾಣಿ ಮುಖಾಂತರ ಈ ಭಾಗದ ಗ್ರಾಮಗಳ ವಿದ್ಯುತ್ ಸಮಸ್ಯೆ ಬಗ್ಗೆ ತಿಳಿಸಿದರು. ದೂರವಾಣಿಯಲ್ಲಿ ಮಾತನಾಡಿದ ಶಾಸಕರು ಚಿತ್ರುರ್ಗ ಇಇ ಜಯಪ್ಪರೊಂದಿಗೆ ಮಾತನಾಡಿ, ಈ ಕೂಡಲೇ ದಾವಣಗೆರೆಯಿಂದ ಹೆಚ್ಚುವರಿಯಾಗಿ ನಾಲ್ಕು ಮೆಗಾವ್ಯಾಟ್ ವಿದ್ಯುತ್ ಪಸರಿಸಲು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಇನ್ನು ಕೆಲವೇ ದಿನಗಳಲ್ಲಿ ಪಂಡರಹಳ್ಳಿಯಲ್ಲಿ ನಡೆಯುತ್ತಿರುವ ವಿದ್ಯುತ್ ಪ್ರಸರಣ ಕೇಂದ್ರದ ಕಾಮಗಾರಿ ಪೂರ್ಣಗೊಳ್ಳಲಿದೆ, ವಿದ್ಯುತ್ ಸಮಸ್ಯೆ ಇನ್ನು ಮುಂದೆ ಇರುವುದಿಲ್ಲ, ಅಲ್ಲಿವರೆಗೆ ನೀವುಗಳು ಆದಷ್ಟು ವಿದ್ಯುತ್ ಸಮಸ್ಯೆ ಆಗದಂತೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿಭಟನೆಯ ವಿಚಾರ ತಿಳಿದ ಹೊಳಲ್ಕೆರೆ ಎಡಬ್ಲ್ಯೂಇ ನಾಗರಾಜಪ್ಪ ನಾಗರಾಜಪ್ಪ ವಿದ್ಯುತ್ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಿಗೆ ವಿದ್ಯುತ್ ಸಮಸ್ಯೆ ಬಗ್ಗೆ ವಿವರಿಸಿದರು. ಈಗತಾನೆ ಮೇಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ, ಅಧಿಕಾರಿಗಳು ಮೂರು ಮೆಗಾವ್ಯಾಟ್ ವಿದ್ಯುತ್ ಹೆಚ್ಚಿಗೆ ನೀಡುವ ಭರವಸೆ ನೀಡಿದ್ದಾರೆ ಆದಷ್ಟು ಬೇಗ ಈ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು,

ಇದಕ್ಕೆ ಬಗ್ಗದ ಗ್ರಾಮಸ್ಥರು ನೀವು 2 ತಿಂಗಳಿನಿಂದ ಇದೇ ರೀತಿ ಸುಳ್ಳುಗಳನ್ನು ಹೇಳಿಕೊಂಡು ಬಂದಿದ್ದೀರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಲಸ ನಿರ್ವಹಿಸುವವರು ಸರಿಯಾಗಿ ಕೆಲಸ ಮಾಡುತ್ತಿಲ್ಲ, ಕೇಳಿದರೆ ನಿಮ್ಮ ಮೇಲೆ ಹೇಳುತ್ತಾರೆ ಸಾರ್ವಜನಿಕರು ನಿಮ್ಮ ಮನೆಯ ಗುಲಾಮರ, ಈ ಸಮಸ್ಯೆ ಮುಂದುವರೆದರೆ ಕಚೇರಿಗೆ ಬೀಗ ಜಡಿದು ದೊಡ್ಡ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಆಧುನಿಕತೆ ಹೊಡೆತದಿಂದ ಕುಂಬಾರಿಕೆ ನೇಪತ್ಯಕ್ಕೆ ; ಗಡಿಗೆ ತಯಾರಿಕೆಗೆ ಆಧುನಿಕ ಸ್ಪರ್ಶ

ಪಿ ಎಸ್ ಮೂರ್ತಿ ಅವರು ಮಾತನಾಡಿ ಚಿಕ್ಕಜಾಜೂರು ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಜಾತ್ರೆಗಳು ನಡೆಯುತ್ತಿದ್ದು ಹನ್ನೊಂದನೇ ತಾರೀಖಿನವರೆಗೆ ಹಲವು ರೀತಿಯ ದೇವತಾಕಾರ್ಯಗಳು ರಾತ್ರಿ ವೇಳೆ ನಡೆಯುತ್ತಿವೆ ಗ್ರಾಮ ದೇವರುಗಳ ಮೆರವಣಿಗೆಗಳನ್ನು ಕತ್ತಲಲ್ಲಿ ಮಾಡುವ ಪ್ರಸಂಗ ಬಂದಿದೆ, ಹೀಗೆ ಆದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ, ರಸ್ತೆ ತಡೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಾಗರಾಜಪ್ಪ ನಾನು ಕೂಡ ಹಲವು ಬಾರಿ ಇಲಾಖಾ ಮೀಟಿಂಗ್ ಗಳಲ್ಲಿ ಈ ಭಾಗದ ವಿದ್ಯುತ್ ಸಮಸ್ಯೆ ಬಗ್ಗೆ ವಿವರಿಸಿ ಅಧಿಕಾರಿಗಳಿಗೆ ಮಾತನಾಡಿದ್ದೇನೆ, ಸಮಸ್ಯೆ ಬಗ್ಗೆ ತಿಳಿಸಿದ್ದೇನೆ, ಈ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.

ಶಾಸಕರು ಹಾಗೂ ಬೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಮಸ್ಯೆ ಬೇಗನೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಗ್ರಾ,ಪಂ ಉಪಾಧ್ಯಕ್ಷ ಪಿಎಸ್ ಮೂರ್ತಿ, ಸದಸ್ಯರಾದ ಸಿದ್ದೇಶ್, ಜಮೀರ್ ಪಾಷ, ಶ್ರೀಕಾಂತ್, ಕೃ,ಪ,ಸ,ಸಂ,ಸದಸ್ಯ ಪವನ್, ಬಾಬು,ರವಿಕುಮಾರ್, ಸುರೇಶ್, ಹಗೇದ್ ಹಾಲೇಶ್, ಖದೀರ್, ರಾಜು, ಮಲ್ಲಿಕಾರ್ಜುನ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು, ಆರಕ್ಷಕ ಸಿಬ್ಬಂದಿ ಎಎಸ್ಐ ಶಿವಮೂರ್ತಿ, ಗಿರೀಶ್ ಮುಂಜಾಗ್ರತಾ ಕ್ರಮವಾಗಿ ಮೊಕ್ಕಾಂ ಹೂಡಿದ್ದರು,

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.