Elimale: ಇಲಿ ಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ
Team Udayavani, Dec 15, 2023, 10:09 PM IST
ಗುತ್ತಿಗಾರು: ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯೋರ್ವ ಇಂದು(ಡಿ. ೧೫) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲಿಮಲೆಯಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶಮಂತ್ ಎಂದು ಗುರುತಿಸಲಾಗಿದೆ.
ನೆಲ್ಲೂರು ಕೇಮ್ರಾಜೆ ಗ್ರಾಮದ ಎಲಿಮಲೆ ಸಮೀಪದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿಣ ವಾಸುದೇವ ಎಂಬವರ ಪುತ್ರ, ಶಮಂತ್ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಳೆದ ವರ್ಷ ಕೂಡ ಶಮಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಹಲವಾರು ಮಂದಿ ಆತನ ಚಿಕಿತ್ಸೆಗಾಗಿ ನೆರವು ನೀಡಿದ್ದರು. ಇದೀಗ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ