ಕನ್ನಡದಲ್ಲಿ ಎಂಜಿನಿಯರಿಂಗ್‌; ಗುಣಮಟ್ಟಕ್ಕೆ ಕುಂದಾಗದಿರಲಿ

Team Udayavani, May 29, 2021, 6:55 AM IST

ಕನ್ನಡದಲ್ಲಿ ಎಂಜಿನಿಯರಿಂಗ್‌; ಗುಣಮಟ್ಟಕ್ಕೆ ಕುಂದಾಗದಿರಲಿ

ಸಾಂದರ್ಭಿಕ ಚಿತ್ರ

ಕನ್ನಡದಲ್ಲಿ ಎಂಜಿನಿಯರಿಂಗ್‌ ಪದವಿ ಪಡೆಯಲು ಅಖೀಲ ಭಾರತ ತಾಂತ್ರಿಕ ಪರಿಷತ್‌ ಅವಕಾಶ ನೀಡಿದೆ. ಇದರಿಂದ ಕರ್ನಾಟಕದ ಗ್ರಾಮೀಣ ಭಾಗದ ಅದರಲ್ಲೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಎಂಜಿನಿಯರಿಂಗ್‌ ಕೋರ್ಸ್‌ಗಳನ್ನು ಕನ್ನಡದಲ್ಲಿ ಬೋಧಿಸಲು ಬೇಕಾದ ಪಠ್ಯಕ್ರಮವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಯಾರಿಸುತ್ತಿದೆ.

ಕನ್ನಡದಲ್ಲಿ ತಾಂತ್ರಿಕ ಕೋರ್ಸ್‌ ನೀಡುವ ನಿಟ್ಟಿನಲ್ಲಿ ವಿಟಿಯು ವಿಶೇಷ ಕಾಳಜಿ ವಹಿಸಿ, ತಾಂತ್ರಿಕ ತಜ್ಞರ ಸಮಿತಿ ರಚಿಸಿ, ಅದಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಂಡಿದೆ. ತಾಂತ್ರಿಕ ಕೋರ್ಸ್‌ಗಳನ್ನು ಕನ್ನಡದಲ್ಲೂ ಪಡೆಯಲು ಅವಕಾಶ ನೀಡಬೇಕು ಎಂಬ ಕೂಗು, ಹೋರಾಟ ದಶಕಗಳಿಂದಲೂ ನಡೆದುಕೊಂಡು ಬಂದಿತ್ತು. ಈಗ ತಾಂತ್ರಿಕ ಪರಿಷತ್‌ ಕನ್ನಡದಲ್ಲೂ ಎಂಜಿನಿಯರಿಂಗ್‌ ಕೋರ್ಸ್‌ ನಡೆಸಲು ಅವಕಾಶ ನೀಡಿದ್ದು, ನಿಜವಾದ ಸವಾಲು ಈಗ ಉದ್ಭವಿಸಿದೆ. ತಾಂತ್ರಿಕ ಶಿಕ್ಷಣವನ್ನು ಕನ್ನಡ ಭಾಷೆಯಲ್ಲಿ ಎಷ್ಟು ಪರಿಣಾಮಕಾರಿಯಾಗಿ ನೀಡಲಾಗುತ್ತದೆ ಎನ್ನುವುದು ಮುಖ್ಯವಾಗುತ್ತದೆ.

ಆಂಗ್ಲ ಭಾಷೆಯಲ್ಲಿ ಎಂಜಿನಿಯರಿಂಗ್‌ ಪದವಿ ಅಧ್ಯಯನ ಮಾಡಿ ದಷ್ಟೇ ಉತ್ಕೃಷ್ಟತೆ ಹಾಗೂ ಪರಿಪೂರ್ಣತೆ ಹಾಗೂ ಗುಣಮಟ್ಟ ಕನ್ನಡ ದಲ್ಲೂ ಪದವಿ ಪಡೆದ ವಿದ್ಯಾರ್ಥಿಗಳಿಗೂ ಸಿಗಬೇಕು. ಕನ್ನ ಡ ಭಾಷೆ ಯಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದ ವಿದ್ಯಾರ್ಥಿಗಳು, ಆಂಗ್ಲ ಮಾಧ್ಯಮದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳೊಂದಿಗೆ ಸರಿಸಮವಾದ ಸ್ಪರ್ಧೆ ಮಾಡುವಂತೆ ಮಾಡಬೇಕು. ಇದೆಲ್ಲದಕ್ಕಿಂತ ಮುಖ್ಯವಾಗಿ ಸರಕಾರವೂ ಕೈಗಾರಿಕೆ ಹಾಗೂ ಖಾಸಗಿ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಕನ್ನಡ ಪಠ್ಯಕ್ರಮ ಸಿದ್ಧವಾಗುವ ಸಂದರ್ಭಗಳಲ್ಲಿಯೇ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶವೂ ದೊರೆಯುವಂತೆ ಮಾಡಬೇಕು.

ಹಾಗೆಯೇ ಎಂಜಿನಿಯರಿಂಗ್‌ ಕನ್ನಡ ಮಾಧ್ಯಮ ಬೋಧನೆ ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಸೀಮಿತವಾಗದಂತೆಯೂ ನೋಡಿಕೊಳ್ಳಬೇಕು. ಕನ್ನಡ ಅಥವಾ ಇಂಗ್ಲಿಷ್‌ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ ಪಡೆಯುವ ಆಯ್ಕೆಯನ್ನು ವಿದ್ಯಾರ್ಥಿ ಗಳಿಗೆ ಕಲ್ಪಿಸುವ ಜತೆಗೆ ಸರಕಾರಿ ಕೋಟಾದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸೀಟು ಭರ್ತಿ ಸಂದರ್ಭದಲ್ಲಿ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಪದವಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದಾದರೂ ರೀತಿಯಲ್ಲಿ ಅನುಕೂಲ ಮಾಡಿಕೊಡಬಹುದೇ ಎಂಬುದರ ಬಗ್ಗೆಯೂ ಸರಕಾರ ಈಗಿಂದಲೇ ಗಂಭೀರವಾಗಿ ಯೋಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು.

ಈಗ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಜವಾ ಬ್ದಾರಿಯೂ ಹೆಚ್ಚಿದೆ. ಕನ್ನಡ ಮಾಧ್ಯಮದ ತಾಂತ್ರಿಕ ಶಿಕ್ಷಣದ ಬೋಧನೆಯು ಸ್ವಾಯತ್ತ, ಸ್ವತಂತ್ರ ಹಾಗೂ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಪರಿಣಾಮಕಾರಿಯಾಗಿ ನಡೆಯುವಂತೆ ಮಾಡಬೇಕು. ಆಧುನಿಕ ಶಿಕ್ಷಣ ಸರಿಹೊಂದುವಂತೆ ಕನ್ನಡ ಮಾಧ್ಯಮದ ಪಠ್ಯಕ್ರಮವನ್ನು ಆಗಿಂದಾಗೆ ಪರಿಷ್ಕರಿಸುವುದು, ಉನ್ನತೀಕರಿಸುವುದನ್ನು ಮಾಡಬೇಕು. ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳಿಗೆ ಉನ್ನತ ಸಂಶೋಧನೆಯೂ ಕನ್ನಡದಲ್ಲೇ ನಡೆಸಲು ಅವಕಾಶ ಮಾಡಿಕೊಡಬೇಕು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.