ಉಪ ಕದನದಲ್ಲೂ ಇವಿಎಂ ದುರ್ಬಳಕೆ

Team Udayavani, Dec 16, 2019, 3:09 AM IST

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾ ವಣೆ ಫ‌ಲಿತಾಂಶ ಬಂದ ನಂತರ ಇವಿಎಂ ದುರ್ಬಳಕೆ ಆರೋಪ ಕೇಳಿ ಬಂದಿತ್ತು. ರಾಜ್ಯದಲ್ಲಿ ಇತ್ತೀಚೆಗೆ ನಡೆದ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿಯೂ ಇವಿಎಂ ದುರ್ಬಳಕೆಯಾಗಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರು ಶನಿವಾರ ತಮ್ಮನ್ನು ಭೇಟಿಯಾದ ಪ್ರಮುಖ ಮಠಾಧೀಶರೊಬ್ಬರ ಬಳಿ ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಇವಿಎಂ ದುರ್ಬಳಕೆ ಮಾಡಿ ಕೊಂಡಿರುವ ಸಾಧ್ಯತೆ ಇದೆ ಎಂದು ಅನು ಮಾನ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.

ಆರೋಗ್ಯ ವಿಚಾರಣೆ ಸಂದರ್ಭದಲ್ಲಿ ಮಠಾಧೀಶರು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಬಗ್ಗೆಯೂ ಅನೌಪಚಾರಿಕ ಚರ್ಚೆ ನಡೆಸಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಪ್ರತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿನ ಸಾಧ್ಯತೆ, ಚುನಾವಣೆ ಸಂದರ್ಭ ದಲ್ಲಿ ಸಾರ್ವಜನಿಕರಿಂದ ತಮಗೆ ದೊರೆತ ಸ್ಪಂದನೆಯಿಂದ ಆಯ್ದ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವಿತ್ತು. ಆದರೆ ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗಿದ್ದ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು 10 -15 ಸಾವಿರಕ್ಕೂ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಿರು ವುದು ಅನುಮಾನಕ್ಕೆ ಕಾರಣವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.

ಪ್ರಮುಖವಾಗಿ ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಕಾಗವಾಡ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿತ್ತು. ಕಾಗವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್‌ ಅವರಿಗೆ ಕೆಲವು ಗ್ರಾಮಗಳಲ್ಲಿ ಪ್ರವೇಶ ಮಾಡದಂತೆ ನಿರ್ಬಂಧ ವಿಧಿಸಿದ್ದರು. ಆದರೂ, ಬಹಿರಂಗವಾಗಿಯೇ ಜನರು ಅವರ ವಿರುದ್ಧ ಮಾತನಾಡುತ್ತಿದ್ದರೂ, ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಗೆಲ್ಲಲು ಇವಿಎಂ ತಿರುಚಿರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಣೆಬೆನ್ನೂರು ಕ್ಷೇತ್ರದಲ್ಲಿಯೂ ಮಾಜಿ ಸ್ಪೀಕರ್‌ ಕೆ.ಬಿ.ಕೋಳಿವಾಡ್‌ ಬಗ್ಗೆ ಜನರಿಗೆ ಒಳ್ಳೆಯ ಅಭಿಪ್ರಾಯವಿತ್ತು. ಇದು ಅವರ ಕೊನೆಯ ಚುನಾವಣೆ ಎನ್ನುವ ಕಾರಣಕ್ಕೆ ಜನರು ಅವರ ಬಗ್ಗೆ ಪ್ರಚಾರ ಸಂದರ್ಭದಲ್ಲಿ ಒಲವು ತೋರಿಸಿದ್ದು ಗಮನಿಸಿದರೆ, ಅವರು ಅನಾಯಾಸವಾಗಿ ಗೆಲ್ಲಬಹುದು ಎಂದು ಕೊಂಡಿದ್ದೆವು. ಹಿರೇಕೆರೂರಿನಲ್ಲಿಯೂ ಬಿ.ಸಿ. ಪಾಟೀಲರ ಬಗ್ಗೆ ಜನರ ಆಕ್ರೋಶ, ಕಾಂಗ್ರೆಸ್‌ ಅಭ್ಯರ್ಥಿ ಬನ್ನಿಕೋಡ್‌ ಅವರ ಬಗ್ಗೆ ಇದ್ದ ಒಳ್ಳೆಯ ಅಭಿಪ್ರಾಯದಿಂದ ಅವರೂ ಗೆಲ್ಲುವ ಲೆಕ್ಕಾಚಾರವಿತ್ತು. ಆದರೆ, ಫ‌ಲಿತಾಂಶದಲ್ಲಿನ ಅಂತರ ಇವಿಎಂ ದುರುಪಯೋಗವನ್ನು ಅಲ್ಲಗಳೆಯು ವಂತಿಲ್ಲ ಎಂಬ ಅನುಮಾನದಿಂದಲೇ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ.

ಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಅಭ್ಯರ್ಥಿಗಳ ಪರವಾಗಿ ಹೆಚ್ಚಿನ ಹಣ ಹಂಚಿಕೆ ಮಾಡಿದ್ದು ಕಾಂಗ್ರೆಸ್‌ನ ಹೀನಾಯ ಸೋಲಿಗೆ ಕಾರಣ ವಾಯಿತು. ಅಷ್ಟೊಂದು ಪ್ರಮಾಣದಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಲಿಲ್ಲ ಎಂದು ಚುನಾವಣೆಯ ಸೋಲಿನ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ರಾಜಕಾರಣದ ಬಗ್ಗೆ ಬೇಸರ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳ ಬಗ್ಗೆಯೂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ 17 ಜನ ಶಾಸಕರು ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಿರುವ ಬೆಳವಣಿಗೆಯಿಂದ ರಾಜಕಾರಣದಲ್ಲಿ ಸಿದ್ಧಾಂತವೇ ಇಲ್ಲದಂತಾಗಿದೆ. ಯಾರನ್ನು ನಂಬಿ ರಾಜಕಾರಣ ಮಾಡಬೇಕು ಎನ್ನುವುದೇ ತಿಳಿಯದಂತಾಗಿದೆ.

ಬೇರೆಯವರ ತಪ್ಪುಗಳಿಗೂ ನಮ್ಮನ್ನು ಹೊಣೆಗಾರರನ್ನಾಗುವಂತೆ ಮಾಡುತ್ತಾರೆ. ಯಾವ ಸಿದ್ಧಾಂತದ ವಿರುದ್ಧ ಮಾತನಾಡುತ್ತಿದ್ದರೋ ಅವರೇ ಬಿಜೆಪಿ ಜೊತೆಗೆ ಹೋಗಿ ಕೈಜೋಡಿಸುತ್ತಾರೆ. ಎಲ್ಲರೂ ಅಧಿಕಾರದಲ್ಲಿಯೇ ಇರಬೇಕು ಎನ್ನುವ ಮನಸ್ಥಿತಿ ಬಂದರೆ ಹೇಗೆ ಕೆಲಸ ಮಾಡಲು ಸಾಧ್ಯ ಎಂದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಹೋಗಿರುವ ಶಾಸಕರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆಂದು ತಿಳಿದು ಬಂದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ