Udayavni Special

ಸಿದ್ದರಾಮಯ್ಯ-ಈಶ್ವರಪ್ಪ ವಾಕ್ಸಮರ ತಾರಕಕ್ಕೆ


Team Udayavani, Jun 30, 2019, 3:09 AM IST

siddaramaiah00

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮಾತಿನ ಅಬ್ಬರದಲ್ಲಿ “ಶೂ, ಮೊಟ್ಟೆ’ ಎಂಟ್ರಿಯಾಗಿದ್ದು, ಪರಸ್ಪರರ ಮೇಲಿನ ಕೆಸರೆರಚಾಟ ಜೋರಾಗಿದೆ. ಶುಕ್ರವಾರ ಬಾಗಲಕೋಟೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, “ಉಚಿತ ಮೊಟ್ಟೆ, ಶಾಲಾ ಮಕ್ಕಳಿಗೆ ಶೂ ಕೊಟ್ಟರೂ ನಮಗೆ ಮತ ಹಾಕಲಿಲ್ಲ’ ಎಂದಿದ್ದರು.

ಇದಕ್ಕೆ ಶನಿವಾರ ಪ್ರತಿಕ್ರಿಯಿಸಿದ ಈಶ್ವರಪ್ಪ, “ನಾನು ಶೂ ಕೊಟ್ಟೆ, ಮೊಟ್ಟೆ ಕೊಟ್ಟೆ’ ಎನ್ನುವ ಸಿದ್ದರಾಮಯ್ಯ, ಅದನ್ನು ಸ್ವಂತ ಹಣದಲ್ಲೇನೂ ಕೊಟ್ಟಿಲ್ಲ. ಜನರ ತೆರಿಗೆ ಹಣದಲ್ಲಿ ನೀಡಿದ್ದಾರೆ. ಅದೇ ಮೊಟ್ಟೆ ಹಾಗೂ ಶೂಗಳಿಂದ ಲೋಕಸಭೆ ಚುನಾವಣೆಯಲ್ಲಿ ಜನ ಅವರನ್ನು ಹೊಡೆದಿದ್ದಾರೆ ಎಂದು ವ್ಯಂಗ್ಯವಾಡಿದರು. ಈ ಹೇಳಿಕೆಯಿಂದ ಕೆರಳಿದ ಸಿದ್ದರಾಮಯ್ಯ, ಬಾಗಲಕೋಟೆಯಲ್ಲಿ ನಡೆದ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ವೇಳೆ ಮಾತನಾಡಿ, “ಈಶ್ವರಪ್ಪ ಮನುಷ್ಯನೇ ಅಲ್ಲ. ಅವನೇ ಕೈಯಲ್ಲಿ ಶೂ ಹಿಡಿದುಕೊಂಡಿದ್ದಾನೋ ಗೊತ್ತಿಲ್ಲ.

ಅವನ ನಾಲಿಗೆಯಲ್ಲಿ ಸಂಸ್ಕೃತಿ ಇಲ್ಲ. ಅವನು ನಾಗರಿಕನೇ ಅಲ್ಲ. ಬಿಜೆಪಿ ಅವರಿಗೆ ಸಂಸ್ಕೃತಿ ಕಲಿಸಿದೆ ಅನ್ನುತ್ತಾರೆ. ಆದರೆ, ಈಶ್ವರಪ್ಪಗೆ ಸಂಸ್ಕೃತಿಯೇ ಇಲ್ಲ. ನಾನು ಮಕ್ಕಳಿಗೆ ಶೂ, ಮೊಟ್ಟೆ, ಬಟ್ಟೆ, ಅನ್ನಭಾಗ್ಯ ಎಲ್ಲವನ್ನೂ ತೆರಿಗೆ ಹಣದಲ್ಲೇ ಕೊಟ್ಟಿದ್ದೇನೆ. ಮೋದಿ ಕೂಡ ಕರ್ನಾಟಕದ ತೆರಿಗೆ ಹಣದಲ್ಲೇ ಅಕ್ಕಿ ಕೊಟ್ಟಿದ್ದಾರೆ. ನಾನು ಸಿಎಂ ಆಗಿದ್ದಾಯ್ತು. ಈಶ್ವರಪ್ಪಗೆ ಸಿಎಂ ಆಗುವ ಯೋಗ್ಯತೆ ಇಲ್ಲ. ಯಡಿಯೂರಪ್ಪ ಕೂಡ ಸಿಎಂ ಆಗಲ್ಲ’ ಎಂದು ಏಕವಚನದಲ್ಲಿ ತಿರುಗೇಟು ನೀಡಿದರು.

ಸೋತರೂ ಸಿದ್ದರಾಮಯ್ಯಗೆ ಬುದ್ಧಿ ಬಂದಿಲ್ಲ – ಈಶ್ವರಪ್ಪ: ಶನಿವಾರ ಬಾಗಲಕೋಟೆಗೆ ಆಗಮಿಸಿದ ಈಶ್ವರಪ್ಪ ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭೇಟಿಯಾಗುವುದೇ ಅಪರೂಪ ಎಂದು ಹೇಳಿದ್ದಾರೆ. ಇವರಿಬ್ಬರೂ ಮೊದಲು ಒಂದೆಡೆ ಕುಳಿತು ಚರ್ಚೆ ಮಾಡುವುದು ಕಲಿಯಲಿ.

ಸ್ವತಃ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿಯಲ್ಲಿ 36 ಸಾವಿರ ಮತಗಳಿಂದ ಸೋತರು. ಪಾಪ, ಬಾದಾಮಿಯ ಜನ ಮುಗ್ಧರು. 1,600 ಮತಗಳಿಂದ ಗೆಲ್ಲಿಸಿದರು. ನಾವೇ ಅಧಿಕಾರಕ್ಕೆ ಬರೋದು ಎಂದು ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ಬಾಯಿಗೆ ಬಂದಂತೆ ಬೈಯ್ಯುತ್ತಿದ್ದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನವರಿಗೆ ಸೋತರೂ ಜ್ಞಾನ ಬಂದಿಲ್ಲ. ಹೀಗಾಗಿ, ಮತ್ತೆ ಲೋಕಸಭೆ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಬರುವಂತೆ ಜನ ಮಾಡಿದರು.

ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಜ್ಞಾನ ಬಂದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಜನ ಮತ ಹಾಕುತ್ತಿದ್ದರೇನೋ?. ಆದರೆ, 38 ಸ್ಥಾನ ಬಂದಿರುವ ಜೆಡಿಎಸ್‌ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡರು. ಇದು ರಾಜ್ಯದ ಜನರಿಗೆ ಇಷ್ಟವಾಗಲಿಲ್ಲ. ದಕ್ಷಿಣ ಭಾರತದಲ್ಲಿ ಬಿಜೆಪಿ ಬೆಳೆಯಲು ಬಿಡಲ್ಲ ಎಂದಿದ್ದ ಕಾಂಗ್ರೆಸ್‌-ಜೆಡಿಎಸ್‌ನವರಿಗೆ ಕೇವಲ ಒಂದೊಂದು ಸ್ಥಾನದಲ್ಲಿ ಜನ ನಿಲ್ಲಿಸಿದ್ದಾರೆ ಎಂದರು.

ಕಾಂಗ್ರೆಸ್‌ಗೆ ಬಿಜೆಪಿಯಿಂದ ಬೇಲಿ: ಮುಂದಿನ ಎಲ್ಲ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಬಿಜೆಪಿಯಿಂದ ಬೇಲಿ ಹಾಕುತ್ತೇವೆ. ದಕ್ಷಿಣ ಭಾರತವನ್ನು ಕಾಂಗ್ರೆಸ್‌ ಮುಕ್ತ ಮಾಡಲು ನಾವು ತಯಾರಿದ್ದೇವೆ. ಕಾಂಗ್ರೆಸ್‌ ಎಲ್ಲೆ ಸ್ಪರ್ಧಿಸಿದರೂ, ಬಿಜೆಪಿಯಿಂದ ಬೇಲಿ ಹಾಕಿ ಸೋಲಿಸುತ್ತೇವೆ. ಸಿದ್ದರಾಮಯ್ಯ ಅವರ ಸೊಕ್ಕಿನ ಮಾತುಗಳಿಗೆ ಜನ ಬಿಜೆಪಿಗೆ ಮತ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ಇಡೀ ವಿಶ್ವವೇ ಕೊಂಡಾಡುತ್ತಿರುವಾಗ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಬೈಯುತ್ತಾರೆ. ಇಂತಹ ಸೊಕ್ಕಿನ ಮಾತುಗಳಿಗೆ ಜನ ಮುಂದೆಯೂ ಉತ್ತರ ಕೊಡುತ್ತಾರೆ ಎಂದರು.

ಸಿದ್ದು ನಿದ್ದೆ ಬಿಟ್ಟು ಬೇರೇನೂ ಮಾಡಲಿಲ್ಲ: ನಮ್ಮ ದೇಶದಲ್ಲಿ ಬ್ರಿಟಿಷ್‌ ಸಂತತಿ ಇನ್ನೂ ಇದೆ. ಸಿದ್ದರಾಮಯ್ಯ ಸಿಎಂ ಆಗಲು ಬ್ರಿಟಿಷರಿಗೆ ಬೆಂಬಲ ಕೊಟ್ಟಿದ್ದ ಸಂತತಿಯವರ ಸೆರಗು ಹಿಡಿದು ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯನ್ನು ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿಗೆ ಹೋಲಿಸಿದ್ದಾರೆ. ಆದರೆ, ಬ್ರಿಟಿಷರಿಗೆ ಬೆಂಬಲ ಕೊಟ್ಟ ಸಂತತಿ ಯಾರದ್ದು ಎಂಬುದು ಜನತೆಗೆ ಗೊತ್ತಿದೆ. ಕೆಲಸ ಮಾಡುವವರಿಗೆ ಮತ ಕೊಡಿ, ನಿದ್ದೆ ಮಾಡುವವರಿಗೆ ಮತ ಕೊಡಬೇಡಿ ಎಂದ ಸಿದ್ದರಾಮಯ್ಯಗೆ ಐದು ವರ್ಷ ನಿದ್ದೆ ಮಾಡಿದ್ದರಿಂದಲೇ ಜನ ಮನೆಗೆ ಕಳುಹಿಸಿದ್ದಾರೆ ಎಂದರು.

ಐದು ವರ್ಷ ಸಿಎಂ ಆಗಿದ್ದ ಸಿದ್ದರಾಮಯ್ಯ ನಿದ್ದೆ ಬಿಟ್ಟು ಬೇರೇನೂ ಮಾಡಲಿಲ್ಲ. ಕೆಲಸ ಮಾಡುವವರಿಗೆ ಮತ ಕೊಡಿ, ನಿದ್ದೆ ಮಾಡುವವರಿಗೆ ಮತ ಕೊಡಬೇಡಿ ಎಂದು ಅವರು ಹೇಳಿರುವುದು ಸತ್ಯವಾಗಿದೆ. ಕಾಂಗ್ರೆಸ್‌ನವರು ನಿದ್ದೆ ಮಾಡುವವರು. ಮೋದಿ ಕೆಲಸ ಮಾಡುವವರು. ಹೀಗಾಗಿಯೇ ಅವರನ್ನು ಜನ ಮನೆಗೆ ಕಳುಹಿಸಿದ್ದಾರೆ ಎಂದರು.

ತೊಡೆ ತಟ್ಟಿ ಚುನಾವಣೆ ಮಾಡ್ತೇವೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳು ಚುನಾವಣೆಗೆ ಸದಾ ಸಿದ್ಧರಿರಬೇಕೆಂಬ ಸಿದ್ದರಾಮಯ್ಯ ಹೇಳಿಕೆ ಸ್ವೀಕರಿಸುತ್ತೇವೆ. ಚುನಾವಣೆ ಬಂದರೆ ಎದುರಿಸುವ ಹುಲಿಯಂತಹ ನಾಯಕರು ನಮ್ಮಲ್ಲಿದ್ದಾರೆ. ತೊಡೆ ತಟ್ಟಿ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮುಗಿದ ಬಳಿಕ ಪಕ್ಷ ಸಂಘಟನೆ ಮಾಡುತ್ತೇವೆ. ಮುಂದೆ ಯಾವುದೇ ಚುನಾವಣೆ ನಡೆದರೂ ಸಿದ್ದರಾಮಯ್ಯನವರ ನಿದ್ದೆ ಮಾಡುವವರು, ಕೆಲಸ ಮಾಡುವವರು ಹೇಳಿಕೆಯೇ ನಮಗೆ ಪ್ರಚಾರದ ಅಸ್ತ್ರವಾಗಲಿದೆ ಎಂದರು.

4 ರೂ.ಕೊಟ್ಟು ನಾಲ್ಕಾರು ಮಾತು: ಉಚಿತ ಅಕ್ಕಿ ಕೊಟ್ಟಿದ್ದಾಗಿ ಸಿದ್ದರಾಮಯ್ಯ ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಒಂದು ಕೆಜಿ ಅಕ್ಕಿಗೆ ಒಟ್ಟು 32 ರೂ.ಇದೆ. ಅದರಲ್ಲಿ 28 ರೂ.ಕೇಂದ್ರ ಸರ್ಕಾರ ಕೊಡುತ್ತದೆ. ನಾಲ್ಕು ರೂ.ಮಾತ್ರ ರಾಜ್ಯ ಸರ್ಕಾರ ಕೊಡುತ್ತದೆ. ನಾಲ್ಕು ರೂ.ಕೊಟ್ಟು, ಅವರು ನಾಲ್ಕಾರು ಮಾತುಗಳನ್ನು ಆಡುತ್ತಿದ್ದಾರೆ. “ಉಚಿತ ಅಕ್ಕಿ’ ಎಂದು ಜನರಿಗೆ ಮೋಸ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಾಲ್ಕು ಸ್ಥಾನವೂ ಬರದಂತೆ ಜನ ಮಾಡುತ್ತಾರೆ ಎಂದು ಈಶ್ವರಪ್ಪ ಟೀಕಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶ ಕಟ್ಟಿದವರು ಮಾಡದ ತಪ್ಪಿಗೆ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ: HDK

ದೇಶ ಕಟ್ಟಿದವರು ಮಾಡದ ತಪ್ಪಿಗೆ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ: HDK

ಕೋವಿಡ್-19 ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿದ ರಾಜ್ಯಪಾಲ ವಜುಭಾಯಿ ವಾಲಾ

ಕೋವಿಡ್-19 ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿದ ರಾಜ್ಯಪಾಲ ವಜುಭಾಯಿ ವಾಲಾ

ಸಿದ್ದರಾಮಯ್ಯ ರಿಯಾಲಿಟಿ ಚೆಕ್: ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ

ಸಿದ್ದರಾಮಯ್ಯ ರಿಯಾಲಿಟಿ ಚೆಕ್: ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ

ಏ.26ರಂದು ನಡೆಯಬೇಕಿದ್ದ ಸಪ್ತಪದಿ ಯೋಜನೆ ಮುಂದೂಡಿಕೆ: ಸಚಿವ ಕೋಟ ಮಾಹಿತಿ

ಏ.26ರಂದು ನಡೆಯಬೇಕಿದ್ದ ಸಪ್ತಪದಿ ಯೋಜನೆ ಮುಂದೂಡಿಕೆ: ಸಚಿವ ಕೋಟ ಮಾಹಿತಿ

ಮತ್ತೆ 12 ಹೊಸ ಸೋಂಕಿತರು: ರಾಜ್ಯದಲ್ಲಿ 175ಕ್ಕೇರಿದ ಕೋವಿಡ್ 19 ಸೋಂಕಿತರ ಸಂಖ್ಯೆ

ಮತ್ತೆ 12 ಹೊಸ ಸೋಂಕಿತರು: ರಾಜ್ಯದಲ್ಲಿ 175ಕ್ಕೇರಿದ ಕೋವಿಡ್ 19 ಸೋಂಕಿತರ ಸಂಖ್ಯೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಎರಡು ವಾರ ಪೂರೈಕೆ ವಲಯಕ್ಕೆ ಸತ್ವ ಪರೀಕ್ಷೆಯ ಕಾಲ

ಎರಡು ವಾರ ಪೂರೈಕೆ ವಲಯಕ್ಕೆ ಸತ್ವ ಪರೀಕ್ಷೆಯ ಕಾಲ

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?