ಬಾದಾಮಿಗೂ ಶೀಘ್ರ ಪಲ್ಲಕ್ಕಿ ಬಸ್‌ ಸೇವೆ; ಬಸ್‌ ಓಡಿಸಿದ ಶಾಸಕ ಭೀಮಸೇನ ಚಿಮ್ಮನಕಟ್ಟಿ!

ಕಾಂಗ್ರೆಸ್‌ ಸರ್ಕಾರದ ಜನಪರ ಯೋಜನೆ ಎಂಬುದಕ್ಕೆ ಸಾಕ್ಷಿಯಾಗಿದೆ

Team Udayavani, Mar 6, 2024, 1:50 PM IST

ಬಾದಾಮಿಗೂ ಶೀಘ್ರ ಪಲ್ಲಕ್ಕಿ ಬಸ್‌ ಸೇವೆ; ಬಸ್‌ ಓಡಿಸಿದ ಶಾಸಕ ಭೀಮಸೇನ ಚಿಮ್ಮನಕಟ್ಟಿ!

ಉದಯವಾಣಿ ಸಮಾಚಾರ
ಬಾದಾಮಿ: ಪ್ರವಾಸಿ ತಾಣಗಳ ಕ್ಷೇತ್ರ ಬಾದಾಮಿಯ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಂಗಳವಾರ ಸಾರಿಗೆ ಸಂಸ್ಥೆಯ ಬಸ್‌ ಓಡಿಸುವ ಮೂಲಕ ಐದು ನೂತನ ಬಸ್‌ಗಳ ಸೇವೆಗೆ ಚಾಲನೆ ನೀಡಿದರು. ಪಟ್ಟಣದ ಸಾರಿಗೆ ಸಂಸ್ಥೆಯ ಬಸ್‌ ನಿಲ್ದಾಣ ಘಟಕದಲ್ಲಿ ಗುಳೇದಗುಡ್ಡ ಮತ್ತು ಬಾದಾಮಿ ಡಿಪೋಗೆ ತಲಾ ಎರಡು ಹೊಸ ಬಸ್‌ಗಳಿಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ ಚಿಮ್ಮನಕಟ್ಟಿ, ಬಾದಾಮಿ ಕ್ಷೇತ್ರ, ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೊಂದಿದೆ. ದೇಶ-ವಿದೇಶ ಹಾಗೂ ರಾಜ್ಯದ ನಾನಾ ಭಾಗಗಳಿಂದ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಅವರ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲು ಹೊಸ ಬಸ್‌ಗಳನ್ನು ನೀಡಲಾಗಿದೆ. ಪ್ರಯಾಣಿಕರು ಅವುಗಳ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಕೋರಿದರು.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಯೂ ಬಲಿಷ್ಠವಾಗುತ್ತಿದೆ. ನಿತ್ಯವೂ ಲಕ್ಷಾಂತರ ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಮುಖ್ಯವಾಗಿ ಬಡ ಮಹಿಳೆಯರ ಪ್ರಯಾಣಕ್ಕೆ ಅನುಕೂಲವಾಗಿದೆ. ಈ ಯೋಜನೆ, ಬಡವ- ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಹಿಳೆಗೂ ತಲುಪುತ್ತಿದೆ. ಇದು ಕಾಂಗ್ರೆಸ್‌ ಸರ್ಕಾರದ ಜನಪರ ಯೋಜನೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ತ್ವರಿತ ಸ್ಪಂದನೆ: ಸಾರಿಗೆ ಸಂಸ್ಥೆಯ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತರಬೇಕು. ಅವುಗಳ ತ್ವರಿತ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂಬರುವ ದಿನಗಳಲ್ಲಿ ಜಾರಿಗೆ ಬರಲಿವೆ ಎಂದರು. ಇದೇ ಸಂದರ್ಭದಲ್ಲಿ ಬಾದಾಮಿ ಮತ್ತು ಗುಳೇದಗುಡ್ಡ ಘಟಕಕ್ಕೆ 2 ನೂತನ ಬಸ್‌ ಸೇವೆಗೆ ಸ್ವತಃ ಶಾಸಕರು ಬಸ್‌ ಚಾಲನೆ ಮಾಡುವ ಮೂಲಕ ಚಾಲನೆ ನೀಡಿ ಎಲ್ಲರ ಗಮನ ಸೆಳೆದರು. ಬರುವ ದಿನಗಳಲ್ಲಿ ಎರಡು ಹೊಸ ಪಲ್ಲಕ್ಕಿ ಬಸ್‌ಗಳು ಬಾದಾಮಿ ಘಟಕಕ್ಕೆ ತರುವ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.

ಪುರಸಭೆ ಸದಸ್ಯ ಮಂಜು ಹೊಸಮನಿ, ಬಾದಾಮಿ ಘಟಕ ವ್ಯವಸ್ಥಾಪಕ ಕೃಷ್ಣಾ ಚವ್ಹಾಣ, ಗುಳೇದಗುಡ್ಡ ಘಟಕ ವ್ಯವಸ್ಥಾಪಕಿ ವಿದ್ಯಾ ನಾಯಕ, ಸಿಬ್ಬಂದಿ ಈರಪ್ಪ ನಾಯ್ಕರ, ನಬಿಸಾಬ ದಿಬ್ಬದಮನಿ, ಸಂಗಣ್ಣ ದೊಡಮನಿ, ಈಶಪ್ಪ ಪಟ್ಟಣಶೆಟ್ಟಿ, ರುದ್ರಪ್ಪ ಅಂಗಡಿ, ಶಿವುಕುಮಾರ ಚಿಮಲ್‌, ರವಿ ತಳವಾರ, ಡಿ.ವೈ.ಚನಗೌಡರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.