Rice: ಅಕ್ಕಿ ಉತ್ಪಾದನೆ ಕುಸಿತದ ಆತಂಕ
Team Udayavani, Oct 28, 2023, 9:58 PM IST
ನವದೆಹಲಿ: ದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅಕ್ಕಿ ಉತ್ಪಾದನೆ ಪ್ರಮಾಣ ಶೇ.3.35ಕ್ಕೆ ಇಳಿಕೆ ಆಗುವ ಸಾಧ್ಯತೆ ಇದೆ. ಕಳೆದ ವರ್ಷ 110 ಮಿಲಿಯ ಟನ್ ಅಕ್ಕಿ ಉತ್ಪಾದನೆಯಾಗಿದ್ದರೆ, ಪ್ರಸಕ್ತ ವರ್ಷ 106.31 ಮಿಲಿಯನ್ ಟನ್ ಅಕ್ಕಿ ಸಿಗುವ ಬಗ್ಗೆ ಕೇಂದ್ರ ಸರ್ಕಾರದ ವತಿಯಿಂದಲೇ ಬಿಡುಗಡೆ ಮಾಡಲಾಗಿರುವ ಮಾಹಿತಿಯಲ್ಲಿ ಉಲ್ಲೇಖೀಸಲಾಗಿದೆ.
ಅಕ್ಕಿ ಮಾತ್ರವಲ್ಲದೆ, ಉದ್ದು, ಹೆಸರು, ಸೋಯಾಬೀನ್, ಕಬ್ಬಿನ ಉತ್ಪಾದನೆಯಲ್ಲೂ ಕುಸಿತ ಕಾಣುವ ಸಾಧ್ಯತೆಗಳು ಇವೆ. ಆಗಸ್ಟ್ನಲ್ಲಿ ಹೆಚ್ಚಿನ ಅವಧಿಯಲ್ಲಿ ಮಳೆಯಾಗದೇ ಇದ್ದದ್ದು ಬೆಳೆ ಪ್ರಮಾಣ ಕುಂಠಿತವಾಗಲು ಕಾರಣ. ಮಳೆಗಾಲ ವಿಳಂಬವಾಗಿ ಶುರುವಾಗಿದ್ದರೂ, ಜುಲೈನಲ್ಲಿ ಬಿರುಸಾಗಿತ್ತು. ಆದರೆ, ಆಗಸ್ಟ್ನಲ್ಲಿ ಕಳೆಗುಂದಿತ್ತು. ಪ್ರಸಕ್ತ ವರ್ಷ ಭತ್ತದ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕಿಂತ 2 ಲಕ್ಷ ಹೆಕ್ಟೇರ್ಗಿಂತ ಹೆಚ್ಚಾಗಿದೆ. ಸರಿ ಸುಮಾರು 4.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ.
ಈ ಹಿಂದೆ ಅಮೆರಿಕದ ಕೃಷಿ ಸಚಿವಾಲಯ ದೇಶದ ಆಹಾರ ಧಾನ್ಯಗಳ ಉತ್ಪಾದನೆ ಬಗ್ಗೆ ನಡೆಸಿದ್ದ ಅಧ್ಯಯನದಲ್ಲಿ ಕೂಡ ಅಕ್ಕಿಯ ಉತ್ಪಾದನೆ 2 ಮಿಲಿಯ ಟನ್ ಆಗಬಹುದು ಎಂದು ಮುನ್ಸೂಚನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ