ದುಬೈನಿಂದ ಬಂದ ವ್ಯಕ್ತಿಗೆ ಕೊರೊನಾ:ಒಮಿಕ್ರಾನ್‌ ಭೀತಿ; ಮಾಸ್ಕ್ ಧರಿಸದಿದ್ದರೆ ದಂಡ


Team Udayavani, Dec 8, 2021, 11:45 AM IST

omicron

ಕಲಬುರಗಿ: ಕೊರೊನಾ ಮತ್ತು ಅದರ ರೂಪಾಂತರ ಒಮಿಕ್ರಾನ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಪರಿಷ್ಕೃತ ಕೋವಿಡ್‌ ಮಾರ್ಗಸೂಚಿ ಜಾರಿಗೊಳಿಸಿದ್ದು, ಅದರಂತೆ ಜಿಲ್ಲೆಯಲ್ಲಿ ಮಾರ್ಗಸೂಚಿ ಪಾಲನೆಯೊಂದಿಗೆ ಸಭೆ-ಸಮಾರಂಭಗಲ್ಲಿ 500 ಜನ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಿ ಜಿಲ್ಲಾ ಧಿಕಾರಿ ವಿ.ವಿ.ಜ್ಯೋತ್ಸ್ನಾ ಆದೇಶ ಹೊರಡಿಸಿದ್ದಾರೆ.

ಮಾಸ್ಕ್ ಧರಿಸುವಿಕೆಯೇ ಅತ್ಯವಶ್ಯಕವಾದ ಸೋಂಕು ನಿಯಂತ್ರಣದ ಕ್ರಮವಾಗಿದೆ. ಯಾವುದೇ ವ್ಯಕ್ತಿ ಮಾಸ್ಕ್ ಧರಿಸದಿದ್ದಲ್ಲಿ ನಗರ ಪಾಲಿಕೆ ಪ್ರದೇಶಗಳಲ್ಲಿ 250ರೂ. ಹಾಗೂ ಇನ್ನಿತರ ಪ್ರದೇಶಗಳಲ್ಲಿ 100ರೂ.ಗಳ ದಂಡ ವಿ ಧಿಸಲಾಗುವುದು. ಜಿಲ್ಲೆಯ ಮಹಾರಾಷ್ಟ್ರ ರಾಜ್ಯಗಳಿಗೆ ಹೊಂದಿಕೊಂಡಿರುವ ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚಿನ ಕಣ್ಗಾವಲು ಇರಿಸುವುದನ್ನು ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳು, ಹಬ್ಬಗಳು ಹಾಗೂ ಸಮಾರಂಭಗಳನ್ನು ಮುಂಜಾಗ್ರತವಾಗಿ ಜನವರಿ 15ರ ವರೆಗೆ ಮುಂದೂಡುವಂತೆ ಸೂಚನೆ ನೀಡಲಾಗಿದೆ.

ಶಾಲೆ-ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆಯಬೇಕು ಎಂದು ತಿಳಿಸಿದ್ದಾರೆ. ಪರೀಕ್ಷೆ-ಪತ್ತೆ-ಚಿಕಿತ್ಸೆ-ಲಸಿಕಾಕರಣ ಮತ್ತು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುರಿಸಬೇಕು. ಸೋಂಕು ಹರಡುವುದನ್ನು ತಡೆಗಟ್ಟಲು ಹೆಚ್ಚಿನ ಪ್ರಕರಣಗಳು ಕಂಡು ಬರುವ ವಲಯ, ಪ್ರದೇಶಗಳಲ್ಲಿ ಕಠಿಣವಾದ ಸೂಕ್ಷ್ಮನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು, 65 ವರ್ಷ ಮೀರಿದ ಹಿರಿಯ ನಾಗರಿಕರು ಹಾಗೂ ಸಹವರ್ತಿ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸರ್ಕಾರದಿಂದ ಕಡ್ಡಾಯವಾಗಿ ತಪಾಸಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ಸರ್ಕಾರಿ ನೌಕರರು ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದುಕೊಳ್ಳಬೇಕು. ಎರಡು ಡೋಸ್‌ ಲಸಿಕೆ ಪಡೆದಿರುವ ವ್ಯಕ್ತಿಗಳಿಗೆ ಮಾತ್ರ ಮಾಲ್‌ಗ‌ಳು, ಸಿನಿಮಾ ಹಾಲ್‌ ಹಾಗೂ ಚಿತ್ರ ಮಂದಿರಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ದುಬೈನಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್‌

ದುಬೈನಿಂದ ಕಲಬುರಗಿ ನಗರಕ್ಕೆ ಆಗಮಿಸಿದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್‌ ಸೋಂಕು ಪತ್ತೆಯಾಗಿದ್ದು, ರೂಪಾಂತರಿ ಒಮಿಕ್ರಾನ್‌ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಜಿನೋಮ್‌ ಸಿಕ್ವೆನ್ಸಿಂಗ್‌ ಪರೀಕ್ಷೆಗಾಗಿ ಬೆಂಗಳೂರಿಗೆ ಗಂಟಲು ದ್ರವಣ ಮಾದರಿ ರವಾನಿಸಲಾಗಿದೆ.

ಇಲ್ಲಿನ ತಾಜನಗರದ 36 ವರ್ಷದ ನಿವಾಸಿ ದುಬೈನಿಂದ ಮರಳಿ ಬಂದಿದ್ದು, ಕಳೆದ ಡಿ.3ರಂದು ಅವರಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿತ್ತು. ಆದ್ದರಿಂದ ಜಿಮ್ಸ್‌ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದೇಶದಿಂದ ಬಂದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಒಮಿಕ್ರಾನ್‌ ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ. ವಿದೇಶದಿಂದ ಬರುವವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಕಡ್ಡಾಯವಾಗಿ ಒಮಿಕ್ರಾನ್‌ ಪರೀಕ್ಷೆ ಮಾಡಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ.

ದುಬೈಯಿಂದ ಬಂದಿರುವ ವ್ಯಕ್ತಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ಆದರೆ, ಈತನಿಗೆ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ. ಈತನ ಕುಟುಂಬದ ಹತ್ತು ಜನರಿಗೂ ಕೊರೊನಾ ಪತ್ತೆ ಪರೀಕ್ಷೆ ಮಾಡಲಾಗಿದ್ದು, ಎಲ್ಲರಿಗೂ ಕೊರೊನಾ ನೆಗೆಟಿವ್‌ ವರದಿ ಬಂದಿದೆ. ಈತ ವಿದೇಶದಿಂದ ಆಗಮಿಸಿರುವ ಹಿನ್ನೆಲೆಯಲ್ಲಿ ಗಂಟಲು ದ್ರವ ಮಾದರಿಯನ್ನು ಬೆಂಗಳೂರಿನ ಸಿಕ್ವೆನ್ಸಿಂಗ್‌ ಲ್ಯಾಬ್‌ಗ ಕಳುಹಿಸಲಾಗಿದೆ. ಈ ವರದಿ ಬಂದ ಬಳಿಕವೇ ನಿಖರ ಮಾಹಿತಿ ತಿಳಿಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಶರಣಬಸಪ್ಪ ಗಣಜಲಖೇಡ ಸ್ಪಷ್ಟಪಡಿಸಿದ್ದಾರೆ.

ಒಮಿಕ್ರಾನ್‌ ಭೀತಿ ಶುರುವಾದ ಬಳಿಕ ಇಲ್ಲಿಯ ವರೆಗೆ ವಿದೇಶದಿಂದ ಹೈದ್ರಾಬಾದ್‌ ವಿಮಾನ ನಿಲ್ದಾಣದ ಮೂಲಕ ಸುಮಾರು 25 ಜನರು ನಗರಕ್ಕೆ ಆಗಮಿಸಿದ್ದಾರೆ. ಇವರಲ್ಲಿ ಈ ವ್ಯಕ್ತಿಯನ್ನು ಹೊರತು ಪಡಿಸಿ ಬೇರ್ಯಾರಿಗೂ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ. ಲ್ಯಾಬ್‌ ಮೇಲ್ದರ್ಜೆಗೆ: ಕೊರೊನಾ ಮಹಾಮಾರಿ ರೂಪಾಂತರಿ ಈ ಒಮಿಕ್ರಾನ್‌ ಸೋಂಕು ಭೀತಿ ಹುಟ್ಟಿಸಿರುವ ಹಿನ್ನೆಲೆಯಲ್ಲಿ ನಗರದ ಜಿಮ್ಸ್‌ ಆಸ್ಪತ್ರೆಯಲ್ಲಿ ಲ್ಯಾಬ್‌ ಮೇಲ್ದರ್ಜೆಗೆ ಏರಿಸಲಾಗಿದೆ. ಎರಡೂ¾ರು ವಾರದಲ್ಲಿ ಒಮಿಕ್ರಾನ್‌ ಸೋಂಕು ಪತ್ತೆ ಕಾರ್ಯ ಆರಂಭವಾಗುವ ನಿರೀಕ್ಷೆ ಇದೆ.

ಸಿಕ್ವೆನ್ಸಿಂಗ್‌ ಪರೀಕ್ಷೆ ಮೂಲಕ ಮಾತ್ರ ಒಮಿಕ್ರಾನ್‌ ಸೋಂಕು ದೃಢಪಡಿಸಲು ಸಾಧ್ಯ. ಈ ನಿಟ್ಟಿನಲ್ಲಿ ಈಗಾಗಲೇ ಒಮಿಕ್ರಾನ್‌ ಪತ್ತೆಗೆ ಬೇಕಾದ ತಂತ್ರಜ್ಞಾನ ಅಳವಡಿಸಲಾಗಿದೆ. ತರಬೇತಿ ಪಡೆದ ಒಬ್ಬ ವಿಜ್ಞಾನಿ ಹಾಗೂ ಆರು ಸಿಬ್ಬಂದಿ ನಿಯೋಜಿಸಲಾಗಿದೆ. ಸರ್ಕಾರದ ಸೂಚನೆ ಬಂದ ತಕ್ಷಣವೇ ಲ್ಯಾಬ್‌ ಕಾರ್ಯಾರಂಭವಾಗಲಿದೆ ಎಂದು ಜಿಮ್ಸ್‌ ನಿರ್ದೇಶಕಿ ಡಾ| ಕವಿತಾ ಪಾಟೀಲ ಮಾಹಿತಿ ನೀಡಿದ್ದಾರೆ. ಕೊರೊನಾ ಸೋಂಕಿನ ರೂಪಾಂತರಿ ತಳಿಗಳಾದ ಡೆಲ್ಟಾ, ಒಮಿಕ್ರಾನ್‌ ಯಾವುದೇ ಪತ್ತೆಯಾದರೂ ಅದನ್ನು ಕೊರೊನಾದಷ್ಟೇ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಯಾವ ಸೋಂಕು ಕಾಣಿಸಿಕೊಂಡರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವ ನಿಯಮಗಳನ್ನೇ ಪಾಲಿಸಬೇಕಾಗುತ್ತದೆ. ಆದ್ದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದನ್ನು ಮರೆಯಬಾರದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಟಾಪ್ ನ್ಯೂಸ್

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.